ಶಿಗ್ಗಾಂವಿಯಲ್ಲಿ ನರೇಗಾ ಹಣ ಮಂಜೂರಿಗೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Mar 14, 2025, 12:35 AM IST
ಶಿಗ್ಗಾಂವಿ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಹಲಗೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಅನೇಕ ಅಭಿವೃದ್ಧಿ ಯೋಜನೆಗಳಿಗೆ ಬಳಕೆ ಮಾಡಬಹುದಾದ ₹೧೫ ಲಕ್ಷ ಅನುದಾನ ರದ್ದಾಗಿದೆ. ೭ ದಿನ ಗಡುವು ನೀಡಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಕ್ಷಣ ಅಂತಹ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕು. ಇಲ್ಲದಿದ್ದಲ್ಲಿ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಶಿಗ್ಗಾಂವಿ: ತಾಲೂಕಿನ ಹಿರೇಮಲ್ಲೂರ ಗ್ರಾಮ ಪಂಚಾಯಿತಿಗೆ ನರೇಗಾ ಯೋಜನೆಯಲ್ಲಿನ ರದ್ದಾದ ಹಣ ಮಂಜೂರಾತಿ ಮಾಡಬೇಕೆಂದು ಆಗ್ರಹಿಸಿ ನರೇಗಾ ಸಾಮಗ್ರಿಗಳ ಪೂರೈಕೆದಾರರ ಬಳಗದ ಪದಾಧಿಕಾರಿಗಳು, ತಾಲೂಕು ಜೀವಿಕ ಜೀತ ವಿಮುಕ್ತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಅಸಂಘಟಿತ ಕಾರ್ಮಿಕರ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ತಾಲೂಕು ಪಂಚಾಯಿತಿ ಕಚೇರಿ ಮುಂದೆ ಹಲಗೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಿದರು.ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ತಾಲೂಕಿನ ಹಿರೇಮಲ್ಲೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಡೆದಿರುವ ಕಾಮಗಾರಿಗಳಿಗೆ ಸರ್ಕಾರ ಸುಮಾರು ₹೭೮ ಲಕ್ಷ ಅನುದಾನ ಬಿಡುಗಡೆ ಮಾಡಿದೆ. ಅದರಲ್ಲಿ ಈಗಾಗಲೇ ₹೬೩ ಲಕ್ಷ ಅನುದಾನದಲ್ಲಿ ಕಾಮಗಾರಿ ಆರಂಭವಾಗಿವೆ. ಹಣಕಾಸಿನ ಅನುಮೋದನೆಗೆ ಶಿಫಾರಸು ಮಾಡಲಾಗಿದೆ. ಆದರೆ ಅದರಲ್ಲಿರುವ ₹೧೫ ಲಕ್ಷ ಅನುದಾನ ರದ್ದುಪಡಿಸಲಾಗಿದ್ದು, ಇದಕ್ಕೆ ತಾಲೂಕು ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದರು.

ಅನೇಕ ಅಭಿವೃದ್ಧಿ ಯೋಜನೆಗಳಿಗೆ ಬಳಕೆ ಮಾಡಬಹುದಾದ ₹೧೫ ಲಕ್ಷ ಅನುದಾನ ರದ್ದಾಗಿದೆ. ೭ ದಿನ ಗಡವು ನೀಡಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಕ್ಷಣ ಅಂತಹ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕು. ಇಲ್ಲದಿದ್ದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.ಮುಖಂಡರಾದ ರಾಮನಗೌಡ ಕರೆಗೌಡ್ರ, ತಿಪ್ಪಣ್ಣ ಕ್ಯಾಲಕೊಂಡ, ಸುರೇಶ ಹರಿಜನ, ಪ್ರಕಾಶ ಕ್ಯಾಲಕೊಂಡ, ಬಾಬರ ನದಾಫ್, ಉಮೇಶ ಗಾಳಿಗೌಡ್ರ, ಶರಣಪ್ಪ ಕುಂಬಾರ, ಮಾರುತಿ ವಾಲ್ಮೀಕಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ತಕ್ಷಣ ಮಂಜೂರಾತಿ: ನರೇಗಾ ಯೋಜನೆಯಲ್ಲಿ ತಾಂತ್ರಿಕ ದೋಷದಿಂದ ಹಿರೇಮಲ್ಲೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೪ ಯೋಜನೆಗಳು ಕೈಬಿಟ್ಟಿದ್ದು, ಅದನ್ನು ಸರಿಪಡಿಸಿ ತಕ್ಷಣ ಮಂಜೂರಾತಿ ನೀಡಲಾಗುವುದು ಎಂದು ತಾಲೂಕು ಪಂಚಾಯಿತಿ ಇಒ ಕುಮಾರ ಮಣ್ಣವಡ್ಡರ ತಿಳಿಸಿದರು.ಪಕ್ಷಿ ಸಂತತಿ ರಕ್ಷಣೆ ನಮ್ಮೆಲ್ಲರ ಹೊಣೆ

ರಾಣಿಬೆನ್ನೂರು: ಪ್ರಾಣಿ, ಪಕ್ಷಿಗಳಿಗೆ ಆಹಾರ ಮತ್ತು ನೀರಿನ ಕೊರತೆ, ಮನುಷ್ಯನ ದುರಾಸೆಯಿಂದ ಪಕ್ಷಿ ಸಂಕುಲ ಅಳಿವಿನ ಅಂಚಿನಲ್ಲಿದೆ ಎಂದು ಬಿಇಡಿ ಕಾಲೇಜಿನ ಪ್ರಾ. ಡಾ. ಎಂ.ಎಂ. ಮೃತ್ಯುಂಜಯ ತಿಳಿಸಿದರು.ನಗರದ ಬಿಎಜೆಎಸ್‌ಎಸ್ ಬಿಇಡಿ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಬಿಸಿಲಿನ ಬೇಗೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾವು ಬೆಳೆದ ಬೆಳೆಗಳನ್ನು ತಿಂದು ಬಿಡುತ್ತವೆ ಎಂದು ರೈತರು ಅಳವಡಿಸಿದ ಬಲೆಗೆ ಪ್ರಾಣಿ ಪಕ್ಷಿಗಳು ಬಿದ್ದು ಸಾಯುತ್ತಿವೆ. ಇದರ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದರು.ಪ್ರೊ. ಎಚ್.ಎ. ಭಿಕ್ಷಾವರ್ತಿಮಠ ಮಾತನಾಡಿದರು. ಪ್ರೊ. ಪರಶುರಾಮ ಪವಾರ, ರುಕ್ಮಿಣಿ, ಉಮಾ ಕಂಬಳಿ, ಬೀರಪ್ಪ ಲಮಾಣಿ, ಲಕ್ಷ್ಮಿ ಹಣಚಿಕ್ಕಿ, ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ, ಎನ್ನೆಸ್ಸೆಸ್ ಸ್ವಯಂಸೇವಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''