ವಕ್ಫ್‌ ಕಿತಾಪತಿ ಖಂಡಿಸಿ ಹೊಳೆನರಸೀಪುರದಲ್ಲಿ ಪ್ರತಿಭಟನೆ

KannadaprabhaNewsNetwork |  
Published : Nov 07, 2024, 11:45 PM IST
7ಎಚ್ಎಸ್ಎನ್3 : ಹೊಳೆನರಸೀಪುರದಲ್ಲಿ ಕರ್ನಾಟಕ ರೈತ ಸಂಘದ ಸಹಕಾರದಲ್ಲಿ ಬಿಜೆಪಿ ಮಂಡಲದ ವತಿಯಿಂದ ಕಾಂಗ್ರೆಸ್ ಸರ್ಕಾರದ ದೋರಣೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಅಮಿತ್, ಶ್ರೀನಿವಾಸ, ರಘು, ನರಸಿಂಹಶೆಟ್ಟಿ, ಮೋಹನ್, ಯೋಗನರಸಿಂಹ ಐಯಂಗಾರ್ ಇದ್ದರು. | Kannada Prabha

ಸಾರಾಂಶ

ಕರ್ನಾಟಕ ರಾಜ್ಯದಲ್ಲಿ ವಕ್ಫ್‌ ಹೆಸರಿನಲ್ಲಿ ರಾಜ್ಯವನ್ನು ಲೂಟಿ ಮಾಡಲು ಹೊರಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ರೈತರ ಜಮೀನು, ನಮ್ಮ ಮನೆಗಳು, ಸರ್ಕಾರಿ ಕಟ್ಟಡಗಳು, ದೇವಾಲಯಗಳನ್ನು ಉಳಿಸುವ ಸಲುವಾಗಿ ಹೋರಾಟ ಅನಿವಾರ್ಯವಾಗಿದೆ. ನಾವು ಕೈಕಟ್ಟಿ ಕುಳಿತ್ತಿಲ್ಲ. ಹಿಂದೂಗಳನ್ನು ಕೆಣಕಬೇಡಿ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಆಕ್ರೋಶದಿಂದ ಎಚ್ಚರಿಸಿದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರಕರ್ನಾಟಕ ರಾಜ್ಯದಲ್ಲಿ ವಕ್ಫ್‌ ಹೆಸರಿನಲ್ಲಿ ರಾಜ್ಯವನ್ನು ಲೂಟಿ ಮಾಡಲು ಹೊರಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ರೈತರ ಜಮೀನು, ನಮ್ಮ ಮನೆಗಳು, ಸರ್ಕಾರಿ ಕಟ್ಟಡಗಳು, ದೇವಾಲಯಗಳನ್ನು ಉಳಿಸುವ ಸಲುವಾಗಿ ಹೋರಾಟ ಅನಿವಾರ್ಯವಾಗಿದೆ. ನಾವು ಕೈಕಟ್ಟಿ ಕುಳಿತ್ತಿಲ್ಲ. ಹಿಂದೂಗಳನ್ನು ಕೆಣಕಬೇಡಿ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಆಕ್ರೋಶದಿಂದ ಎಚ್ಚರಿಸಿದರು.ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಮುಂಭಾಗದಿಂದ ಕರ್ನಾಟಕ ರೈತ ಸಂಘದ ಸಹಕಾರದಲ್ಲಿ ಬಿಜೆಪಿ ಮಂಡಲದ ವತಿಯಿಂದ ಆಯೋಜನೆ ಮಾಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದರು. ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ವಕ್ಫ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ. ವಕ್ಫ್ ಬೋರ್ಡ್‌ ತನ್ನ ಕರಾಳ ಕೈಚಳಕವನ್ನು ಮಾಡುವ ಮೂಲಕ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈಹಾಕಿದೆ. ರಾಜ್ಯದಲ್ಲಿ ನಡೆಯುತ್ತಿರುವ ಇಂತಹ ಕುಕೃತ್ಯಗಳಿಗೂ ಕಾಂಗ್ರೆಸ್ ಸಹಕಾರ ಹಾಗೂ ಸಚಿವ ಜಮೀರ್‌ ಅಹಮದ್ ನೇರವಾಗಿ ಕುಮ್ಮಕ್ಕು ಕೊಡುತ್ತಿರುವುದು ಇಡೀ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ. ಮತ್ತದೇ ರೀತಿಯ ಕೃತ್ಯಗಳನ್ನು ಕಾಂಗ್ರೆಸ್ ನಾಯಕರು ಹಾಗೂ ಕಾಂಗ್ರೆಸ್ ಸರ್ಕಾರ ಮುಂದುವರೆಸಿದಲ್ಲಿ ಮತ್ತು ಒಂದೇ ಒಂದು ಪಾಣಿಯಲ್ಲಿ ವಕ್ಫ್‌ ಹೆಸರು ಬಂದಲ್ಲಿ ಇಡೀ ರಾಜ್ಯದ ಜನತೆಯನ್ನು ಒಗ್ಗೂಡಿಸಿ ಉಗ್ರ ಹೋರಾಟ ಮಾಡುತ್ತೇವೆ ಎಂದರು.ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ, ರೈತ ಮೋರ್ಚಾ ಘಟಕದ ಅಧ್ಯಕ್ಷ ಸುರೇಶ್ ಬಾಬು, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ರಘು ಮಾತನಾಡಿದರು. ಎತ್ತಿನ ಗಾಡಿಗಳು, ದ್ವಿಚಕ್ರ ವಾಹನಗಳು ಹಾಗೂ ಕಾಲ್ನಡಿಗೆಯಲ್ಲಿ ಆಗಮಿಸಿದ್ದ ಪ್ರತಿಭಟನಾ ನಿರತರು, ಮಹಾತ್ಮಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸುವ ಜತೆಗೆ ರಾಜ್ಯ ಸರ್ಕಾರದ ಧೋರಣೆ ವಿರುದ್ಧ ದಿಕ್ಕಾರ ಕೂಗಿದರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್‌ ಅಹಮದ್ ರಾಜೀನಾಮೆಗೆ ಒತ್ತಾಯಿಸಿದರು.ತಾಲೂಕು ಕಚೇರಿಗೆ ತೆರಳಿದ ಪ್ರತಿಭಟನಾ ನಿರತರು ತಹಸೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಐಪಿಎಸ್ ಅಧಿಕಾರಿ ಶಾಲು ಅವರ ಮಾರ್ಗದರ್ಶನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರದಾನ ಕಾರ್ಯದರ್ಶಿ ನರಸಿಂಹಶೆಟ್ಟಿ, ತಾಲೂಕು ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ, ಬಿಜೆಪಿಯ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ಹಾಗೂ ವಿದ್ಯಾಪ್ರಸಾದ್, ಮುಖಂಡರಾದ ಯೋಗನರಸಿಂಹ ಐಯ್ಯಂಗಾರ್, ಯೋಗೇಶ್, ದೇವರಾಜು, ಅಭಿಷೇಕ್, ಶ್ರೀನಿವಾಸ, ಕೀರ್ತನ್, ಇತರರು ಇದ್ದರು.

PREV

Recommended Stories

ವಿಶ್ವಾದ್ಯಂತ ಒಂದೇ ದಿನ ಕಾಂತಾರ ಚಾಪ್ಟರ್ 1 ಬಿಡುಗಡೆ
ಈರುಳ್ಳಿ, ಹೂ, ಪಚ್ಚ ಬಾಳೆ ಬೆಲೆ ಧರೆಗೆ!