ನೇಹಾ ಹತ್ಯೆ ಖಂಡಿಸಿ ಮುಂಡಗೋಡದಲ್ಲಿ ಪ್ರತಿಭಟನೆ

KannadaprabhaNewsNetwork |  
Published : Apr 20, 2024, 01:10 AM IST
ಮುಂಡಗೋಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಮುಂಡಗೋಡ ಬಿಜೆಪಿ ಹಾಗೂ ಹಿಂದು ಪರ ಸಂಘಟನೆ ಕಾರ್ಯಕರ್ತರು ಶುಕ್ರವಾರ ಸಂಜೆ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟಿಸಿ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು | Kannada Prabha

ಸಾರಾಂಶ

ಸ್ಥಳಕ್ಕಾಗಮಿಸಿದ ತಹಸೀಲ್ದಾರ್‌ ಶಂಕರ ಗೌಡಿ ಮನವಿ ಸ್ವೀಕರಿಸಿದ ಬಳಿಕ ಪ್ರತಿಭಟನೆ ಕೈಬಿಡಲಾಯಿತು. ರಸ್ತೆತಡೆ ನಡೆಸಿದ್ದರಿಂದ ಇದರಿಂದ ಸುಮಾರು ಅರ್ಧ ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಮುಂಡಗೋಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಬಿಜೆಪಿ ಹಾಗೂ ಹಿಂದುಪರ ಸಂಘಟನೆ ಕಾರ್ಯಕರ್ತರು ಶುಕ್ರವಾರ ಸಂಜೆ ಪಟ್ಟಣದ ಶಿವಾಜಿ ಸರ್ಕಲ್‌ನಲ್ಲಿ ರಸ್ತೆತಡೆ ನಡೆಸಿ ಪ್ರತಿಭಟಿಸಿ ತಹಸೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು.

ಪಟ್ಟಣದ ಶಿವಾಜಿ ಸರ್ಕಲ್‌ನಲ್ಲಿ ಜಮಾಯಿಸಿದ ನೂರಾರು ಸಂಖ್ಯೆ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಜಿಹಾದಿಗಳಿಗೆ ಬೆಂಬಲಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಹಿಂದು ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಬೇಜವಾಬ್ದಾರಿ ಹೇಳಿಕೆ ನೀಡುವ ಗೃಹ ಸಚಿವ ಜಿ. ಪರಮೇಶ್ವರ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಈ ಸಂದರ್ಭದಲ್ಲಿ ಮುಂಡಗೋಡ ಸಿಪಿಐ ನೀಲಮ್ಮನವರ ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ಚದುರಿಸಲೆತ್ನಿಸಿದರು. ಇದಕ್ಕೆ ಜಗ್ಗದ ಪ್ರತಿಭಟನಾಕಾರರು ತಹಸೀಲ್ದಾರ್‌ ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸಬೇಕೆಂದು ಪಟ್ಟು ಹಿಡಿದರು.

ಬಳಿಕ ಸ್ಥಳಕ್ಕಾಗಮಿಸಿದ ತಹಸೀಲ್ದಾರ್‌ ಶಂಕರ ಗೌಡಿ ಮನವಿ ಸ್ವೀಕರಿಸಿದ ಬಳಿಕ ಪ್ರತಿಭಟನೆ ಕೈಬಿಡಲಾಯಿತು. ರಸ್ತೆತಡೆ ನಡೆಸಿದ್ದರಿಂದ ಇದರಿಂದ ಸುಮಾರು ಅರ್ಧ ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಕಾಂಗ್ರೆಸ್ ಸರ್ಕಾರದ ಆಡಳಿತಲ್ಲಿ ಹಿಂದೂಗಳು, ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರದ ನೀತಿಗೆ ರಾಜ್ಯದ ಜನತೆ ಹಿಡಿಶಾಪ ಹಾಕುತ್ತಿದ್ದಾರೆ. ಆರೋಪಿಗೆ ಕೂಡಲೆ ಕಠಿಣ ಗಲ್ಲು ಶಿಕ್ಷೆ ವಿಧಿಸಬೇಕು. ಅಲ್ಲದೇ ಹಿಂದೂ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ, ಈ ದುಷ್ಟ ಮಾನಸಿಕ ಜಿಹಾದಿಗಳಿಂದ ಸೂಕ್ತ ಕಾನೂನಿನ ರಕ್ಷಣೆ ಒದಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಮಂಡಳ ಅಧ್ಯಕ್ಷ ಮಂಜುನಾಥ ಪಾಟೀಲ, ಶ್ರೀಕಾಂತ ಸಾನು, ಅಶೋಕ ಚಲವಾದಿ, ವಿನಾಯಕ ರಾಯ್ಕರ, ಗುರು ಕಾಮತ, ಭರತರಾಜ ಹದಳಗಿ, ಮಂಜುನಾಥ ಶೇಟ್, ವೀಣಾ ಓಶಿಮಠ, ಫಣಿರಾಜ ಹದಳಗಿ, ಬಸವರಾಜ ಠಣಕೆದಾರ, ಮಲ್ಲಿಕಾರ್ಜುನ ಗೌಳಿ, ಮಂಜುನಾಥ ರ‍್ಮಲಕರ, ಮಂಜುನಾಥ ಹರಿಜನ, ರವಿ ಹಾವೇರಿ, ಪ್ರಕಾಶ ಬಡಿಗೇರ, ಶಂಕರ ಲಮಾಣಿ, ವಿಠ್ಠಲ್ ಬಾಳಂಬೀಡ, ಸಂತೋಷ ತಳವಾರ, ತಂಗಮ್ ಚಿನ್ನನ್ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!