-ವಿಬಿಜಿ ರಾಮ್‌ಜಿ ಯೋಜನೆಯಡಿ ಸಮುದಾಯ ಆಧಾರಿತ ಕಾಮಗಾರಿ ಕೈಗೊಳ್ಳಲು ಒತ್ತಾಯ
ಕನ್ನಡಪ್ರಭ ವಾರ್ತೆ ಚಿತ್ತಾಪುರ
ಇಂಗಳಗಿ ಗ್ರಾಮದಲ್ಲಿ ವಿಬಿಜಿ ರಾಮ್‌ಜಿ ಯೊಜನೆಯಡಿ ಕಾರ್ಮಿಕರಿಗೆ ಕೆಲಸ ನೀಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಗ್ರಾಪಂ ಎದುರು ಪ್ರತಿಭಟನೆ ನಡೆಸಿದರು.ಇಂಗಳಗಿ ಗ್ರಾಮದಲ್ಲಿ ೧೦೦೦ ಕೂಲಿ ಕಾರ್ಮಿಕರು ವಿಬಿಜಿ ರಾಮ್ ಜಿ ಯೋಜನೆಯಡಿ ಸಮರ್ಪಕವಾಗಿ ಕೆಲಸ ದೊರೆಯದ ಕಾರಣ ಕಾರ್ಮಿಕರು ಉದ್ಯೋಗ ಅರಸಿ ಮಹಾನಗರಗಳಿಗೆ ಗುಳೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಬದುಕು ಸಾಗಿಸುವುದಕ್ಕೆ ಕಷ್ಟಕರವಾಗಿದೆ, ಕೆಲಸ ನೀಡದಿದ್ದರೆ ಮನೆಯ ಜವಬ್ದಾರಿ ಸರ್ಕಾರವೇ ನೊಡಿಕೊಳ್ಳಲಿ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.
ಆದ್ದರಿಂದ, ಸಮುದಾಯ ಆಧಾರಿತ ಕಾಮಗಾರಿ ರೂಪಿಸಿ ಕಾರ್ಮಿಕರಿಗೆ ಕೆಲಸ ನೀಡಬೇಕು ಎಂದು ಪ್ರತಿಭಟನೆಕಾರರು ಆಗ್ರಹಿಸಿದರು.
ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಕೂಲಿ ಕಾರ್ಮಿಕರಿಗೆ ಉದ್ಯೊಗ ದೊರೆಯುವಂತೆ ತುರ್ತುಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜಿಪಂ ಎದುರು ಪ್ರತಿಭಟನೆ ನಡೆಸಲಾಗುವದು ಎಂದು ಸಂಘ ಎಚ್ಚರಿಕೆ ನೀಡಿದೆ.
ಪಂಚಾಯತಿ ಕಾರ್ಯದರ್ಶಿ ಸಂಗಮೇಶ ಹಿರೆಮಠ ಮನವಿ ಸ್ವೀಕರಿಸಿ ಶೀಘ್ರದಲ್ಲಿ ಕಾರ್ಮಿಕರಿಗೆ ಕೆಲಸ ನೀಡಲಾಗುತ್ತದೆ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.
ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಕೂಲಿ ಕಾರ್ಮಿಕರಿಗೆ ವಿಬಿಜಿ ರಾಮ್‌ಜಿ ಯೊಜನೆಯಡಿ ಕೆಲಸ ನೀಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಪಂಚಾಯತಿ ಎದುರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.