ಬೆಂಬಲ ಬೆಲೆಗೆ ಒತ್ತಾಯಿಸಿ ಮಾ. ೫ರಂದು ಪ್ರತಿಭಟನೆ

KannadaprabhaNewsNetwork |  
Published : Feb 26, 2025, 01:03 AM IST
ಕುರುಗೋಡು ೦೧ ತಾಲೂಕಿನ ಸಮೀಪದ ಶ್ರೀನಿವಾಸ ಕ್ಯಾಂಪಿನಲ್ಲಿ ಸೋಮವಾರ ಜರುಗಿದ ಒಣಮೆಣಸಿನಕಾಯಿ ಬೆಳೆಗಾರರ ಕುಂದುಕೊರತೆ ಸಭೆಯಲ್ಲಿ ರಾಜ್ಯರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಮಾಧವರೆಡ್ಡಿ ಮಾತನಾಡಿದರು. | Kannada Prabha

ಸಾರಾಂಶ

ಒಣಮೆಣಸಿನಕಾಯಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಒತ್ತಾಯಿಸಿ ಮಾರ್ಚ್‌ ೫ರಂದು ಹೋರಾಟ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು.

ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ರಾಜ್ಯ ಘಟಕದ ಅಧ್ಯಕ್ಷ ಮಾಧವರೆಡ್ಡಿ

ಕನ್ನಡಪ್ರಭ ವಾರ್ತೆ ಕುರುಗೋಡು

ಒಣಮೆಣಸಿನಕಾಯಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಒತ್ತಾಯಿಸಿ ಮಾರ್ಚ್‌ ೫ರಂದು ಹೋರಾಟ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ರಾಜ್ಯ ಘಟಕದ ಅಧ್ಯಕ್ಷ ಮಾಧವರೆಡ್ಡಿ ಹೇಳಿದರು.

ತಾಲೂಕಿನ ಸಮೀಪದ ಶ್ರೀನಿವಾಸ ಕ್ಯಾಂಪ್‌ನಲ್ಲಿ ಸೋಮವಾರ ಜರುಗಿದ ಒಣಮೆಣಸಿನಕಾಯಿ ಬೆಳೆಗಾರರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಸೀಮಾಂಧ್ರದ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ತಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಒಂದು ಕ್ವಿಂಟಲ್ ಒಣಮೆಣಸಿನಕಾಯಿಗೆ ₹೧೧೬೦೦ ದರದಲ್ಲಿ ಖರೀದಿ ಪ್ರಕ್ರಿಯೆ ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ಮಾದರಿಯಲ್ಲಿ ನಮ್ಮ ರಾಜ್ಯದ ಸಂಸದರು ಪ್ರಧಾನಿ ಮೇಲೆ ಒತ್ತಡತರುವ ಅಗತ್ಯವಿದೆ ಎಂದರು.

ಪ್ರಯಾಗ್ ರಾಜ್‌ನ ಕಲುಷಿತ ನೀರಿನಲ್ಲಿ ಪುಣ್ಯಸ್ನಾನ ಮಾಡಲು ಕೊಟ್ಯಾಂತರ ಜನರು ಸೇರುತ್ತಾರೆ. ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಲು ಒತ್ತಾಯಿಸಿ ನಡೆಸುವ ಹೋರಾಟಗಳಿಗೆ ಜನರು ಸೇರದಿರುವುದು ವಿಷಾದಕರ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಮುಖಂಡರಾದ ಲಕ್ಷ್ಮೀಕಾಂತ ರೆಡ್ಡಿ ಮತ್ತು ರಂಗಾರೆಡ್ಡಿ ಮಾತನಾಡಿ, ಎಲ್ಲ ವಸ್ತುಗಳಿಗೆ ಉತ್ಪಾದಕರು ಬೆಲೆ ನಿಗದಿ ಮಾಡುತ್ತಾರೆ. ರೈತರು ಬೆಳೆದ ಬೆಳೆಗೆ ಮಧ್ಯರ‍್ತಿಗಳು ಬೆಲೆ ನಿಗದಿತೊಳಿಸುವುದು ಉತ್ತಮ ಬೆಳವಣಿಗೆಯಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಒಣಮೆಣಸಿನಕಾಯಿಯಲ್ಲಿ ವಿಷಕಾರಿ ಅಂಶ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಹೇಳಿ ಕಡಿಮೆ ದರದಲ್ಲಿ ಖರೀದಿಸಲು ಮದ್ಯವರ್ತಿಗಳು ಸಂಚು ರೂಪಿಸುತ್ತಿದ್ದಾರೆ. ಪ್ರತಿವರ್ಷ ನಷ್ಟದಲ್ಲಿಯೇ ಕಾಲದೂಡುತ್ತಿರುವ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಫಲವಾಗಿವೆ ಎಂದು ಆರೋಪಿಸಿದರು.

ರೈತರಾದ ರಾಘವೇಂದ್ರ, ಮಲ್ಲಿಕಾರ್ಜುನರೆಡ್ಡಿ, ಓಂಕಾರಿ, ಸುರೇಶ್, ಬಸವರಾಜ, ಉಮಾಪತಿ, ಪಂಪಾಪತಿ, ವೀರೇಂದ್ರ ರೆಡ್ಡಿ, ಸುರೇಂದ್ರ, ಬಸವರಾಜ ಮತ್ತು ವಿರೂಪಾಕ್ಷಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ