ವೈದ್ಯರ ಕೊರತೆ ನೀಗಿಸಲು ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Jul 21, 2024, 01:21 AM IST
ಹರಪನಹಳ್ಳಿಯಲ್ಲಿ ಸಿಪಿಐ ಕಾರ್ಯಕರ್ತರು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಸೇರಿದಂತೆ ಆರೋಗ್ಯ ಕ್ಷೇತ್ರಗಳಲ್ಲಿಯ ವಿವಿಧ ಸಮಸ್ಯೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡಿ ಆರೋಗ್ಯಾಧಿಕಾರಿ ಯವರಿಗೆ ಮನವಿ ಪತ್ರ ಸಲ್ಲಿಸಿದರು. | Kannada Prabha

ಸಾರಾಂಶ

ಹರಪನಹಳ್ಳಿ ತಾಲೂಕು ಕೇಂದದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಸರ್ಕಾರಿ ಮಹಿಳೆಯರ ಹೆರಿಗೆ ಆಸ್ಪತ್ರೆ ತೆರೆಯಬೇಕು.

ಹರಪನಹಳ್ಳಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ನೀಗಿಸಲು ಆಗ್ರಹಿಸಿ ಇಲ್ಲಿಯ ಆರೋಗ್ಯಾಧಿಕಾರಿ ಕಚೇರಿ ಎದುರು ಭಾರತ ಕಮುನಿಸ್ಟ್‌ ಪಕ್ಷದ ತಾಲೂಕು ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಹರಪನಹಳ್ಳಿ ತಾಲೂಕು ಕೇಂದದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಸರ್ಕಾರಿ ಮಹಿಳೆಯರ ಹೆರಿಗೆ ಆಸ್ಪತ್ರೆ ತೆರೆಯಬೇಕು. 17 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 10 ವೈದ್ಯರನ್ನು ಭರ್ತಿ ಮಾಡಬೇಕು. ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ 6 ವೈದ್ಯರನ್ನು ಭರ್ತಿ ಮಾಡಬೇಕು. ಸಮುದಾಯ ಆರೋಗ್ಯ ಕೇಂದ್ರಗಳಾದ ಅರಸೀಕೆರೆ ಮತ್ತು ತೆಲಿಗಿ ಕೇಂದ್ರಗಳಲ್ಲಿ 10 ವೈದ್ಯರು ಇರಬೇಕಾಗಿದ್ದು, ಮೂವರು ಮಾತ್ರ ವೈದ್ಯರಿದ್ದಾರೆ. ಇನ್ನುಳಿದ ಖಾಲಿ ಇರುವ 7 ವೈದ್ಯರನ್ನು ಭರ್ತಿ ಮಾಡಬೇಕು. ಗರ್ಭಿಣಿ ಮಹಿಳೆಯರಿಗೆ ಸ್ಕಾನಿಂಗ್ ಯಂತ್ರ ತೆರೆಯಬೇಕು. ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇಸಿಜಿ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತೆರೆಯಬೇಕು. ಹಲುವಾಗಲು, ಮತ್ತಿಹಳ್ಳಿ, ಉಚ್ಚಂಗಿದುರ್ಗ, ಚಿಗಟೇರಿ ಹೆಚ್ಚು ಜನಸಂಖ್ಯೆವಿರುವ ಗ್ರಾಮಗಳಾಗಿವೆ. ಇಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಇವುಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆರಿಸಬೇಕು. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸ್ಟಾಫ್ ನರ್ಸ್‌ಗಳಿಗೆ ಹಾಗೂ ಸಿಬ್ಬಂದಿಗೆ ವಸತಿಗೃಹಗಳನ್ನು ನಿರ್ಮಾಣ ಮಾಡಬೇಕು.

ಸಿಪಿಐ ಕಾರ್ಯದರ್ಶಿ ಗುಡಿಹಳ್ಳಿ ಹಾಲೇಶ್, ವಿಜಯನಗರ ಜಿಲ್ಲಾ ಉಸ್ತುವಾರಿ ಎಚ್.ಎಂ. ಸಂತೋಷ, ಮುಖಂಡರಾದ ಬಳಿಗನೂರು ಕೊಟ್ರೇಶ್, ರಮೇಶ ನಾಯ್ಕ ದಾದಾಪೀರ್, ಪಂಪಣ್ಣ, ಎ.ಪಿ. ಪುಷ್ಪ, ವಿಶಾಲಮ್ಮ, ಟಿ.ಎಚ್. ಅರುಣ, ಹಗರಿಗುಡಿಹಳ್ಳಿ ಶಿವರಾಜ್, ಎಚ್.ಬಸವರಾಜ, ರಾಗಿಮಸಲವಾಡ ಹನುಮಂತಪ್ಪ ಪಾಲ್ಗೊಂಡಿದ್ದರು.

ಹರಪನಹಳ್ಳಿಯಲ್ಲಿ ಸಿಪಿಐ ಕಾರ್ಯಕರ್ತರು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಸೇರಿದಂತೆ ಆರೋಗ್ಯ ಕ್ಷೇತ್ರಗಳಲ್ಲಿಯ ವಿವಿಧ ಸಮಸ್ಯೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡಿ ಆರೋಗ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ವಿವಾದ
ಅಸ್ಸಾಂ ಚುನಾವಣೆ ವೀಕ್ಷಕರಾಗಿ ಡಿಕೇಶಿ ನೇಮಕ