ವಿವಿಧ ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರಿಂದ ಪ್ರತಿಭಟನಾ ಪ್ರದರ್ಶನ

KannadaprabhaNewsNetwork |  
Published : Oct 17, 2024, 12:00 AM IST
ಮಂಗಳೂರಲ್ಲಿ ಕಟ್ಟಡ ಕಾರ್ಮಿಕರ ಪ್ರತಿಭಟನೆ | Kannada Prabha

ಸಾರಾಂಶ

ಕಟ್ಟಡ ಕಾರ್ಮಿಕರ ಜಿಲ್ಲಾ ಮುಖಂಡರಾದ ರವಿಚಂದ್ರ ಕೊಂಚಾಡಿ, ಜಯಂತ್ ನಾಯಕ್, ಚಂದ್ರಹಾಸ ಪಿಲಾರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ರಾಜ್ಯ ವ್ಯಾಪಿ ಹೋರಾಟದ ಭಾಗವಾಗಿ ಕಟ್ಟಡ ಕಾರ್ಮಿಕರ ಅಖಿಲ ಭಾರತ ಮತ್ತು ರಾಜ್ಯಮಟ್ಟದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಗಳೂರಿನ ಮಿನಿ ವಿಧಾನಸೌಧದ ಎದುರು ಬುಧವಾರ ಪ್ರತಿಭಟನಾ ಪ್ರದರ್ಶನ ನಡೆಯತು.

ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಮಾತನಾಡಿ, ಕಟ್ಟಡ ಕಾರ್ಮಿಕರಿಗೆ ಎರಡು ತಿಂಗಳಿನಿಂದ ಬಾಕಿಯಾದ ಮಾಸಿಕ ಪಿಂಚಣಿ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿದರು

ಕಟ್ಟಡ ಕಾರ್ಮಿಕರ ಜಿಲ್ಲಾ ಮುಖಂಡರಾದ ರವಿಚಂದ್ರ ಕೊಂಚಾಡಿ, ಜಯಂತ್ ನಾಯಕ್, ಚಂದ್ರಹಾಸ ಪಿಲಾರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕರು
ಸಿಲಿಂಡರ್ ದರ ಹೆಚ್ಚಳ: ಮಹಿಳಾ ಕಾಂಗ್ರೆಸ್ ಪ್ರತಿಭಟನೆ