ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನಾ ರ‍್ಯಾಲಿ

KannadaprabhaNewsNetwork |  
Published : Aug 18, 2024, 01:48 AM IST
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನಾ ರ‍್ಯಾಲಿ | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ತೇಜೋವಧೆ ಮಾಡುವ ಉದ್ದೇಶದಿಂದ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ನಡೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಜ್ಯಪಾಲರ ವಿರುದ್ಧ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಪ್ರತಿಭಟನಾ ರ‍್ಯಾಲಿಯನ್ನು ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಸಮಿತಿ, ಅಹಿಂದ ಸಂಘಟನೆ ಹಾಗೂ ಪ್ರಗತಿ ಸಂಘಟನೆಯ ವತಿಯಿಂದ ನಡೆಸಲಾದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಮಾತನಾಡಿ ಬಿಜೆಪಿ ಪಿತೂರಿಯ ವಿರುದ್ಧ ಹರಿಹಾಯ್ದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಮಾತನಾಡಿ, ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಕೊಡುತ್ತಿರುವ ಗ್ಯಾರಂಟಿಗಳ ವಿರುದ್ಧ ಬಿಜೆಪಿ ಪಿತೂರಿ ಮಾಡಿ ಕರ್ನಾಟಕ ಸರ್ಕಾರ ಬುಡಮೇಲು ಮಾಡಲು ಯತ್ನಿಸುತ್ತಿದೆ. ಇದು ಸಂವಿಧಾನ ವಿರೋಧಿ ನಡೆಯಾಗಿದ್ದು, ರಾಜ್ಯಪಾಲರಿಗೆ ಕಾನೂನಿನ ಹೋರಾಟದಲ್ಲಿ ಸೋಲಾಗಲಿದೆ. ಜನ ಬಿಜೆಪಿ ವಿರುದ್ಧ ದಂಗೆ ಏಳುತ್ತಾರೆ. ಮುಖ್ಯಮಂತ್ರಿಗಳು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬಾರದು, ರಾಜ್ಯದ ಜನ ತಮ್ಮೊಂದಿಗೆ ಇದ್ದಾರೆ ಎಂದರು.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಗುರನಗೌಡ ಪಾಟೀಲ, ಅಬ್ದುಲ್‌ ರಜಾಕ ಹೊರ್ತಿ, ಸಂಜೀವ ಕೊಂಬೋಗಿ, ಡಾ.ರವಿ ಬಿರಾದಾರ, ಮಹಮ್ಮದ ರಫೀಕ್‌ ಟಪಾಲ, ಸೋಮನಾಥ ಕಳ್ಳಿಮನಿ, ಆರತಿ ಶಹಾಪೂರ ಮಾತನಾಡಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಗಂಗಾಧರ ಸಂಬಣ್ಣಿ, ಡಿ.ಎಲ್.ಚವ್ಹಾಣ, ಸಂಗನಗೌಡ ಹರನಾಳ, ನಗರ ಬ್ಲಾಕ್ ಅಧ್ಯಕ್ಷ ಜಮೀರಅಹ್ಮದ್‌ ಬಕ್ಷಿ, ಸುರೇಶ ಗೊಣಸಗಿ, ಬೀರಪ್ಪ ಸಾಸನೂರ, ಮಲ್ಲು ಬಿದರಿ, ಸಾಹೇಬಗೌಡ ಬಿರಾದಾರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೋಡೆ, ಜಾಕೀರ್‌ ಮುಲ್ಲಾ, ಎಂ.ಎಂ.ಮುಲ್ಲಾ, ಫಯಾಜ್‌ ಕಲಾದಗಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೊಲೀಸರಿಗೆ ಕಪಾಳಮೋಕ್ಷ: 27 ಜನರ ವಿರುದ್ಧ ಕೇಸ್‌
ಮಹಾಲಿಂಗಪುರದಲ್ಲಿ ಇಂದು ಜನುಮದ ಜೋಡಿ ಕಾರ್ಯಕ್ರಮ