ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ ತಡೆದು ಖಾಲಿ ಬಿಂದಿಗೆ ಪ್ರದರ್ಶಿಸಿ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ವಿಶೇಷ ಪ್ರತಿಭಟನೆ ನಡೆಸಿದರು. ನಗರದ ಟಿಬಿ ನಿಲ್ದಾಣದಿಂದ ಪೇಟೆ ಬೀದಿ ರಾಷ್ಟ್ರೀಯ ಹೆದ್ದಾರಿ ಮೂಲಕ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ರಸ್ತೆಯಲ್ಲಿ ಮಲಗಿ ಪ್ರತಿಭಟಿಸಿದ ನಂತರ ಕುಣಿಗಲ್ ಸರ್ಕಲ್‌ವರೆಗೂ ಮೆರವಣಿಗೆಯಲ್ಲಿ ಹೊರಟು ರಾಷ್ಟ್ರೀಯ ಹೆದ್ದಾರಿ 48ಕ್ಕೆ ನುಗ್ಗಿದ ಪ್ರತಿಭಟನಾಕಾರರು ವಾಹನಗಳನ್ನು ತಡೆದು ಹೆದ್ದಾರಿಯಲ್ಲಿ ಕುಳಿತು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಂಘಟನೆಯ ಒಕ್ಕೂಟದಿಂದ ಪ್ರತಿಭಟನೆಯಲ್ಲಿ ನಾಲ್ಕೈದು ಎಮ್ಮೆಗಳು ಕಾವೇರಿ ಹೋರಾಟದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಮಹಿಳೆಯರು ಖಾಲಿ ಬಿಂದಿಗೆ ಪ್ರದರ್ಶಿಸಿದರು. ಕಾರ್ಯಕರ್ತರು ಕಪ್ಪು ಪಟ್ಟಿಯನ್ನು ಧರಿಸಿ ಹೋರಾಟ ಮಾಡಿದರೆ, ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರಾಲಿ ಮಾಡಿ ಪ್ರತಿಭಟಿಸಿದರು. ಪ್ರತಿಭಟನೆಯಲ್ಲಿ ಪ್ರಮುಖವಾಗಿ ನಟ ವಿನೋದ್ ರಾಜ್ ಕಾವೇರಿ ನೀರು ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರಿಂದ ಯಾವುದೇ ಅಧಿಕಾರ ಘಟನೆ ನಡೆದಿಲ್ಲ. ಪ್ರತಿಭಟನೆಯಲ್ಲಿ ವನಕಲ್ಲು ಮಠದ ಶ್ರೀ ಬಸವ ರಮಾನಂದ ಶ್ರೀಗಳು, ಕನ್ನಡಪರ ಒಕ್ಕೂಟದ ಅಧ್ಯಕ್ಷ ಉಮೇಶ್ ಗೌಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್, ಗೌರವಾಧ್ಯಕ್ಷ ಬೈರನಹಳ್ಳಿ ಪ್ರಕಾಶ್, ಕನ್ನಡ ಒಕ್ಕೂಟದ ಕಾರ್ಯದರ್ಶಿ ಬಿ ನರಸಿಂಹಯ್ಯ, ಗೌರವಾಧ್ಯಕ್ಷ ಸಿದ್ದರಾಜು, ಜಂಟಿ ಕಾರ್ಯದರ್ಶಿ ಮಲ್ಲೇಶ್, ಉಪಾಧ್ಯಕ್ಷ ರಾಮಮೂರ್ತಿ ಸಂಚಾಲಕ ಸಿದ್ದರಾಜು, ಕರವೇ ಅಧ್ಯಕ್ಷರು ರಾಘವೇಂದ್ರ ಕಿಸಾನ್ ಸಂಘದ ಅಧ್ಯಕ್ಷ ಭೀಮಯ್ಯ ಸಂಘದ ಅಧ್ಯಕ್ಷ ವೇಣುಗೋಪಾಲ್ ಪದಾಧಿಕಾರಿಗಳು ಪಾಲ್ಗೊಂಡಿದ್ದರು.