ಅರಕಲಗೂಡಲ್ಲೂ ವೈದ್ಯರ ಪ್ರತಿಭಟನೆ

KannadaprabhaNewsNetwork |  
Published : Aug 18, 2024, 01:47 AM IST
17ಎಚ್ಎಸ್ಎನ್12 : ಅರಕಲಗೂಡು ಅನಕೃ ವೃತ್ತದಲ್ಲಿ ಶನಿವಾರ ವೈದ್ಯರು ಮತ್ತು ಸಿಬ್ಬಂದಿ ಕೊಲ್ಕತ್ತಾ ವೈದ್ಯ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಕರ್ತವ್ಯನಿರತ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ದುಷ್ಕೃತ್ಯವನ್ನು ಖಂಡಿಸಿ ವೈದ್ಯರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ತಾಲೂಕು ಸರ್ಕಾರಿ ವೈದ್ಯರ ಸಂಘದ ಘಟಕ ಹಾಗೂ ಖಾಸಗಿ ಘಟಕದ ವೈದರು, ಸಿಬ್ಬಂದಿ ಪಟ್ಟಣದ ಅನಕೃ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ಮಾತನಾಡಿ, ಕರ್ತವ್ಯ ನಿರತ ವೈದರ ಮೇಲಿನ ಅತ್ಯಾಚಾರ, ಕೊಲೆಯಾಗಿರುವುದು ಅಮಾನುಷ ಕೃತ್ಯವಾಗಿದೆ. ಇದರಿಂದ ವೈದ್ಯಕೀಯ ಸೇವೆ ಸಲ್ಲಿಸುವ ವೃಂದಕ್ಕೆ ಜೀವ ಭಯ ಉಂಟು ಮಾಡಿದೆ. ವೈದ್ಯರಿಗೆ ಸೂಕ್ತ ಭದ್ರತೆ ಇಲ್ಲವಾಗಿದೆ ಎಂದು ವಿಷಾದಿಸಿದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ಕೋಲ್ಕತಾದಲ್ಲಿ ಕರ್ತವ್ಯನಿರತ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ದುಷ್ಕೃತ್ಯವನ್ನು ಖಂಡಿಸಿ ವೈದ್ಯರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ತಾಲೂಕು ಸರ್ಕಾರಿ ವೈದ್ಯರ ಸಂಘದ ಘಟಕ ಹಾಗೂ ಖಾಸಗಿ ಘಟಕದ ವೈದರು, ಸಿಬ್ಬಂದಿ ಪಟ್ಟಣದ ಅನಕೃ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ಮಾತನಾಡಿ, ಕರ್ತವ್ಯ ನಿರತ ವೈದರ ಮೇಲಿನ ಅತ್ಯಾಚಾರ, ಕೊಲೆಯಾಗಿರುವುದು ಅಮಾನುಷ ಕೃತ್ಯವಾಗಿದೆ. ಇದರಿಂದ ವೈದ್ಯಕೀಯ ಸೇವೆ ಸಲ್ಲಿಸುವ ವೃಂದಕ್ಕೆ ಜೀವ ಭಯ ಉಂಟು ಮಾಡಿದೆ. ವೈದ್ಯರಿಗೆ ಸೂಕ್ತ ಭದ್ರತೆ ಇಲ್ಲವಾಗಿದೆ. ಸರ್ಕಾರ ವೈದ್ಯರಿಗೆ ರಕ್ಷಣೆ ನೀಡುವ ಮೂಲಕ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಕಾನೂನು ರೂಪಿಸಬೇಕು ಎಂದು ಮನವಿ ಮಾಡಿದರು. ಅನಕೃ ವೃತ್ತದಿಂದ ಮೆರವಣಿಗೆ ಸಾಗಿದ ಪ್ರತಿಭಟನಾಕಾರರು ತಾಲೂಕು ಕಚೇರಿ ತನಕ ಸಾಗಿ ಗ್ರೇಡ್- 2 ತಹಸೀಲ್ದಾರ್‌ ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು.

ಡಾ.ಲತಾ, ಡಾ.ನಮೃತಾ, ಡಾ. ಸುರೇಶ್, ಡಾ. ದಿವ್ಯಾ, ಡಾ.ಸಿಂಧು, ಡಾ. ಸುನಿಲ್, ಡಾ.ಅನಿಲ್, ಡಾ.ಶರತ್, ಸಿಬ್ಬಂದಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜಕೀಯವಾಗಿ ಗೂಗ್ಲಿ ಹಾಕ್ಬೇಕು, ಇಲ್ಲದಿದ್ರೆ ಯಶಸ್ಸು ಸಿಗಲ್ಲ: ಸತೀಶ್‌
ಮರ್ಯಾದಾ ಹತ್ಯೆಯಂಥ ಕೃತ್ಯ ತಡೆಗೆ ವಿಶೇಷ ಕಾನೂನು : ಸಿಎಂ