ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್ ವಾಪಸ್ ಪಡೆಯಲು ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Aug 02, 2026, 02:45 AM IST
ಎಸ್ಡಿಪಿಐ ಪ್ರತಿಭಟನೆ | Kannada Prabha

ಸಾರಾಂಶ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಪ್ರಶ್ನಿಸಿದ ಯುವಜನರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಕೊಡಗು ಜಿಲ್ಲಾ ಎಸ್‌ಡಿಪಿಐ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು

ಕನ್ನಡಪ್ರಭ ವಾರ್ತೆ ಮಡಿಕೇರಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಪ್ರಶ್ನಿಸಿದ ಯುವಜನರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಕೊಡಗು ಜಿಲ್ಲಾ ಎಸ್‌ಡಿಪಿಐ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಇಂದಿರಾ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಬಿಜೆಪಿಯ ಅಂಗ ಸಂಸ್ಥೆ ಆರೆಸ್ಸೆಸ್ ಮತ್ತು ಕೇಂದ್ರದ ಆಡಳಿತಾರೂಢ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಜಾತಿ ಭೇದ ಮರೆತು ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯಲ್ಲಿ ಇಡೀ ದೇಶದ ಯುವಜನತೆ ಪಾಲ್ಗೊಂಡಿದ್ದು, ಬಿಜೆಪಿಗೆ ಹತಾಶೆ ತಂದಿದೆ ಎಂದರು.

ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ಮನ್ಸೂರ್, ಅಬ್ದುಲ್ಲಾ ಅಡ್ಕಾರ್, ಮೇರಿ ವೇಗಸ್, ರಜಾಕ್ ಮತ್ತಿತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನುಷ್ಯನ ಅಸ್ತಿತ್ವವೇ ಪ್ರಕೃತಿ ಮೇಲಿದೆ
ಡಾ.ಮಹಾಂತ ಶ್ರೀಗಳಿಂದ ಸಮಾಜದಲ್ಲಿ ದೊಡ್ಡ ಪರಿವರ್ತನೆ