ಹಿಟ್ ಆ್ಯಂಡ್ ರನ್ ನಿಯಮ ರದ್ದತಿಗೆ ಆಗ್ರಹಿಸಿ ಲಾರಿ ಚಾಲಕ ಮಾಲಕರ ಪ್ರತಿಭಟನೆ

KannadaprabhaNewsNetwork |  
Published : Jan 18, 2024, 02:04 AM IST
ಪೋಟೊ17ಕೆಎಸಟಿ2: ಕುಷ್ಟಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.17ಕೆಎಸಟಿ1ಎ: ಕುಷ್ಟಗಿ ಗ್ರೇಡ್ 2 ತಹಸೀಲ್ದಾರ ಮುರುಳೀಧರ ಅವರಿಗೆ ಲಾರಿ ಚಾಲಕರು ಹಾಗೂ ಮಾಲಿಕರ ಸಂಘದವರು ಮನವಿ ಪತ್ರವನ್ನು ಸಲ್ಲಿಸಿದರು. | Kannada Prabha

ಸಾರಾಂಶ

ನಮ್ಮ ರಾಜ್ಯದ ಗಡಿ ಭಾಗಗಳಲ್ಲಿರುವ ಎಲ್ಲ ಸಾರಿಗೆ ಇಲಾಖೆ ತಪಾಸಣೆ ಠಾಣೆಗಳನ್ನು ತೆಗೆದು ಹಾಕಬೇಕು. ಇಲ್ಲವಾದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳಿಗೆ ನೇರ ಸಂಪರ್ಕ ಕಲ್ಪಿಸಬೇಕು.

ಕುಷ್ಟಗಿ: ತಾಲೂಕು ಲಾರಿ ಮಾಲೀಕರ ಮತ್ತು ಚಾಲಕರ ಸಂಘದ ಸದಸ್ಯರು ಹಾಗೂ ವಿವಿಧ ವಾಹನಗಳ ಚಾಲಕರು ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಹಿಟ್ ಆ್ಯಂಡ್ ರನ್ ನಿಯಮದಡಿ ಚಾಲಕರಿಗೆ 10 ವರ್ಷ ಜೈಲು, 7 ಲಕ್ಷ ದಂಡದ ನಿಯಮವನ್ನು ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿ ಮಾತನಾಡಿದ ಪ್ರತಿಭಟನಾಕಾರರು, ಇತ್ತೀಚೆಗೆ ಕೇಂದ್ರ ಸರ್ಕಾರ ತಂದಿರುವ ಭಾರತೀಯ ನ್ಯಾಯ ಸಂಹಿತೆಯ ಕಲಂ 106ರ ಉಪವಿಧಿ 1 ಮತ್ತು 2 ನಮ್ಮ ಉದ್ದಿಮೆಯಲ್ಲಿ ಕೆಲಸ ಮಾಡುವ ಚಾಲಕರು ವೃತ್ತಿಯಿಂದ ಹೊರಗುಳಿಯುವಂತೆ ಮಾಡಿದೆ. ಅದನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಆಗ್ರಹಿಸಿದರು.ಚಾಲಕ ವೃತ್ತಿಯನ್ನು ಉಪಜೀವನದ ಸಲುವಾಗಿ ಕಡು ಬಡವರು, ಉನ್ನತ ವಿದ್ಯಾಭ್ಯಾಸ ಹೊಂದಿಲ್ಲದವರು, ಮನೆತನದ ಪೂರ್ಣ ಜವಾಬ್ದಾರಿ ಹೊಂದಿರುವವರು, ಯುವಕರು ಜಾಸ್ತಿ ಜನ ಇದ್ದು ಬೇರೆ ಯಾವುದೇ ಕಾರ್ಯ ಗೊತ್ತಿಲ್ಲದವರು ಇದ್ದಾರೆ. ಸರ್ಕಾರದ ಕಾಯ್ದೆಯಿಂದ ಚಾಲಕ-ಮಾಲಕರು ಬೀದಿಪಾಲಾಗುವ ಸಂಭವವಿದೆ. ಸಂವಿಧಾನಾತ್ಮಕವಾಗಿ ಸಮಾನತೆಯಿಂದ ವಂಚಿತರಾಗುವ ಸಾಧ್ಯತೆಗಳು ಸಾಕಷ್ಟು ಇರುವುದರಿಂದ ಇತ್ತೀಚೆಗೆ ಕೇಂದ್ರ ಸರ್ಕಾರವು ತಂದಿರುವ ಭಾರತೀಯ ನ್ಯಾಯ ಸಂಹಿತೆಯ ಕಲಂ 106 ರ ಉಪವಿಧಿ 1 ಮತ್ತು 2 ರದ್ದುಗೊಳಿಸುವವರೆಗೆ ಅನಿರ್ದಿಷ್ಟ ಕಾಲ ಮುಷ್ಕರ ಮುಂದುವರೆಸಲಾಗುವುದು ಎಂದರು.ನಮ್ಮ ರಾಜ್ಯದ ಗಡಿ ಭಾಗಗಳಲ್ಲಿರುವ ಎಲ್ಲ ಸಾರಿಗೆ ಇಲಾಖೆ ತಪಾಸಣೆ ಠಾಣೆಗಳನ್ನು ತೆಗೆದು ಹಾಕಬೇಕು. ಇಲ್ಲವಾದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳಿಗೆ ನೇರ ಸಂಪರ್ಕ ಕಲ್ಪಿಸಬೇಕು. ಕಪ್ಪು ಪಟ್ಟಿಯಲ್ಲಿರುವ ವಾಣಿಜ್ಯ ವಾಹನಗಳಿಗೆ ಎಫ್.ಸಿ ಮತ್ತು ಪರ್ಮಿಟ್ ನವೀಕರಣ ಮಾಡಿಕೊಡಲು ನಿರಾಕರಿಸುವುದನ್ನು ನಿಲ್ಲಿಸಬೇಕು ಎಂದರು. ಡಿಎಸ್.ಎ ಕೇಸುಗಳು ಎಲ್ಲೇ ಇದ್ದರೂ ಅದನ್ನು ವಾಹನ ಮಾಲೀಕರು ತಮ್ಮ ಮೂಲ ಕಚೇರಿಯಲ್ಲಿ ಮುಗಿಸಿಕೊಳ್ಳುವ ಅವಕಾಶ ನೀಡಬೇಕು. ಬೆಂಗಳೂರು ನಗರದಲ್ಲಿ ಸರಕು ಸಾಗಾಣಿಕೆ ವಾಹನಗಳ ನಗರ ಪ್ರವೇಶಕ್ಕೆ ದಿನದ ಕೆಲವು ಸಮಯದಲ್ಲಿ ಮಾಡಿರುವ ನಿರ್ಬಂಧವನ್ನು ಸಂಪೂರ್ಣವಾಗಿ ಕೈಬಿಡಬೇಕು. ಅಪಘಾತ ನಡೆದಾಗ ವಾಹನದ ಚಾಲಕನ ಚಾಲನಾ ಪತ್ರವನ್ನು ವಶಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು. ಅಪಘಾತ ನಡೆದ ನಂತರ ವಶಪಡಿಸಿಕೊಂಡ ವಾಹನ ಮತ್ತು ಚಾಲಕನನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು. ಚಾಲಕನ ಚಾಲನಾ ಪರವಾನಿಗೆ ಅಮಾನತ್ತಿನಲ್ಲಿಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಪತ್ರ ಬರೆಯುವುದನ್ನು ನಿಲ್ಲಿಸಬೇಕು ಎಂದರು.ಹೊರ ರಾಜ್ಯಗಳ ವಾಹನಗಳು ನಮ್ಮ ರಾಜ್ಯದಲ್ಲಿ ಅಪಘಾತಕ್ಕೆ ಈಡಾದಾಗ, ವಾಹನ ಮತ್ತು ಚಾಲಕನ ಬಿಡುಗಡೆಗೆ ಸ್ಥಳೀಯ ಭದ್ರತೆ ಮತ್ತು ಜಾಮೀನು ಕೇಳುವುದನ್ನು ನಿಲ್ಲಿಸಬೇಕು. ವಾಹನಗಳು ಬ್ರೇಕ್ ಡೌನ್ ಆಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ರಸ್ತೆ ಬದಿಯಲ್ಲಿ ನಿಂತಿದ್ದರೂ ವಾಹನಗಳನ್ನು ವಶಪಡಿಸಿಕೊಂಡು ಕಲಂ 283 ರ ಅಡಿಯಲ್ಲಿ ಕೇಸು ದಾಖಲಿಸುವುದನ್ನು ನಿಲ್ಲಿಸಬೇಕು ಎಂದರು.ಈ ಸಂದರ್ಭದಲ್ಲಿ ಚಂದ್ರಕಾಂತ ಓಮನಹಳ್ಳಿ, ಸುರೇಶ ರಾಜೇಸಾಬ ಕಲಾಲಬಂಡಿ ಸೇರಿದಂತೆ ಚಾಲಕರ ಸಂಘದ ಅಧ್ಯಕ್ಷರು, ಮಾಲಕರ ಸಂಘದ ಅಧ್ಯಕ್ಷರು, ಚಾಲಕರು-ಮಾಲೀಕರು ಇದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ