ಬಾಗೇಪಲ್ಲಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : May 26, 2026, 01:45 AM IST
25ಬಿಜಿಪಿ-2 | Kannada Prabha

ಸಾರಾಂಶ

ಪೆಟ್ರೋಲ್, ಡೀಸಲ್ ಮತ್ತು ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಕಾರ್ಯಕರ್ತರು ಡಾ. ಎಚ್.ಎನ್. ವೃತ್ತದಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ದ್ವಿಚಕ್ರ ವಾಹನಗಳನ್ನು ತಳ್ಳಿಕೊಂಡು ಬಂದು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ದಿ. ಮಾಜಿ ಶಾಸಕ ಜಿ.ವಿ. ಶ್ರೀರಾಮರೆಡ್ಡಿ ಪುತ್ಥಳಿ ಮುಂದೆ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ, ಬಾಗೇಪಲ್ಲಿ:

ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಸಿಲಿಂಡರ್ ಬೆಲೆಗಳ ಏರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಸಿಪಿಐ(ಎಂ) ಕಾರ್ಯಕರ್ತರು ಪಟ್ಟಣದ ಮುಖ್ಯ ರಸ್ತೆಯಲ್ಲಿ ದ್ವಿಚಕ್ರ ವಾಹನಗಳನ್ನು ತಳ್ಳುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ಪೆಟ್ರೋಲ್, ಡೀಸಲ್ ಮತ್ತು ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಕಾರ್ಯಕರ್ತರು ಡಾ. ಎಚ್.ಎನ್. ವೃತ್ತದಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ದ್ವಿಚಕ್ರ ವಾಹನಗಳನ್ನು ತಳ್ಳಿಕೊಂಡು ಬಂದು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ದಿ. ಮಾಜಿ ಶಾಸಕ ಜಿ.ವಿ. ಶ್ರೀರಾಮರೆಡ್ಡಿ ಪುತ್ಥಳಿ ಮುಂದೆ ಪ್ರತಿಭಟನೆ ನಡೆಸಿದರು.

ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಎಂ.ಪಿ. ಮುನಿವೆಂಕಟಪ್ಪ ಮಾತನಾಡಿ ದೇಶ ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆಗಳನ್ನು ನಿರಂತರವಾಗಿ ಏರಿಸುವ ಮೂಲಕ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಇದರಿಂದ ದೇಶದ ಜನಸಾಮಾನ್ಯರು ಇನ್ನಷ್ಟು ಸಂಕಷ್ಟ ಎದುರಿಸುವಂತಹ ಪರಿಸ್ಥಿತಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಂದು ನಿಲ್ಲಿಸಿದೆ ಎಂದು ಎಂದು ಕೇಂದ್ರ ಸರ್ಕಾರದ ವಿರುದ್ದ ಕಿಡಿ ಕಾರಿದರು.

5 ರಾಜ್ಯಗಳ ಚುನಾವಣೆಯ ಮೊದಲು ಇಂಧನ ದಾಸ್ತಾನು ಕೊರತೆ ಇಲ್ಲ. ಕೊಲ್ಲಿ ಯುದ್ಧದಿಂದ ದೇಶದಲ್ಲಿ ತೈಲ ಬಿಕ್ಕಟ್ಟು ಉಂಟಾಗದು ಎಂದು ಹೇಳಿದ್ದ ಪ್ರಧಾನಿ, ಚುನಾವಣೆಗಳ ಫಲಿತಾಂಶದ ನಂತರ ಇಂಧನ ಬೆಲೆ ಏರಿಸಿ ವಿದೇಶಕ್ಕೆ ತೆರಳಿದ್ದು ಗಾಯದ ಮೇಲೆ ಬರೆ ಎಳೆಯುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಮುಖಂಡರಾದ ರಘುರಾಮ ರೆಡ್ಡಿ, ವಾಲ್ಮೀಕಿ ಅಶ್ವತ್ಥಪ್ಪ ಚನ್ನರಾಯಪ್ಪ, ಜಿ.ಕೃಷ್ಣಪ್ಪ, ಡಿ.ಟಿ. ಮುನಿಸ್ವಾಮಿ, ಎಸ್.ಎಫ್.ಐ ಮುಖಂಡ ಸೋಮಶೇಖರ್, ರಾಮಾಂಜಿ ಮತ್ತಿತರರು ಇದ್ದರು.

25ಬಿಜಿಪಿ-2:

ತೈಲ, ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಬಾಗೇಪಲ್ಲಿಯಲ್ಲಿ ಸಿಪಿಐ(ಎಂ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿ: ಮಧು
ಕೆಜಿಎಫ್‌ ತಾಲೂಕು ಅಂಗನವಾಡಿ ಕೇಂದ್ರಗಳಲ್ಲಿ 20 ಮಾಂಟೆಸ್ಸರಿ ಆರಂಭ