ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸಕಲೇಶಪುರದಲ್ಲಿ ಪ್ರತಿಭಟನೆ

KannadaprabhaNewsNetwork |  
Published : Jul 06, 2025, 01:51 AM IST
5ಎಚ್ಎಸ್ಎನ್12 : ಸಕಲೇಶಪುರದಲ್ಲಿ ಸುದ್ದಿಗೋಷ್ಠಿ ಉzಶಿಸಿ ಎ.ಐ.ಟಿ.ಯು.ಸಿ  ತಾಲೂಕು ಅಧಕ್ಷ ಹರೀಶ್ ಹಾಗೂ ಸಂಗಡಿಗರು ಮಾತನಾಡಿದರು. | Kannada Prabha

ಸಾರಾಂಶ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ದೇಶಾದ್ಯಾಂತ ಹಮ್ಮಿಕೊಂಡಿರುವ ಪ್ರತಿಭಟನೆ ಅಂಗವಾಗಿ ತಾಲೂಕಿನಲ್ಲಿ ಸಹ ಜು.9 ರಂದು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ತಾಲೂಕು ಅಧಕ್ಷ ಹರೀಶ್ ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರು ದುಡಿಯುವ ಸಮಯವನ್ನು ೮ ಗಂಟೆಯಿಂದ ೧೦ ಗಂಟೆಗೆ ಹೆಚ್ಚಿಸಿರುವುದು ಖಂಡನೀಯ. ಕೇಂದ್ರ ಹಾಗೂ ರಾಜ್ ಸರ್ಕಾರಗಳು ೨೯ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಕೇವಲ ನಾಲ್ಕು ಕಾನೂನು ಜಾರಿಗೆ ಮಾಡಿದೆ ಎಂದರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ದೇಶಾದ್ಯಾಂತ ಹಮ್ಮಿಕೊಂಡಿರುವ ಪ್ರತಿಭಟನೆ ಅಂಗವಾಗಿ ತಾಲೂಕಿನಲ್ಲಿ ಸಹ ಜು.9 ರಂದು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ತಾಲೂಕು ಅಧಕ್ಷ ಹರೀಶ್ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಸ್ತೆಗಳನ್ನು, ವಿದ್ಯುಚ್ಛಕ್ತಿ, ಪೆಟ್ರೋಲ್, ಗ್ಯಾಸ್ ಉತ್ಪಾದಿಸುವ ಘಟಕಗಳನ್ನು, ಮಿಲಿಟರಿಗೆ ಅಗತ್ಯ ಪರಿಕರಗಳನ್ನು ಉತ್ಪಾದನೆ ಮಾಡುವ ಕಾರ್ಖಾನೆಗಳು, ವಿಮಾನ, ರೈಲ್ವೆ, ಬಸ್ಸುಗಳನ್ನು ಖಾಸಗೀಕರಣ ಮಾಡುತ್ತಿದ್ದು ಇದನ್ನು ವಿರೋಧಿಸಿ ಜುಲೈ ೯ರಂದು ಸಕಲೇಶಪುರ ತಾಲೂಕಿನಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಆಯೋಜನೆ ಮಾಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಪ್ರತಿಭಟನಾ ಮೆರವಣಿಗೆ ಬೆಳಗ್ಗೆ ೧೦-೩೦ಕ್ಕೆ ಪಟ್ಟಣದ ಹೇಮಾವತಿ ಪ್ರತಿಮೆ ಮುಂಭಾಗದಿಂದ ಹಳೆ ಬಸ್ ನಿಲ್ದಾಣದವರಗೆ ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಮಿಕರು ಪ್ರತಿಭಟನೆಗೆ ಸೇರಲಿದ್ದಾರೆ ಎಂದರು.

ಸಿಐಟಿಯುನ ತಾಲೂಕು ಸಂಚಾಲಕಿ ಸೌಮ್ಯ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರು ದುಡಿಯುವ ಸಮಯವನ್ನು ೮ ಗಂಟೆಯಿಂದ ೧೦ ಗಂಟೆಗೆ ಹೆಚ್ಚಿಸಿರುವುದು ಖಂಡನೀಯ. ಕೇಂದ್ರ ಹಾಗೂ ರಾಜ್ ಸರ್ಕಾರಗಳು ೨೯ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಕೇವಲ ನಾಲ್ಕು ಕಾನೂನು ಜಾರಿಗೆ ಮಾಡಿದೆ. ಕಾರ್ಮಿಕರಿಗೆ ಹೊಸ ಕಾಯ್ದೆ ವಿರೋಧಿಸಿ ದೇಶಾದ್ಯಂತ ಎ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದ್ದು ರೈತಾಪಿ ಜನರು, ಕೂಲಿ ಕಾರ್ಮಿಕರು, ಅಂಗನವಾಡಿ, ಗ್ರಾಮ ಪಂಚಾಯತ್ ನೌಕರರು ಸಹ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಎಐಟಿಯುಸಿ ಪದಾಧಿಕಾರಿಗಳಾದ ಥಾಮಸ್, ಮಂಜು, ಸುಂದರ್‌ ಉಪಸ್ಥಿತರಿದ್ದರು.

PREV

Recommended Stories

ಹಾಡಹಗಲೇ ಮನೆಗೆ ನುಗ್ಗಿ ಚಹಾ ವ್ಯಾಪಾರಿಯ ಕತ್ತು ಕೊಯ್ದು ಹತ್ಯೆ
ದುಡ್ಡಿನ ಮಳೆ ಸುರಿಸುವುದಾಗಿ ನಂಬಿಸಿ ಮಹಾಧೋಖಾ!