ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಅಪಘಾತದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ರಾಮಪ್ಪ ಅವರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೌರ್ಜನ್ಯ ಮತ್ತು ಅಪರಾಧ ಪ್ರಕರಣಗಳು ಅಧಿಕವಾಗಿದೆ ಎಂದು ಆರೋಪಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಪಕ್ಷದ ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ವಕ್ತಾರ ತಳೂರು ಕಿಶೋರ್ ಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ವಿವಿಧ ಘಟಕಗಳ ಪದಾಧಿಕಾರಿಗಳು, ನಗರಸಭೆಯ ಬಿಜೆಪಿ ಸದಸ್ಯರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.