ಚಿರತೆ ದಾಳಿಗೆ ಬಾಲಕ ಬಲಿ: ರೈತರ ಪ್ರತಿಭಟನೆ

KannadaprabhaNewsNetwork |  
Published : May 12, 2026, 01:45 AM IST
ಪಾದಯಾತ್ರಿಗಳಿಗೆ ನಿರಂತರ ಚಿರತೆ ದಾಳಿ ರೈತ ಸಂಘದಿಂದ ಪ್ರತಿಭಟನೆ | Kannada Prabha

ಸಾರಾಂಶ

ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಕಾಲ್ನಡಿಗೆಯಲ್ಲಿ ತೆರಳುವಾಗ ಇಂಡಿಗನತ್ತ ಗ್ರಾಮದಲ್ಲಿ ಚಿರತೆಯೊಂದು ಬಾಲಕ ಹರ್ಷಿತ್‌ನನ್ನು ಹೊತ್ತೊಯ್ದು ಕೊಂದು ಹಾಕಿದ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹೊಮ್ಮಿದೆ.

- ಅರಣ್ಯಾಧಿಕಾರಿಗಳ ವಿರುದ್ಧ ಎಂಎಂಹಿಲ್ಸ್‌ನಲ್ಲಿ ಆಕ್ರೋಶ

- ಸರ್ಕಾರ, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗುತ್ತ ಧರಣಿ

---

ಕನ್ನಡಪ್ರಭ ವಾರ್ತೆ ಹನೂರು

ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಕಾಲ್ನಡಿಗೆಯಲ್ಲಿ ತೆರಳುವಾಗ ಇಂಡಿಗನತ್ತ ಗ್ರಾಮದಲ್ಲಿ ಚಿರತೆಯೊಂದು ಬಾಲಕ ಹರ್ಷಿತ್‌ನನ್ನು ಹೊತ್ತೊಯ್ದು ಕೊಂದು ಹಾಕಿದ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹೊಮ್ಮಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ರೈತ ಸಂಘಟನೆಗಳು ಅಧಿಕಾರಿಗಳ ಕಾರ್ಯತತ್ಪರತೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಸುಡು ಬಿಸಿಲಿನಲ್ಲಿಯೇ ಧಿಕ್ಕಾರ ಘೋಷಣೆಗಳನ್ನು ಕೂಗುತ್ತ ಪ್ರತಿಭಟಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಅಧ್ಯಕ್ಷ ಚಂಗಡಿ ಕರಿಯಪ್ಪ ಮಾತನಾಡಿ, ಬೆಟ್ಟಕ್ಕೆ ಬರುವ ಭಕ್ತರಿಗೆ ರಕ್ಷಣೆ ಇಲ್ಲದಂತಾಗಿದೆ. ಕ್ರೂರ ಪ್ರಾಣಿಗಳ ಹಾವಳಿಗೆ 2 ಜೀವಗಳು ಬಲಿಯಾಗಿ, ಓರ್ವ ತೀವ್ರವಾಗಿ ಗಾಯಗೊಂಡಿದ್ದಾರೆ. ನಾಗಮಲೆಗೆ ತೆರಳುವಾಗ ಅರಣ್ಯ ಇಲಾಖೆ 200 ರು. ಶುಲ್ಕ ಜೊತೆಗೆ ಹೆಚ್ಚುವರಿ ಹಣವನ್ನು ವಸೂಲಿ ಮಾಡುತ್ತಿದೆ. ಆದರೆ ಮೂಲಸೌಕರ್ಯ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದರು.

ಡಿಸಿಎಫ್‌ ಭೇಟಿ:ಕಾವೇರಿ ವನ್ಯಧಾಮದ ಡಿಸಿಎಫ್‌ ಸುರೇಂದ್ರ ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು. ಈಗ ತಾತ್ಕಾಲಿಕವಾಗಿ ಚಾರಣ ನಿಷೇಧಿಸಲಾಗಿದೆ. ನಾಗಮಲೆಗೆ ತೆರಳುವ ಮಾರ್ಗದಲ್ಲಿ ರಸ್ತೆ ನಿರ್ಮಿಸಿ, ಗೈಡ್‌ಗಳನ್ನು ನೇಮಿಸಿ ಭಕ್ತರಿಗೆ ಅವಕಾಶ ಕಲ್ಪಿಸಲಾಗುವುದು. ಅದೇ ರೀತಿ ಇಂಡಿಗನತ್ತ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದು, ಮುಂದಿನ ದಿನಗಳಲ್ಲಿ ಕಲ್ಪಿಸಲಾಗುತ್ತದೆ ಎಂದು ಭರವಸೆ ಕೊಟ್ಟರು.

ಇದೇ ವೇಳೆ ಅರಣ್ಯ ಅಧಿಕಾರಿಗಳ ದುರ್ವರ್ತನೆ, ದೂರುಗಳಿದ್ದರೆ ತಿಳಿಸಿ, ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

---11ಸಿಎಚ್ಎನ್‌13

ಮಲೆ ಮಹದೇಶ್ವರ ಬೆಟ್ಟದಲ್ಲಿ ಅರಣ್ಯ ಇಲಾಖೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಯಿತು.

---11ಸಿಎಚ್ಎನ್‌14

ನಾಗಮಲೆಗೆ ತೆರಳುವ ಭಕ್ತರಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಡಿಸಿಎಫ್ ಸುರೇಂದ್ರ ಭರವಸೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೇರುಕುಪ್ಪೆ ಹಾಲು ಉತ್ಪಾದಕರ ಮಹಿಳಾ ಸಂಘ ಉದ್ಘಾಟನೆ
ಬೇಲೂರು ಪುರಸಭೆ ಅಧ್ಯಕ್ಷರಾಗಿ ಅಕ್ರಮ್ ಶರೀಫ್ ಆಯ್ಕೆ