ಉಗ್ರರ ದಾಳಿ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

KannadaprabhaNewsNetwork |  
Published : Apr 24, 2025, 11:51 PM IST
ಚಿತ್ರ :  23ಎಂಡಿಕೆ7 : ಹಿಂದೂಪರ ಸಂಘಟನೆಗಳಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.  | Kannada Prabha

ಸಾರಾಂಶ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಖಂಡಿಸಿ ಮಡಿಕೇರಿಯಲ್ಲಿ ಹಿಂದೂಪರ ಸಂಘಟನೆಗಳಿಂದ ಬುಧವಾರ ರಾತ್ರಿ ಪಂಜು ಹಿಡಿದು ಪ್ರತಿಭಟನೆ ನಡೆಸಲಾಯಿತು. ಜನರಲ್ ತಿಮ್ಮಯ್ಯ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಯೋತ್ಪಾದಕರ ವಿರುದ್ಧ ಘೋಷಣೆ ಕೂಗಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ದಾಳಿಯಿಂದ ಸಾವನ್ನಪ್ಪಿದವರಿಗೆ ಇದೇ ಸಂದರ್ಭ ಸಂತಾಪ ಸೂಚಿಸಲಾಯಿತು.

ಹಿಂದುಗಳನ್ನೆ ಹುಡುಕಿ ಹತ್ಯೆಗೈದಿರುವುದು ಖಂಡನೀಯ. ಉಗ್ರರ ವಿರುದ್ಧ ಸೂಕ್ತ ಕ್ರಮಕ್ಕೆ ಸಂಘಟನೆಗಳ ಪ್ರಮುಖರು ಒತ್ತಾಯಿಸಿದರು. ಜಿಹಾದಿಗಳು ಇಂತಹ ಪದೇ ಪದೇ ಕೃತ್ಯಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ, ಬಿಜೆಪಿ ಮಾಜಿ ಶಾಸಕ ಅಪ್ಪಚ್ಚು ರಂಜನ್ , ಎಂಎಲ್ ಸಿ ಸುಜಾ ಕುಶಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರವಿಕಾಳಪ್ಪ ಸೇರಿದಂತೆ ಹಿಂದು ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು.

------------------------------------

ಹಿಂದೂಗಳನ್ನು ಟಾರ್ಗೆಟ್ ಮಾಡಿದ್ದಾರೆ: ನಿವೃತ್ತ ಮೇಜರ್ ಚಿಂಗಪ್ಪ

ಕನ್ನಡಪ್ಭ ವಾರ್ತೆ ಮಡಿಕೇರಿಜಮ್ಮು ಕಾಶ್ಮೀರದಿಂದ ಹಿಂದುಗಳ ಓಡಿಸುವುದೇ ಉಗ್ರವಾದಿಗಳ ಗುರಿಯಾಗಿದೆ. ಹಿಂದೆ ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡಿದ್ದರು. ಆದರೆ ಈಗ ಜಮ್ಮುಕಾಶ್ಮೀರದಲ್ಲಿ ಹಿಂದೂಗಳನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ನಿವೃತ್ತ ಮೇಜರ್ ಚಿಂಗಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮುಕಾಶ್ಮೀರದಲ್ಲಿನ ಪ್ರವಾಸೋದ್ಯಮವನ್ನು ಹಾಳು ಮಾಡಬೇಕು ಎಂದುಕೊಂಡಿದ್ದಾರೆಅಲ್ಲಿ ಹಿಂದುಗಳು ವ್ಯಾಪಾರೋದ್ಯಮ ಆರಂಭಿಸಿದ್ದಾರೆ. ಜಮ್ಮುಕಾಶ್ಮೀರ ಒಂದಷ್ಟು ಅಭಿವೃದ್ಧಿಯತ್ತ ಸಾಗುತ್ತಿತ್ತು. ಅಲ್ಲಿ ಉದ್ಯೋಗಗಳು ಸೃಷ್ಟಿ ಆಗುತ್ತಿದ್ದವು. ಅದನ್ನೆಲ್ಲಾ ಹಾಳು ಮಾಡಲು ಮುಂದಾಗಿದ್ದಾರೆ. ಹಿಂದಿನಂತೆ ಜಮ್ಮುಕಾಶ್ಮೀರ ಇರಬೇಕು ಎಂದು ಹೀಗೆ ಮಾಡುತ್ತಿದ್ದಾರೆ.

ಭಾರತ ಸರ್ಕಾರ ಯಾವುದೇ ಕಾರಣಕ್ಕೂ ಅದಕ್ಕೆ ಅವಕಾಶ ಕೊಡಬಾರದು. ಹಿಂದೆ ಇದ್ದ ಕಠಿಣ ಕ್ರಮವನ್ನೇ ಅನುಸರಿಸಬೇಕು ಎಂದು ನಿವೃತ್ತ ಮೇಜರ್ ಆಗ್ರಹಿಸಿದ್ದಾರೆ.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ