ದಾವಣಗೆರೆ ತಾಲೂಕಿನ ನಲ್ಕುಂದ ಗ್ರಾಮದಲ್ಲಿ ಮಂಗಳವಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಅನುಷ್ಠಾನವನ್ನು ವಿರೋಧಿಸಿ ಗ್ರಾಮಸ್ಥರು, ಪೋಷಕರು, ಎಸ್‌ಡಿಎಂಸಿ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಹಾಗೂ ಎಐಡಿಎಸ್‌ಒ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ದಾವಣಗೆರೆ: ತಾಲೂಕಿನ ನಲ್ಕುಂದ ಗ್ರಾಮದಲ್ಲಿ ಮಂಗಳವಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಅನುಷ್ಠಾನವನ್ನು ವಿರೋಧಿಸಿ ಗ್ರಾಮಸ್ಥರು, ಪೋಷಕರು, ಎಸ್‌ಡಿಎಂಸಿ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಹಾಗೂ ಎಐಡಿಎಸ್‌ಒ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಮಧು ತೊಗಲೇರಿ ಮಾತನಾಡಿ, ಸತತ ಐದು ತಿಂಗಳಿಂದ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹಿಂಪಡೆಯಲು ಆಗ್ರಹಿಸಿ ಹಳ್ಳಿ ತಾಲೂಕು ಜಿಲ್ಲಾ ರಾಜ್ಯಮಟ್ಟದಲ್ಲಿ ಪ್ರತಿರೋಧ ವ್ಯಕ್ತವಾಗಿದೆ. ಹಲವಾರು ಸಾಹಿತಿಗಳು ಶಿಕ್ಷಣ ತಜ್ಞರು ಕೆಪಿಎಸ್ ಮ್ಯಾಗ್ನೆಟ್ ನೀತಿ ಹಿಂಪಡೆಯಲು ಆಗ್ರಹಿಸಿದ್ದಾರೆ. ಆದರೂ, ಯಾರ ಮಾತನ್ನು ಕೇಳಿಸಿಕೊಳ್ಳದ ಹಠವಾದಿ. ವಿದ್ಯಾರ್ಥಿ ವಿರೋಧಿ, ಬಡಜನ ವಿರೋಧಿ ರಾಜ್ಯ ಸರ್ಕಾರ ಕೆಪಿಎಸ್ ಯೋಜನೆಯ ಜಾರಿಗೊಳಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ಕಿಡಿಕಾರಿದರು.
ಈಗಿರುವ ಸರ್ಕಾರಿ ಶಾಲೆಗಳನ್ನು ಬೆಳೆಸಿ, ನಮ್ಮೂರ ಶಾಲೆಯನ್ನು ನಾವು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ. ನಲ್ಕುಂದ ಶಾಲೆ ಹಲವಾರು ಕೊಠಡಿಗಳು ಸೋರುತ್ತದೆ ಸಮರ್ಪಕ ಕಟ್ಟಡವನ್ನು ಒದಗಿಸಿ ಹೆಚ್ಚುವರಿ ಶಿಕ್ಷಕರನ್ನು ನೇಮಿಸಿ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಊರಿನ ಮುಖಂಡರು ಸಾರ್ವಜನಿಕ ಶಿಕ್ಷಣದ ಸಮಿತಿ ಉಪಾಧ್ಯಕ್ಷ ಮಹಾದೇವಪ್ಪ, ಗ್ರಾಪಂ ಸದಸ್ಯರಾದ ರಂಗಸ್ವಾಮಿ, ಶಿವಲಿಂಗಪ್ಪ, ಎಸ್‌ಜಿಎಂಸಿ ಅಧ್ಯಕ್ಷ ನಾಗರಾಜ್, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಅಧ್ಯಕ್ಷ ದೇವೇಂದ್ರಪ್ಪ, ಕಾರ್ಯದರ್ಶಿ ಆಂಜನೇಯ, ಹನುಮಂತಪ್ಪ, ಎಐಕೆಎಂಎಸ್ ದ್ಯಾಮೇನಹಳ್ಳಿ ಮತ್ತು ನಲ್ಕುಂದ ಘಟಕದ ಸದಸ್ಯರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.