ಕುಡಿಯುವ ನೀರಿಗೂ ತಾತ್ವರ: ಪ್ರತಿಭಟನೆ

KannadaprabhaNewsNetwork |  
Published : Jul 15, 2026, 01:30 AM IST
14 ಟಿವಿಕೆ 1 – ತುರುವೇಕೆರೆ ತಾಲೂಕು ಶೆಟ್ಟಿಗೊಂಡನಹಳ್ಳಿಯ ವಿದ್ಯುತ್ ಪ್ರಸರಣ ಕೇಂದ್ರದ ಬಳಿ ರೈತರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ವಿದ್ಯುತ್ ಸರಬರಾಜಿನಲ್ಲಿ ಪದೇ ಪದೇ ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ ದನಕರುಗಳಿಗೆ ಮತ್ತು ಜನರಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ ಎಂದು ಆರೋಪಿಸಿ ಹತ್ತಾರು ಗ್ರಾಮಗಳ ನೂರಾರು ಮಂದಿ ತಾಲೂಕಿನ ಶೆಟ್ಟಿಗೊಂಡನಹಳ್ಳಿಯಲ್ಲಿರುವ ವಿದ್ಯುತ್ ಪ್ರಸರಣ ಉಪಕೇಂದ್ರದ ಬಳಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ತುರುವೇಕೆರೆ

ವಿದ್ಯುತ್ ಸರಬರಾಜಿನಲ್ಲಿ ಪದೇ ಪದೇ ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ ದನಕರುಗಳಿಗೆ ಮತ್ತು ಜನರಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ ಎಂದು ಆರೋಪಿಸಿ ಹತ್ತಾರು ಗ್ರಾಮಗಳ ನೂರಾರು ಮಂದಿ ತಾಲೂಕಿನ ಶೆಟ್ಟಿಗೊಂಡನಹಳ್ಳಿಯಲ್ಲಿರುವ ವಿದ್ಯುತ್ ಪ್ರಸರಣ ಉಪಕೇಂದ್ರದ ಬಳಿ ಪ್ರತಿಭಟನೆ ನಡೆಸಿದರು.

ಉಪಕೇಂದ್ರಕ್ಕೆ ಹನುಮಾಪುರ, ನರಿಗೇಹಳ್ಳಿ, ಬಾನಿಪಾಳ್ಯ, ಗೈನಾಥಪುರ, ಇಟ್ಟಿಗೇಹಳ್ಳಿ, ಯರದೇಹಳ್ಳಿ, ಮಲ್ಲದೇವನಹಳ್ಳಿ, ಸೀಗೇಹಳ್ಳಿ, ತುಯಲಹಳ್ಳಿ ಪಾಳ್ಯ ಸೇರಿದಂತೆ ಹತ್ತಾರು ಹಳ್ಳಿಗಳ ಜನರಿಗೆ ವಿದ್ಯುತ್ ಪ್ರಸರಣದಲ್ಲಿ ತೊಂದರೆಯಾಗಿದೆ ಎಂದು ಆರೋಪಿಸಿ ಜನರು ಸ್ವಯಂ ಪ್ರೇರಿತರಾಗಿ ಪ್ರತಿಭಟನೆ ಮಾಡಿದರು. ಕಳೆದ ಐದಾರು ದಿನಗಳಿಂದ ವಿದ್ಯುತ್ ಪ್ರಸರಣ ಸರಿಯಾಗಿ ಆಗಿಲ್ಲ. ಹಲವಾರು ಗ್ರಾಮಗಳಿಗೆ ಮೂರ್ನಾಲ್ಕು ದಿನಗಳಿಂದ ವಿದ್ಯುತ್ ಸರಬರಾಜು ಇಲ್ಲದೇ ಕುಡಿಯುವ ನೀರಿಗೂ ತತ್ವಾರವಾಗಿದೆ. ಜನರು ಹನಿ ನೀರಿಗೂ ಹಾಹಾಕಾರ ಪಡುವಂತಾಗಿದೆ ಎಂದು ಜನರು ಆರೋಪಿಸಿದರು. ವಿದ್ಯುತ್ ಪ್ರಸರಣ ಕೇಂದ್ರದ ಗೇಟಿಗೆ ಬೀಗ ಜಡಿದು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಾರದ ಹೊರೆತು ಗೇಟಿನ ಬೀಗ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದರು. ರೈತರು ಹೋರಾಟ ಮಾಡುತ್ತಿರುವ ಸಂಗತಿ ಅರಿತ ರಾಜ್ಯ ಯುವ ಜೆಡಿಎಸ್ ನ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟ ಚಂದ್ರೇಶ್ ಸ್ಥಳಕ್ಕೆ ಆಗಮಿಸಿ ರೈತರ ಅಹವಾಲು ಆಲಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿದರು.

ಕೆಲ ಸಮಯದ ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬೆಸ್ಕಾಂ ನ ಎಇಇ ರಾಜಶೇಖರ್ ರೈತರ ಸಮಸ್ಯೆಯನ್ನು ಆಲಿಸಿದರು. ಶೆಟ್ಟಿಗೊಂಡನಹಳ್ಳಿ ವಿದ್ಯುತ್ ಪ್ರಸರಣ ಕೇಂದ್ರದಲ್ಲಿ ಲೈನ್ ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ವಿವಿಧ ಕಾರಣಕ್ಕೆ ರಜೆ ಹಾಕಿದ್ದಾರೆ. ಅವರ ಬದಲಿಗೆ ಇಬ್ಬರು ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಆದರೆ ಅವರಿಗೆ ಇಲ್ಲಿಯ ವಸ್ತುಸ್ಥಿತಿಯ ಅರಿವಿಲ್ಲದ ಕಾರಣಕ್ಕೆ ತೊಂದರೆಯಾಗಿದೆ. ಆದಾಗ್ಯೂ ಸಹ ತಾವೇ ಪ್ರಸರಣ ಕೇಂದ್ರದಲ್ಲಿ ಮೊಕ್ಕಾಂ ಹೂಡಿ ಸಮಸ್ಯೆಯನ್ನು ಪರಿಹರಿಸುವ ಭರವಸೆಯನ್ನು ನೀಡಿದರು. ಈ ವೇಳೆ ತಾಲೂಕು ದಲಿತ ಸಂಘರ್ಷ ಸಮಿತಿಯ ಸಂಚಾಲಕ ಮಲ್ಲೂರು ತಿಮ್ಮೇಶ್ ಮಾತನಾಡಿ ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ಸರಬರಾಜು ಸರಿಯಾಗಿಲ್ಲದ ಕಾರಣ ರೈತರು ಬೆಳೆದಿದ್ದ ಬೆಳೆಗಳೆಲ್ಲಾ ಒಣಗುತ್ತಿವೆ. ದುರಾದೃಷ್ಠಕ್ಕೆ ಮಳೆಯೂ ಕೈಕೊಟ್ಟಿದೆ. ಇಲ್ಲಿ ಅರಣ್ಯ ಪ್ರದೇಶವಾಗಿರುವುದರಿಂದ ಕಾಡುಪ್ರಾಣಗಳ ಹಾವಳಿ ಇದೆ. ಇದರಿಂದ ಪ್ರಾಣಕ್ಕೆ ಅಪಾಯ ಇವೆ. ಪ್ರಾಣ ಹಾನಿ ಸಂಭವಿಸಿದಲ್ಲಿ ಬೆಸ್ಕಾಂ ಅಧಿಕಾರಿಗಳೇ ಇದಕ್ಕೆ ಹೊಣೆಗಾರರಾಗಬೇಕಾದೀತು ಎಂದು ಎಚ್ಚರಿಸಿದರು.

ಗ್ರಾಮದ ಮುಖಂಡರಾದ ತಮ್ಮಣ್ಣಿಗೌಡ, ಸೋಮೇಶ್, ಲೋಕೇಶ್, ನರಸಿಂಹ ಸೇರಿದಂತೆ ಹಲವು ಗಣ್ಯರು ಇದ್ದರು. 14 ಟಿವಿಕೆ 1 – ತುರುವೇಕೆರೆ ತಾಲೂಕು ಶೆಟ್ಟಿಗೊಂಡನಹಳ್ಳಿಯ ವಿದ್ಯುತ್ ಪ್ರಸರಣ ಕೇಂದ್ರದ ಬಳಿ ರೈತರು ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಕ್ಷ ಸಂಘಟನೆ ಒತ್ತು ನೀಡಿ: ಅಂಬರೀಶ್‌ಗೌಡ ಮನವಿ
ಎರಡು ದಿನದಲ್ಲಿ ನೀರು ಹರಿಸದಿದ್ದರೆ ಬೃಹತ್‌ ಹೋರಾಟ