ನಾಳೆ ರೈತ ಸಂಘದಿಂದ ರಿಜರ್ವ್ ಬ್ಯಾಂಕ್ ಮುಂದೆ ಪ್ರತಿಭಟನೆ

KannadaprabhaNewsNetwork |  
Published : Jan 28, 2025, 12:48 AM IST
ಚಿತ್ರದುರ್ಗ ಎರಡನೇ ಪುಟದ ಬಾಟಂ  | Kannada Prabha

ಸಾರಾಂಶ

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಕೆ.ಪಿ.ಭೂತಯ್ಯ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ ಹಾಗೂ ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟುವಂತೆ ಆಗ್ರಹಿಸಿ ರೈತ ಸಂಘದ ವತಿಯಂದ ಜನವರಿ 29 ರಂದು ಬೆಂಗಳೂರಿನ ರಿಸರ್ವ್ ಬ್ಯಾಂಕ್ ಎದುರು ರೈತರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಹೇಳಿದರು.

ಸೋಮವಾರ ಇಲ್ಲಿನ ಪ್ರವಾ್ಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರವನ್ನು ಸದೃಢಗೊಳಿಸುವ ದೃಷ್ಟಿಯಿಂದ ಆರ್ಥಿಕ ನೆರವು ನೀಡಲು ಸ್ಥಾಪನೆಯಾಗಿರುವ ನಬಾರ್ಡ್ ಅಲ್ಪಾವಧಿ ಸಾಲದ ಮೊತ್ತವನ್ನು ಕಡಿತಗೊಳಿಸಿದೆ. ದೇಶದ ಮಹನೀಯರು ದೂರದೃಷ್ಟಿಯಿಂದ ಸಹಕಾರಿ ಚಳುವಳಿಯನ್ನು ಕಟ್ಟಿ ನಡೆಸಿದ ಸಹಕಾರ ಸಂಸ್ಥೆಗಳು ದೇಶದ ಬೆನ್ನೆಲುಬಾಗಿ ದುಡಿಯುತ್ತಿದ್ದು, ಗ್ರಾಮೀಣ ಪ್ರದೇಶದ ಆರ್ಥಿಕತೆ ಕಟ್ಟಿ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸಿವೆ. ಸಹಕಾರಿ ಸಂಘಗಳಿಗೆ ಸಾಲದ ಮೊತ್ತ ಕಡಿತ ಮಾಡುವುದರ ಮೂಲಕ ದ್ರೋಹ ಎಸಗಲಾಗಿದೆ ಎಂದು ದೂರಿದರು.

ಹಾಲಿನ ಡೈರಿಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಡಿಸಿಸಿ ಬ್ಯಾಂಕುಗಳು ಸಾಲು ನೀಡುವುದರ ಮೂಲಕ ಕೃಷಿಗೆ ಪೂರಕವಾಗಿ ಕೆಲಸ ಮಾಡುತ್ತಿವೆ. ಕೇಂದ್ರ ಸರ್ಕಾರ ಕಳೆದ 3 ವರ್ಷದಿಂದಲೂ ಪ್ರತಿವರ್ಷ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಲೇ ಬರುತ್ತಿದೆ. ಕೇಂದ್ರದ ಈ ನೀತಿಯಿಂದಾಗಿ ನಬಾರ್ಡ್ ರೈತರಿಗೆ ನೀಡುತ್ತಿದ್ದ, ಸಾಲದ ಮೊತ್ತವನ್ನು ಕಡಿಮೆ ಮಾಡಿ ಈ ಸಾಲಿನಲ್ಲಿ ನಮ್ಮ ರಾಜ್ಯಕ್ಕೆ ನೀಡುತ್ತಿದ್ದ ಸಾಲವನ್ನುಶೇ.58 ರಷ್ಟು ತಗ್ಗಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಇಡೀ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿ ಕೃಷಿ ಕ್ಷೇತ್ರವನ್ನು ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ವಹಿಸಲು ಹುನ್ನಾರ ನಡೆಸಿದೆ ಎಂದು ದೂರಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ ಮಾತನಾಡಿ,ನಬಾರ್ಡ್ ಕಳೆದ ವರ್ಷ ರಾಜ್ಯಕ್ಕೆ 5600 ಕೋಟಿ ರು. ನೀಡಿತ್ತು. ಈ ವರ್ಷ ಕೇವಲ 2340 ಕೋಟಿ ರು.ಗಳನ್ನು ನೀಡಿದೆ. ಇದರಿಂದಾಗಿ 5 ಲಕ್ಷದ ವರೆವಿಗೆ ಶೂನ್ಯ ಬಡ್ಡಿ ದರದಲ್ಲಿ ಸಹಕಾರಿ ಸಂಸ್ಥೆಗಳ ಮೂಲಕ ನೀಡುತ್ತಿದ್ದ, ಅಲ್ಪಾವಧಿ ಸಾಲಕ್ಕೆ ಕುತ್ತು ಬಂದಿದೆ. ಮತ್ತು ರಿಯಾಯತಿ ದರದಲ್ಲಿ 15 ಲಕ್ಷ ರು.ಗಳ ವರೆಗೆ ದೊರೆಯುತ್ತಿದ್ದ, ಮಧ್ಯಮ ಅವಧಿ ಮತ್ತು ದೀರ್ಘಾವಧಿ ಕೃಷಿ ಸಾಲಕ್ಕೆ ಹೊಡೆತ ಬೀಳಲಿದೆ ಎಂದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಕಿರುಕುಳದಿಂದ ಗ್ರಾಮೀಣ ಪ್ರದೇಶದ ಮಹಿಳೆಯರು ಮತ್ತು ಇತರೆ ದುಡಿಯುವ ಜನ ಸಂಕಷ್ಟಕ್ಕೀಡಾಗಿದ್ದಾರೆ. ಮೈಕ್ರೋ ಫೈನಾನ್ಸ್ ಮೇಲೆ ಯಾರಿಗೂ ಹಿಡಿತ ಇಲ್ಲದಂತಾಗಿ ಮಹಿಳೆಯರು ಮಾನ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಒಳಗಾಗಿದ್ದಾರೆ ಮತ್ತು ಕಿರುಕುಳ ತಾಳಲಾರದೇ ಊರನ್ನೇ ತೊರೆಯುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಗಳ ಕಿರುಕುಳ ತಡೆಗಟ್ಟಲೇ ಬೇಕಾಗಿದೆ.ಈ ಹಿನ್ನಲೆಯಲ್ಲಿ ಜನವರಿ 29 ರಂದು ಗಂಟೆಗೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಿಸರ್ವ್ ಬ್ಯಾಂಕ್ ಮುಂದೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಚಿತ್ರದುರ್ಗ ಜಿಲ್ಲೆಯಿಂದ 200 ಮಂದಿ ಪಾಲ್ಗೊಳ್ಳುವರೆಂದರು.

ಈ ವೇಳೆ ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಮಲ್ಲಾಪುರ ತಿಪ್ಪೇಸ್ವಾಮಿ,ಪ್ರಧಾನ ಕಾರ್ಯದರ್ಶಿ ಕುಮಾರ್ ಹಿರಿಯ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ