ಕೊಪ್ಪಳ: ಹುಬ್ಬಳ್ಳಿಯ ಬಿವಿವಿ ಕಾಲೇಜಿನಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಲು ಕೊಪ್ಪಳ ನಗರದ ಬಸವೇಶ್ವರ ವೃತ್ತದಿಂದ ಡಿಸಿ ಕಚೇರಿ ವರೆಗೂ ಶುಕ್ರವಾರ ಪ್ರತಿಭಟನೆ ಮೆರವಣಿಗೆ ನಡೆಸಿದರು.
ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಕಾನೂನಿನ ಭಯ ಇಲ್ಲದಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ. ಕಾಲೇಜು ಕ್ಯಾಂಪಸ್‌ಗಳು ಸುರಕ್ಷತೆಯ ಕೇಂದ್ರಗಳಾಗಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು. ಉನ್ನತ ಮಟ್ಟದ ತನಿಖೆ ಮಾಡಬೇಕು. ಅಗತ್ಯ ಎಂದು ಕಂಡರೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರ ಮಾಡಬೇಕು ಎಂದು ಎಬಿವಿಪಿ ಆಗ್ರಹಿಸಿದೆ.
ಜಿಲ್ಲಾ ಸಂಚಾಲಕ ಶಶಾಂಕ್ ಪಾಟೀಲ್, ನಗರ ಸಂಘಟನ ಕಾರ್ಯದರ್ಶಿ ಪ್ರಫುಲ್, ನಗರ ಕಾರ್ಯದರ್ಶಿ ಹಮ್ಮಿಗೇಶ್, ತಾಲೂಕು ಸಂಚಾಲಕ ಕೃಷ್ಣ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ರಾಧಿಕಾ, ಸುಮಂಗಲಾ, ಸಂತೋಷ್, ಮಹೇಶ್, ರವಿ ಇತರರು ಇದ್ದರು.ಗಂಗಾವತಿಯಲ್ಲಿ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಎಬಿವಿಪಿ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜುಲೈ ನಗರದ ಇಂದಿರಾಗಾಂಧಿ ವೃತ್ತದಿಂದ ರಾಣಾ ಪ್ರತಾಪ್ ವೃತ್ತದ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಜಿಲ್ಲಾ ಸಹ ಸಂಚಾಲಕ ಅಭಿಷೇಕ ಹಿರೇಮಠ ಅವರು, ಹಾಡುಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಭೀಕರ ಹತ್ಯೆ ಮಾಡಿರುವ ಘಟನೆ ವಿದ್ಯಾರ್ಥಿ ಸಮುದಾಯಕ್ಕೆ ಭಯ ಮೂಡಿಸಿದೆ. ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಕ್ರೂರ ಮನಸ್ಥಿತಿಯ ಫಯಾಜ್ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಆತನ ಪ್ರೀತಿಯನ್ನು ಆಕೆ ನಿರಾಕರಿಸಿದ್ದರಿಂದ ಕಾಲೇಜಿನಲ್ಲಿ ಇಂತಹ ದುಷ್ಕೃತ್ಯ ಎಸಗಿದ್ದಾನೆ ಎಂದು ಅರೋಪಿಸಿದರು.
ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಕಾರ್ಯಪ್ರವೃತ್ತರಾಗಬೇಕು, ಸರ್ಕಾರ ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಕಾನೂನಿನ ಭಯ ಇಲ್ಲದಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ. ಕಾಲೇಜು ಕ್ಯಾಂಪಸ್‌ಗಳು ಸುರಕ್ಷತೆಯ ಕೇಂದ್ರಗಳಾಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಬೇಕು ಹಾಗೂ ಉನ್ನತ ಮಟ್ಟದ ತನಿಖೆ ಮಾಡಬೇಕು. ಪ್ರಕರಣ ತನಿಖೆಯನ್ನು ಸಿಬಿಐಗೆ ಹಸ್ತಾಂತರ ಮಾಡಬೇಕೆಂದು ಆಗ್ರಹಿಸಿದರು.ಕಿರಣ್, ವಿಶ್ವನಾಥ್, ಅಮುತ್, ಪೃಥ್ವಿರಾಜ್ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.