ಕುಶಾಲನಗರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ

KannadaprabhaNewsNetwork |  
Published : Apr 21, 2024, 02:16 AM IST
ಕುಶಾಲನಗರ ತಾಲೂಕು ಕಚೇರಿ ಮುಂಬಾಗ ಪ್ರತಿಭಟನೆ ಸಂದರ್ಭ | Kannada Prabha

ಸಾರಾಂಶ

ಕುಶಾಲನಗರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಸಂದರ್ಭ ಸಂಶಯಾಸ್ಪದ ಅಪಘಾತ ಘಟನೆಯಲ್ಲಿ ಸಾವನ್ನಪ್ಪಿದ ಬಿಜೆಪಿ ಕಾರ್ಯಕರ್ತ ರಾಮಪ್ಪ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು. ಮೃತ ವ್ಯಕ್ತಿ ಕುಟುಂಬಕ್ಕೆ 25 ಲಕ್ಷ ಪರಿಹಾರ ಒದಗಿಸಬೇಕು ಹಾಗೂ ಕಾರು ಅಪಘಾತ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಬಗ್ಗೆ ಬಹಿರಂಗ ಮಾಹಿತಿ ನೀಡಬೇಕು ಎಂದು ಆಗ್ರಹಿಸಿ ಕುಶಾಲನಗರ ಮಂಡಲ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಪರ ಸಂಘಟನೆಗಳ ಪ್ರಮುಖರು ಕುಶಾಲನಗರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ತಾಲೂಕು ಕಚೇರಿ ಮುಂಭಾಗ ಪ್ರತಿಭಟನಾಕಾರರು ಸೇರಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯದ ಹಲವಡೆ ನಡೆಯುತ್ತಿರುವ ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ತಾತ್ಸಾರ ಮನೋಭಾವ ತಾಳಿದೆ ಎಂದು ಆರೋಪಿಸಿದರು.

ಈ ಸಂದರ್ಭ ಮಾತನಾಡಿದ ಮಂಡಲ ಅಧ್ಯಕ್ಷರಾದ ಎಂ ಚರಣ್ ಮಾತನಾಡಿ, ರಾಜ್ಯದಲ್ಲಿ ಹಿಂದು ಸಮುದಾಯದ ನಾಗರಿಕರು ಬಹಿರಂಗವಾಗಿ ಓಡಾಡಲು ಭಯಭೀತರಾಗುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ರಾಜ್ಯ ಸರ್ಕಾರ ತಕ್ಷಣ ಈ ಬಗ್ಗೆ ಗಮನಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಆಗ್ರಹಿಸಿದರು.

ಪ್ರಮುಖರಾದ ಜಿ ಎಲ್ ನಾಗರಾಜ್ , ಡಿ ಕೆ ತಿಮ್ಮಪ್ಪ ಮಂಜುಳಾ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ ಸಾರ್ವಜನಿಕ ವಲಯದಲ್ಲಿ ಜನರಿಗೆ ರಕ್ಷಣೆ ಇಲ್ಲದೆ ಇರುವುದು ಕಂಡುಬಂದಿದೆ. ಹುಬ್ಬಳ್ಳಿಯಲ್ಲಿ ನಡೆದ ಕೊಲೆ ಪ್ರಕರಣ ಸೇರಿದಂತೆ ಹಲವು ಕಡೆ ಲವ್ ಜಿಹಾದ್ ಪ್ರಕರಣಗಳು ನಡೆಯುತ್ತಲೇ ಇದೆ. ಇಂತಹ ವಿಷಯಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಕ್ರಮ ಕೈಗೊಳ್ಳಬೇಕು.

ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸುವ ಜೊತೆಗೆ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಎಚ್ಎಂ ಮಧುಸೂದನ್, ಉಮಾಶಂಕರ್, ಪುಷ್ಪ ನಾಗೇಶ್, ಗೀತಾಲಿಂಗಪ್ಪ, ಅವಿನಾಶ್ , ರುಕ್ಮಿಣಿ, ಸರಳ ವೈಶಾಖ್, ಆದರ್ಶ್ ಮತ್ತಿತರರು ಇದ್ದರು.

PREV

Recommended Stories

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!