ಹಿರೇಕೆರೂರು: ರೈತರ, ಸಾರ್ವಜನಿಕರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಡಿ. 6ರಂದು ರಟ್ಟೀಹಳ್ಳಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಡಿ.6ರಂದು ಬೆಳಿಗ್ಗೆ 10 ಗಂಟೆಯಿಂದ ರಟ್ಟೀಹಳ್ಳಿಯ ಭಗತ್‌ಸಿಂಗ್ ವೃತ್ತದಲ್ಲಿ ರಾಣಿಬೆನ್ನೂರ-ಬೈಂದೂರ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಪ್ರತಿ ಗ್ರಾಮದಿಂದ ರೈತರು, ಕಾರ್ಯಕರ್ತರು ಪಾಲ್ಗೊಂಡು ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡಬೇಕು ಎಂದು ಮನವಿ ಮಾಡಿದರು.ಸ್ಥಳಕ್ಕೆ ಜಿಲ್ಲಾಧಿಕಾರಿ, ಎಸ್ಪಿ, ಅಬಕಾರಿ ಎಸ್ಪಿ, ಹೆಸ್ಕಾಂ ಎಂಡಿ, ಡಿಎಚ್‌ಒ ಸ್ಥಳಕ್ಕೆ ಆಗಮಿಸಿ ಜನತೆಯ ಎಲ್ಲ ಸಮಸ್ಯೆಗಳ ಪರಿಹಾರ ನೀಡಬೇಕು ಇಲ್ಲವಾದಲ್ಲಿ ಪ್ರತಿಭಟನೆ ಸ್ವರೂಪ ಬದಲಾಗಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ವರೆಗೂ ಬಿಡುವುದಿಲ್ಲ ಎಂದರು.ಹಿರೇಕೆರೂರ ವಿಧಾನ ಸಭಾ ಕ್ಷೇತ್ರದ ಮಾಸೂರು ಮತ್ತು ರಟ್ಟೀಹಳ್ಳಿ ಸರ್ಕಾರಿ ಆಸ್ಪತ್ರೆಗಳನ್ನು ಕೆಳ ದರ್ಜೆಗೆ ಏರಿಸಿದ್ದು ದೊಡ್ಡ ದುರಂತದ ಸಂಗತಿಯಾಗಿದೆ. ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 2022 ರಲ್ಲಿ ಅಕ್ರಮ-ಸಕ್ರಮ ಯೋಜನೆಯಡಿ ರೈತರು ವಿದ್ಯುತ್ ಪರಿವರ್ತಕಗಳನ್ನು ಪಡೆದಕೊಳ್ಳಲು ಹಣ ಪಾವತಿ ಮಾಡಿದ್ದರೂ ಸಮರ್ಪಕವಾಗಿ ಅನುಷ್ಠಾನವಾಗದೇ ತಾರತಮ್ಯ ಮಾಡಲಾಗುತ್ತಿದೆ ಹಾಗೂ ವಿದ್ಯುತ್ ಪೊರೈಕೆ ಸಮರ್ಪಕವಾಗಿ ಮಾಡುತ್ತಿಲ್ಲ ಅಕ್ರಮ ಚಟುವಟಿಕೆಗಳು ಅಧಿಕವಾಗಿ ಸಾಮಾಜಿಕ ವ್ಯವಸ್ಥೆ ಹಾಳಾಗುತ್ತಿದೆ ಎಂದು ಸರ್ಕಾರಕ್ಕೆ ನಾನು ಪತ್ರ ಬರೆದರೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ಈ ಎಲ್ಲ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಲು ಅವಳಿ ತಾಲೂಕಿನ ರೈತರು, ಸಾರ್ವಜನಿಕರು, ಮಹಿಳೆಯರು ಪಾಲ್ಗೊಂಡು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಿ ನಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದರು.ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಸಂಜೀವಯ್ಯ ಕಬ್ಬಿಣಕಂತಿಮಠ, ದೇವರಾಜ ನಾಗಣ್ಣನವರ, ದೊಡ್ಡಗೌಡ ಪಾಟೀಲ, ರವಿಶಂಕರ ಬಾಳಿಕಾಯಿ, ಆರ್.ಎನ್.ಗಂಗೋಳ, ಜಿ.ಪಿ.ಪ್ರಕಾಶ, ಗುರುಶಾಂತ ಎತ್ತಿನಹಳ್ಳಿ, ಆನಂದಪ್ಪ ಹಾದಿಮನಿ, ಮಾಲತೇಶ ಗಂಗೋಳ, ಶಿವಕುಮಾರ ತಿಪ್ಪಶೆಟ್ಟಿ, ಜಗದೀಶ ದೊಡ್ಡಗೌಡ್ರ, ಆರ್.ಬಿ.ನೀಲನಗೌಡ್ರ, ಬಿ.ಟಿ. ಚಿಂದಿ, ರಾಜು ಹುಚಗೊಂಡ್ರ, ಪರಮೇಶಪ್ಪ ಹಲಗೇರಿ, ಮಹೇಶ ಭರಮಗೌಡ್ರ, ಹುಚ್ಚನಗೌಡ ಕಬ್ಬಕ್ಕಿ, ನಾಗರಾಜ ಹಿರೇಮಠ, ಸುಶೀಲ್ ನಾಡಿಗೇರ, ಪ್ರಶಾಂತ ದ್ಯಾವಕ್ಕಳವರ, ಹನುಮಂತಪ್ಪ ಕುರುಬರ, ಮಹೇಶ ತಿಪ್ಪಣ್ಣನವರ, ಗಂಗಾಧರ ಬೋಗೇರ, ಹನುಮಂತಪ್ಪ ಗಾಜೇರ ಸೇರಿದಂತೆ ಕಾರ್ಯಕರ್ತರಿದ್ದರು.