ಸಿ.ಇ.ಸಿ. ಜ್ಞಾನೇಶ್ ಕುಮಾರ್ವ ಜಾಕ್ಕೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Sep 27, 2026, 01:30 AM IST
 | Kannada Prabha

ಸಾರಾಂಶ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ವಿಚಾರದಲ್ಲಿ ಏಕಪಕ್ಷೀಯ ನಡೆ ಖಂಡಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಸಿಪಿಐ (ಎಂಎಲ್) ಲಿಬರೇಶನ್ ತಾಲೂಕು ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ರಾಯಚೂರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ವಿಚಾರದಲ್ಲಿ ಏಕಪಕ್ಷೀಯ ನಡೆ ಖಂಡಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಸಿಪಿಐ (ಎಂಎಲ್) ಲಿಬರೇಶನ್ ತಾಲೂಕು ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸ್ಥಳೀಯ ಟಿಪ್ಪುಸುಲ್ತಾನ್‌ ಉದ್ಯಾನವನದಲ್ಲಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಮುಖಂಡರು.ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿದರು.

ಚುನಾವಣಾ ಆಯೋಗದ ಕಾರ್ಯವೈಖರಿ ಮತ್ತು ಎಸ್‌ಐಆರ್ ಪ್ರಕ್ರಿಯೆಯ ಪಾರದರ್ಶಕತೆ ಕುರಿತು ಹಲವು ಪ್ರಶ್ನೆಗಳು ಮೂಡಿವೆ. ಮತದಾರರ ನೋಂದಣಿ, ಹೆಸರುಗಳ ಸೇರ್ಪಡೆ, ಅಳಿಸುವಿಕೆ ಹಾಗೂ ಮರುಸ್ಥಾಪನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ಧಾರಗಳು ಪಾರದರ್ಶಕವಾಗಿರಬೇಕು. ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಕೈಬಿಡುವಂತಾಗಬಾರದು. ವಿಶೇಷವಾಗಿ ಬಡವರು, ಕಾರ್ಮಿಕರು ಹಾಗೂ ದುರ್ಬಲ ವರ್ಗದ ಜನರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಭಾರತೀಯ ಚುನಾವಣಾ ಆಯೋಗದ ಸ್ವತಂತ್ರ, ನಿಷ್ಪಕ್ಷಪಾತ ಹಾಗೂ ಪ್ರಜಾಸತ್ತಾತ್ಮಕ ಕಾರ್ಯ ನಿರ್ವಹಣೆಯ ಮೇಲಿನ ಜನರ ವಿಶ್ವಾಸವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಚುನಾವಣಾ ಆಯುಕ್ತರ ನೇಮಕಾತಿ ವ್ಯವಸ್ಥೆಯಲ್ಲೂ ಬದಲಾವಣೆ ತರಬೇಕು. ಪ್ರಧಾನಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಆಯ್ಕೆ ಸಮಿತಿಯ ಮಾದರಿಯ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಸಿಇಸಿ ಜ್ಞಾನೇಶ್ ಕುಮಾರ್ ರನ್ನು ವಜಾಗೊಳಿಸಬೇಕು,ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ತಕ್ಷಣ ತಡೆಹಿಡಿಯಬೇಕು, ತಪ್ಪಾಗಿ ಮತದಾರರ ಪಟ್ಟಿಯಿಂದ ಕೈಬಿಡಲಾದ ಅರ್ಹ ಮತದಾರರ ಹೆಸರುಗಳನ್ನು ಮರುಸ್ಥಾಪಿಸಬೇಕು, ಚುನಾವಣಾ ಆಯೋಗದ ಕಾರ್ಯವೈಖರಿಯಲ್ಲಿ ಪಾರ ದರ್ಶಕತೆ ಮತ್ತು ವಿಶ್ವಾಸಾರ್ಹತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಪ್ರತಿಭಟನೆಯಲ್ಲಿ ಪಕ್ಷದ ತಾಲೂಕು ಕಾರ್ಯದರ್ಶಿ ಅಜೀಜ್ ಜಾಗೀರ್ದಾರ್, ಮುಖಂಡರಾದ ಭೀಮಯ್ಯ, ಖಾದರ್ ಅಹ್ಮದ್, ನಿಸಾರ್, ಜಗದೀಶ್, ಮಹೇಂದ್ರ, ಹನೀಫ್ ಅಬಕಾರಿ, ಎಲ್ಲಪ್ಪ, ವೀರೇಶ್, ಸಣ್ಣ ನರಸಪ್ಪ ಹಾಗೂ ಮಾರಣ್ಣ ಸೇರಿ ಅನೇಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿರತೆ ಹಾವಳಿ ಗ್ರಾಮಸ್ಥರ ಆಕ್ರೋಶ ಸಾಕು ಪ್ರಾಣಿಗಳ ಮೇಲೆ ದಾಳಿ
ಜನಪದ ಸಾಹಿತ್ಯಕ್ಕೆ ಪ್ಲೀಟ್ ಕೊಡುಗೆ ಅನನ್ಯ: ಕೊಡಂಬಲ್