9ರಂದು ಸಿಎಂ ಮೈಸೂರು ಮನೆ ಮುಂದೆ ಪ್ರತಿಭಟನೆ

KannadaprabhaNewsNetwork |  
Published : Nov 06, 2023, 12:46 AM IST
ಪೋಟೋ 2 : ನೆಲಮಂಗಲ ತಾಲ್ಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಾಜೇಶ್ | Kannada Prabha

ಸಾರಾಂಶ

ದಾಬಸ್‌ಪೇಟೆ: ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ 10 ಗಂಟೆ ಸಮರ್ಪಕ ವಿದ್ಯುತ್ ಪೂರೈಸಬೇಕು, ರೈತರಿಂದ ಸಾಲ ವಸೂಲಿ ಮಾಡುವುದನ್ನು ನಿಲ್ಲಿಸಬೇಕು, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮೈಸೂರಿನ ಸಿಎಂ ಮನೆ ಮುಂದೆ ನ.9ರಂದು ನಡೆಸುವ ಬೃಹತ್ ಧರಣಿ ಬೆಂಬಲಿಸಿ ಜಿಲ್ಲೆಯಿಂದ ನೂರಾರು ರೈತರು ಭಾಗವಹಿಸುತ್ತೇವೆ ಎಂದು ನೆಲಮಂಗಲ ತಾಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಾಜೇಶ್ ತಿಳಿಸಿದರು.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ರಾಜ್ಯ ಸರ್ಕಾರ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ನೀಡದೆ ಕಣ್ಣುಮುಚ್ಚಾಲೆ ಆಡುತ್ತಿದೆ. ಬರದಿಂದ ನರಳುತ್ತಿರುವ ರೈತರಿಗೆ ಇದು ಮತ್ತೊಂದು ಆಘಾತ ಉಂಟು ಮಾಡಿದೆ. ಮಳೆ ಅಭಾವದಿಂದ ವಿದ್ಯುತ್ ಉತ್ಪಾದನೆ ಕುಂಠಿತವಾಗಿದ್ದು ರೈತರಿಗೆ ಎರಡು ಮೂರು ಗಂಟೆ ವಿದ್ಯುತ್ ನೀಡುತ್ತಾರೆ. ಆದರೆ ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಕೆ ಮಾಡುತ್ತೇವೆ ಎನ್ನುತ್ತಾರೆ. ಸರ್ಕಾರದ ಇಬ್ಬಗೆ ನೀತಿ ಸರಿಯಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವಂತೆ 10 ಗಂಟೆ ಸಮರ್ಪಕ ವಿದ್ಯುತ್ ನೀಡದಿದ್ದರೆ 45 ಲಕ್ಷ ಕೃಷಿ ಪಂಪ್‌ಸೆಟ್ ರೈತರು ಬೀದಿಪಾಲಾಗುತ್ತಾರೆ. ಕೃಷಿ ಪಂಪ್ ಸೆಟ್‌ಗಳ ಅಕ್ರಮ ಸಕ್ರಮ ಯೋಜನೆಯನ್ನು ರದ್ದುಗೊಳಿಸಬೇಕು. ರಾಜ್ಯ ಸರ್ಕಾರ 220 ತಾಲೂಕು ಬರ ಘೋಷಣೆ ಮಾಡಿದೆ. ಆದರೆ ಬರಗಾಲ ಸಂಕಷ್ಟದ ನೆರವು ಕಾರ್ಯಾರಂಭವಾಗಿಲ್ಲ. ದನಕರುಗಳಿಗೆ ಮೇವು, ಕುಡಿಯುವ ನೀರು ಬೆಳೆ ನಷ್ಟ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ರೈತರ ಸಮಸ್ಯೆಗಳ ವಿರುದ್ಧದ ಹೋರಾಟಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

(ಮಗ್‌ಶಾಟ್‌ ಫೋಟೋ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಯಕತ್ವ ಗೊಂದಲ ಮಧ್ಯೆ 13 ಕೈ ಶಾಸಕರು ವಿದೇಶಕ್ಕೆ :
ವಿದ್ಯಾರ್ಥಿಗಳ ಗೋಳು, ಕೇಳೋರು ಯಾರು?