ಮೂಲೆಹೊಳೆ ನೀರು ಕೆರೆಗೆ ಹರಿಸಲು ಪ್ರತಿಭಟನೆ

KannadaprabhaNewsNetwork |  
Published : Apr 17, 2024, 01:15 AM IST
ಮೂಲೆಹೊಳೆ ನೀರು ಕೆರೆಗೆ ಹರಿಸಲು ರೈತಸಂಘ ಪ್ರತಿಭಟನೆ | Kannada Prabha

ಸಾರಾಂಶ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗಿನ ಮೂಲೆಹೊಳೆಯಿಂದ ಲಿಪ್ಟ್‌ ಮಾಡಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಬೇಕು. ಜಾನುವಾರುಗಳಿಗೆ ಮೇವು ಬ್ಯಾಂಕ್‌ ತೆರೆಯಬೇಕು ಎಂದು ಆಗ್ರಹಿಸಿ ಸಾಮೂಹಿಕ ನಾಯಕತ್ವದ ರೈತಸಂಘದ ಕಾರ್ಯಕರ್ತರು ಬೈಕ್‌ ರ್‍ಯಾಲಿ ನಡೆಸಿದರು.

ಕನ್ನಡಪ್ರಭವಾರ್ತೆ ಗುಂಡ್ಲುಪೇಟೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗಿನ ಮೂಲೆಹೊಳೆಯಿಂದ ಲಿಪ್ಟ್‌ ಮಾಡಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಬೇಕು. ಜಾನುವಾರುಗಳಿಗೆ ಮೇವು ಬ್ಯಾಂಕ್‌ ತೆರೆಯಬೇಕು ಎಂದು ಆಗ್ರಹಿಸಿ ಸಾಮೂಹಿಕ ನಾಯಕತ್ವದ ರೈತಸಂಘದ ಕಾರ್ಯಕರ್ತರು ಬೈಕ್‌ ರ್‍ಯಾಲಿ ನಡೆಸಿದರು.

ವೀರನಪುರ ಬಳಿಯ ಅಮಾನಿ ಕೆರೆಯಿಂದ ಗುಂಡ್ಲುಪೇಟೆ ವರೆಗೆ ನೂರಾರು ಕಾರ್ಯಕರ್ತರು ಬೈಕ್‌ ರ್‍ಯಾಲಿ ನಡೆಸುವ ಮೂಲಕ ರಾಜ್ಯ ಸರ್ಕಾರದ ಗಮನ ಸೆಳೆದು ತಾಲೂಕು ಕಚೇರಿ ಮುಂದೆ ಪ್ರತಿಭಟಿಸಿದರು. ರೈತ ಮುಖಂಡ ಹೊನ್ನೂರು ಪ್ರಕಾಶ್‌ ಮಾತನಾಡಿ, ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಬೇಕು ಎಂಬುದು ರೈತಸಂಘದ ಪ್ರಮುಖ ಆಗ್ರಹವಾಗಿದೆ. ಅಮಾನಿ ಕೆರೆ ಮತ್ತು ಮಲ್ಲಯ್ಯನಪುರ ಕೆರೆಗೆ ನೀರು ತುಂಬಿಸಬೇಕು ಎಂದು ಜಿಲ್ಲಾಡಳಿತವನ್ನು ಆಗ್ರಹಿಸಿದರು.

ಬರ ಎದುರಾಗಿರುವ ಹಿನ್ನೆಲೆ ಪ್ರತಿ ಗ್ರಾಪಂ ಮಟ್ಟದಲ್ಲಿ ಮೇವು ಬ್ಯಾಂಕ್‌ ಆರಂಭಿಸಬೇಕು. ಬರ ಪರಿಹಾರದಡಿ ಪ್ರತಿ ಎಕರೆಗೆ ೨೫ ಸಾವಿರ ಪರಿಹಾರ ನೀಡಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ತಹಸೀಲ್ದಾರ್‌ ಮಂಜುನಾಥ್‌ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿ, ಮೇವು ಬ್ಯಾಂಕ್‌ ಒಂದೆರಡು ದಿನಗಳಲ್ಲಿ ಆರಂಭವಾಗಲಿದೆ. ಪ್ರತಿ ಗ್ರಾಪಂನಲ್ಲಿ ಮೇವು ಬ್ಯಾಂಕ್‌ ಶುರುವಾಗಲಿದೆ ಎಂದರು. ಪ್ರತಿಭಟನೆಯಲ್ಲಿ ರೈತಸಂಘದ ಮುಖಂಡರಾದ ಶ್ರೀನಿವಾಸ್‌, ಷಣ್ಮಖಸ್ವಾಮಿ, ವೀರನಪುರ ನಾಗಪ್ಪ, ಉತ್ತಂಗೇರಿ ಹುಂಡಿ ಮಹೇಶ್‌, ಹಸಿರು ಸೇನೆ ಪ್ರಸಾದ್‌, ಕೋಡಹಳ್ಳಿ ಸ್ವಾಮಿ ಸೇರಿದಂತೆ ನೂರಾರು ಮಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುರ್ತು ಸಂಪುಟ ಸಭೆ ತೀರ್ಮಾನ : ಜಿ ರಾಮ್‌ ಜಿ ವಿರುದ್ಧ 22ರಿಂದ ಸಮರಾಧಿವೇಶನ
ಮುಜರಾಯಿ ದೇಗುಲಗಳಲ್ಲಿ ಇಂದು ಭಕ್ತರಿಗೆ ಎಳ್ಳು-ಬೆಲ್ಲ