ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಿಎಂ ಕುಸುಮ್ ಯೋಜನೆ, ಪಿಎಂ ಸೂರ್ಯಘರ್ ಯೋಜನೆ ಕುರಿತು ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಜಿಲ್ಲೆಯಲ್ಲಿ ನಿರ್ಲಕ್ಷ ಮಾಡುತ್ತಿರುವುದು ಸರಿಯಲ್ಲ ಎಂದರು.
ಈ ಬಗ್ಗೆ ಸಭೆಗೆ ಮಾಹಿತಿ ನೀಡಿದ ಮೆಸ್ಕಾಂ ಎಸ್‌ಇ ಮಂಜುನಾಥ್, ಜಿಲ್ಲೆಯಲ್ಲಿ ಸೂರ್ಯಧರ್ ಯೋಜನೆ ಅಡಿ 1542 ಮಂದಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅದರಲ್ಲಿ 1461 ಅರ್ಜಿಗಳು ಕ್ರಮಬದ್ಧವಾಗಿದ್ದು, ಸ್ವೀಕೃತಗೊಂಡಿದ್ದವು. ಇದರಲ್ಲಿ 183 ಫಲಾನುಭವಿಗಳಿಗೆ ಯೋಜನೆ ತಲುಪಿಸಲಾಗಿದೆ. ಅದರಲ್ಲಿ 178 ಮಂದಿ ಫಲಾನುಭವಿಗಳ ಕಮಿಷನಿಂಗ್ ಮುಗಿದಿದೆ. 171 ಫಲಾನುಭವಿಗಳಿಗೆ ಸಬ್ಸಿಡಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಸೂರ್ಯ ಘರ್ ಯೋಜನೆ ಬಗ್ಗೆ ಜಿಲ್ಲೆಯಲ್ಲಿ ಮಾಹಿತಿ ಶಿಬಿರ ಆಯೋಜಿಸೋಣ. ಈ ಕಾರ್ಯಕ್ರಮ ಉದ್ಘಾಟನೆಗೆ ಕೇಂದ್ರ ಸಚಿವರನ್ನೇ ಆಹ್ವಾನಿಸೋಣ. ಶಿಬಿರದಲ್ಲಿ ಸ್ಥಳೀಯ ಜನಪ್ರತಿ ನಿಧಿಗಳು ಹಾಗೂ ಜನರಿಗೆ ಯೋಜನೆ ಬಗ್ಗೆ ಸೂಕ್ತ ಅರಿವು ಮೂಡಿಸೋಣ. ಆಗ ಜನರೇ ಈ ಯೋಜನೆಯತ್ತ ಒಲವು ತೋರುತ್ತಾರೆ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮೆಸ್ಕಾಂ ಅಧಿಕಾರಿ ಕುಸುಮ್ ಸಿ ಯೋಜನೆಯಡಿ ಸೋಲಾರ್ ಪ್ಯಾನಲ್ ಅಳವಡಿಕೆಗೆ ಸ್ಥಳೀಯ ರಿಂದ ವಿರೋಧ ವ್ಯಕ್ತವಾಗುತ್ತಿದೆ. ಹೀಗಾಗಿ ಸಮಸ್ಯೆಯಾಗಿದೆ ಎಂದು ಸಭೆ ಗಮನಕ್ಕೆ ತಂದರು.
ಸಭೆಯಲ್ಲಿ ಎಡಿಸಿ ನಂಜುಂಡೇಗೌಡ ಸೇರಿದಂತೆ ಮೆಸ್ಕಾಂ ಇಲಾಖೆ ಅಧಿಕಾರಿಗಳು ಉಪಸ್ಥಿತರರಿದ್ದರು.ಫೋಟೋ: