ನ.30ರವರೆಗೆ ನೀರು ಹರಿಸದಿದ್ದರೆ ಪ್ರತಿಭಟನೆ: ಮರಿಹುಚ್ಚೇಶ್ವರ ಸ್ವಾಮೀಜಿ

KannadaprabhaNewsNetwork |  
Published : Oct 26, 2026, 01:15 AM IST
ನಾರಾಯಣಪುರ ಎಡದಂಡೆ ಹಾಗೂ ಬಲದಂಡೆ ಮುಖ್ಯ ಕಾಲುವೆಗಳಿಗೆ ನವೆಂಬರ್ 30ರವರೆಗೆ ನಿರಂತರವಾಗಿ ನೀರು ಹರಿಸುವಂತೆ ಆಗ್ರಹಿಸಿ, ಭಾರತೀಯ ಕೃಷಿಕ ಸಮಾಜದ ಕರ್ನಾಟಕ ಘಟಕದ ವತಿಯಿಂದ ಶನಿವಾರ ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ ರೈತರ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ನಾರಾಯಣಪುರ ಎಡದಂಡೆ ಹಾಗೂ ಬಲದಂಡೆ ಮುಖ್ಯ ಕಾಲುವೆಗಳಿಗೆ ನ.30ರವರೆಗೆ ನಿರಂತರವಾಗಿ ನೀರು ಹರಿಸುವಂತೆ ಆಗ್ರಹಿಸಿ, ಭಾರತೀಯ ಕೃಷಿಕ ಸಮಾಜದ ಕರ್ನಾಟಕ ಘಟಕದ ವತಿಯಿಂದ ಶನಿವಾರ ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ ರೈತರ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಹುಣಸಗಿ

ನಾರಾಯಣಪುರ ಎಡದಂಡೆ ಹಾಗೂ ಬಲದಂಡೆ ಮುಖ್ಯ ಕಾಲುವೆಗಳಿಗೆ ನ.30ರವರೆಗೆ ನಿರಂತರವಾಗಿ ನೀರು ಹರಿಸುವಂತೆ ಆಗ್ರಹಿಸಿ, ಭಾರತೀಯ ಕೃಷಿಕ ಸಮಾಜದ ಕರ್ನಾಟಕ ಘಟಕದ ವತಿಯಿಂದ ಶನಿವಾರ ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ ರೈತರ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಗುಳಬಾಳ ಗ್ರಾಮದ ರಾಮಲಿಂಗೇಶ್ವರ ಮಠದ ಪೂಜ್ಯ ಮರಿಹುಚ್ಚೇಶ್ವರ ಸ್ವಾಮೀಜಿ ಮಾತನಾಡಿ, ನ.30ರವರೆಗೆ ಕಾಲುವೆಗಳಿಗೆ ನೀರು ಹರಿಸದಿದ್ದರೆ, ಸ್ವಾಮೀಜಿಗಳೇ ಜಲಾಶಯದೊಳಗೆ ಕುಳಿತು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರೈತರ ಕಣ್ಣಲ್ಲಿ ಕಣ್ಣೀರು ತರಿಸುವ ಕೆಲಸವನ್ನು ಸರ್ಕಾರ ಮಾಡಬಾರದು. ಬದಲಾಗಿ, ರೈತರ ಹಿತ ಕಾಪಾಡಿ ಸಂಕಷ್ಟದ ಸಮಯದಲ್ಲಿ ಅವರಿಗೆ ನೆರವಾಗಬೇಕು. ಈಗಾಗಲೇ ಸಮರ್ಪಕವಾಗಿ ನೀರು ದೊರೆಯದೆ ಹಲವು ರೈತರ ಬೆಳೆಗಳು ಒಣಗುತ್ತಿವೆ. ಅದರಲ್ಲೂ ಕಾಲುವೆಗಳ ಕೊನೆಯ ಭಾಗದ ರೈತರಿಗೆ ನೀರು ತಲುಪದಿರುವುದು ಆತಂಕಕಾರಿ ಸಂಗತಿ ಎಂದು ಹೇಳಿದರು.

ಬಲಶೆಟ್ಟಿಹಾಳ ಗ್ರಾಮದ ಬಸವಲಿಂಗ ಶಿವಯೋಗಿಗಳ ವಿರಕ್ತಮಠದ ಸಿದ್ದಲಿಂಗ ಮಹಾಸ್ವಾಮೀಜಿ ಮಾತನಾಡಿ, ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತರು ಬೆಳೆ ಉಳಿಸಿಕೊಳ್ಳಲು ಹೋರಾಟ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ವಾರಬಂಧಿ ಪದ್ಧತಿ ಅನುಸರಿಸುವ ಬದಲು, ಎಡದಂಡೆ ಹಾಗೂ ಬಲದಂಡೆ ಮುಖ್ಯ ಕಾಲುವೆಗಳಿಗೆ ನಿರಂತರವಾಗಿ ನೀರು ಹರಿಸಬೇಕು. ಕೊನೇ ಭಾಗದ ರೈತರಿಗೂ ಸಮರ್ಪಕವಾಗಿ ನೀರು ತಲುಪುವಂತೆ ಜಲಸಂಪನ್ಮೂಲ ಮೇಲೆ ಜವಾಬ್ದಾರಿ ಹೆಚ್ಚಿಸಿದೆ. ಹೀಗಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೊಡೇಕಲ್ ದುರದುಂಡೇಶ್ವರ ಮಠದ ಪೂಜ್ಯ ಶಿವಕುಮಾರ ಮಹಾಸ್ವಾಮಿ ಹಾಗೂ ಅಗತೀರ್ಥ ಶ್ರೀ ಮಠದ ಪೂಜ್ಯ ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮಿ ಮಾತನಾಡಿ, ನಿರಂತರ ನೀರು ಹರಿಸಿ ರೈತರ ಬೆಳೆಗಳನ್ನು ಉಳಿಸುವ ಕೆಲಸ ಮಾಡಬೇಕು. ರೈತರ ಬೇಡಿಕೆ ನಿರ್ಲಕ್ಷಿಸಿದರೆ ಹೋರಾಟ ಮತ್ತಷ್ಟು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಭಾರತೀಯ ಕೃಷಿಕ ಸಮಾಜದ ಕರ್ನಾಟಕ ಘಟಕದ ಕಾರ್ಯಾಧ್ಯಕ್ಷ ಮಲ್ಲನಗೌಡ ಹಗರಟಗಿ, ಯಮನಪ್ಪ ದೊರೆ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಹಣಮಂತ್ರಾಯಗೌಡ ಕುಪ್ಪಿ, ಮಲ್ಲನಗೌಡ ನಗನೂರ, ರುದ್ರೇಶ್ ಪಡಶೆಟ್ಟಿ, ಮೌನೇಶ ಸಾಹುಕಾರ ಚಿಂಚೋಳಿ, ಶರಣು ಸಾಹುಕಾರ, ಮಹಾಂತಯ್ಯ ಹಿರೇಮಠ ಕುಪ್ಪಿ, ಶಿವಲಿಂಗ ಪಟ್ಟಣಶೆಟ್ಟಿ, ಬಸವರಾಜ್ ಚನ್ನೂರ, ರಮೇಶ ಬಿರಾದಾರ ಕೊಡೇಕಲ್, ಕಾಶೀನಾಥ ಹಾದಿಮನಿ, ಹುಲಗಪ್ಪ ಪಾಳೇಗಾರ ಕಾಮನಟಗಿ, ಬಸವರಾಜ್ ಕಾಮನಟಗಿ, ಬಸವರಾಜ್ ದೊಡ್ಡಮನಿ, ಸೇರಿದಂತೆ ಬೆಂಬಲಿತ ಸಂಘಟನೆ ಮುಖಂಡರು ಇದ್ದರು.

-----ಫೋಟೊ------

25ವೈಡಿಆರ್‌7

ನಾರಾಯಣಪುರ ಎಡದಂಡೆ ಹಾಗೂ ಬಲದಂಡೆ ಮುಖ್ಯ ಕಾಲುವೆಗಳಿಗೆ ನ.30ರವರೆಗೆ ನಿರಂತರ ನೀರು ಹರಿಸುವಂತೆ ಆಗ್ರಹಿಸಿ, ಭಾರತೀಯ ಕೃಷಿಕ ಸಮಾಜದ ಕರ್ನಾಟಕ ಘಟಕದ ವತಿಯಿಂದ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಡಿದ್ದು ಎನ್‌ಕೆ ಮಲ್ಟಿ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಉದ್ಘಾಟನೆ
ಮನ್‌ ಕಿ ಬಾತ್‌ನಲ್ಲಿ ಕಲ್ಬುರ್ಗಿಯ ತೊಗರಿ ಘಮ