ಕುರಿಗಾರರ ಹತ್ಯೆ ಖಂಡಿಸಿ ಕುರಿಗಳೊಂದಿಗೆ ಪ್ರತಿಭಟನೆ

KannadaprabhaNewsNetwork |  
Published : Mar 14, 2025, 01:30 AM IST
ನೂರಾರು ಕುರಿಗಳೊಂದಿಗೆ ಪ್ರತಿಭಟನೆ ನಡೆಸಿದರು.  | Kannada Prabha

ಸಾರಾಂಶ

ಬಾದಾಮಿ ತಾಲೂಕಿನ ಉಗಳವಾಟ ಗ್ರಾಮದಲ್ಲಿ ಕುರಿಗಾಹಿಯ ಹತ್ಯೆ ಮಾಡಿರುವದು, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ನಮ್ಮ ಸಮಾಜದ ಮಹಿಳಾ ಪಿಡಿಒ ಮೇಲೆ ಹಲ್ಲೆ ಮತ್ತು ಕಲಬುರಗಿ ಜಿಲ್ಲೆಯ ಅಳಂದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಕುರುಬರಿಗೆ ಬಹಿಷ್ಕಾರ ಹಾಕಿರುವುದನ್ನು ಖಂಡಿಸಿ ಜಿಲ್ಲೆಯ ಕುರುಬ ಸಮುದಾಯದ ವಿವಿಧ ಸಂಘಟನೆಗಳು ಹಾಗೂ ಜಿಲ್ಲಾ ಕುರಿಗಾರರ ಸಹಕಾರಿ ಸಂಘಗಳ ಒಕ್ಕೂಟದ ವತಿಯಿಂದ ಗುರುವಾರ ಭಾರೀ ಸಂಖ್ಯೆಯ ಕುರಿಗಳೊಂದಿಗೆ ಆಗಮಿಸಿ, ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಗದಗ: ಬಾದಾಮಿ ತಾಲೂಕಿನ ಉಗಳವಾಟ ಗ್ರಾಮದಲ್ಲಿ ಕುರಿಗಾಹಿಯ ಹತ್ಯೆ ಮಾಡಿರುವದು, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ನಮ್ಮ ಸಮಾಜದ ಮಹಿಳಾ ಪಿಡಿಒ ಮೇಲೆ ಹಲ್ಲೆ ಮತ್ತು ಕಲಬುರಗಿ ಜಿಲ್ಲೆಯ ಅಳಂದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಕುರುಬರಿಗೆ ಬಹಿಷ್ಕಾರ ಹಾಕಿರುವುದನ್ನು ಖಂಡಿಸಿ ಜಿಲ್ಲೆಯ ಕುರುಬ ಸಮುದಾಯದ ವಿವಿಧ ಸಂಘಟನೆಗಳು ಹಾಗೂ ಜಿಲ್ಲಾ ಕುರಿಗಾರರ ಸಹಕಾರಿ ಸಂಘಗಳ ಒಕ್ಕೂಟದ ವತಿಯಿಂದ ಗುರುವಾರ ಭಾರೀ ಸಂಖ್ಯೆಯ ಕುರಿಗಳೊಂದಿಗೆ ಆಗಮಿಸಿ, ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಗದಗ ನಗರದ ಟಿಪ್ಪು ವೃತ್ತದಿಂದ ಕುರುಬ ಸಮಾಜ ಬಾಂಧವರು ನೂರಾರು ಕುರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು. ಉಗಲವಾಟ ಗ್ರಾಮದಲ್ಲಿ ಕುರಿಗಾಹಿ ಯುವಕ ಶರಣಪ್ಪ ಜಮ್ಮನಕಟ್ಟಿಯ ಮೇಲೆ ದುಷ್ಕರ್ಮಿಗಳು ರಾಕ್ಷಸಿಕೃತ್ಯ ಮೆರೆದು ಕತ್ತು ಸೀಳಿ ಕೊಂದು ಹಾಕಿದ್ದಾರೆ. ಭಾರತ ದೇಶದ ಸಂಸ್ಕೃತಿಗೆ ಕುರುಬರ ಕೊಡುಗೆ ಬಹಳ ದೊಡ್ಡದಿದೆ. ಕುರುಬರ ವಿಶ್ವದ ಮೂಲ ಪುರುಷರು, ದೈವಾಂಶ ಸಂಭೂತರು ಎಂದೆಲ್ಲಾ ಕರೆಯಿಸಿಕೊಳ್ಳುತ್ತಿರುವ ಮುಗ್ಧ ಸಮುದಾಯದ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಒಂದೇ ತಿಂಗಳಿನಲ್ಲಿ ಮೂರು ಪ್ರಕರಣಗಳು ನಡೆದಿವೆ.ಇದೇ ರೀತಿ ನಿತ್ಯವೂ ರಾಜ್ಯಾದ್ಯಂತ ಕುರಿಗಾಹಿಗಳು ಸಾಕಷ್ಟು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಮಳೆ, ಗಾಳಿ, ಬಿಸಿಲೆನ್ನದೇ ಊರೂರು ಸುತ್ತುವ ಪ್ರಕೃತಿಯ ಮಡಿಲಿನಲ್ಲಿ ಪ್ರಕೃತಿಯ ಆರಾಧಕರಾಗಿರುವ ಕುರಿಗಾಹಿಗಳಿಗೆ ರಕ್ಷಣೆಯಿಲ್ಲದಂತಾಗಿದೆ. ಅರಣ್ಯ ಇಲಾಖೆಯವರ ಮಾನಸಿಕ, ದೈಹಿಕ ಹಿಂಸೆಗಳು ಜೊತೆಗೆ ಕಳ್ಳಕಾಕರಿಂದ ಕುರಿಗಳನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು.

ಸರ್ಕಾರ ಬಜೆಟ್‌ನಲ್ಲಿ ಕುರಿಗಾರರಿಗೆ ಘೋಷಣೆಗಳನ್ನು ಮಾಡುತ್ತಿವೆಯಾದರೂ ಕುರಿಗಾರರಿಗೆ ಅನುಕೂಲಗಳು ಮರೀಚಿಕೆಯಾಗಿವೆ. ಸರ್ಕಾರ ಕಾಯಿದೆಗಳನ್ನು ಮಾಡಿವೆ. ಬಂದೂಕು ಲೈಸೆನ್ಸ್ ಬಗ್ಗೆ ಘೋಷಣೆ ಮಾಡಿದೆ. ಆದರೆ ಯಾವುದೂ ಸಹ ಕಾರ್ಯರೂಪಕ್ಕೆ ಬರುತ್ತಿಲ್ಲ. ಕುರಿಗಾಹಿಗಳು ದೇಶದ ಆವಿಭಾಜ್ಯ ಅಂಗವಾಗಿದ್ದು, ಅವರ ಜೀವನೋಪಾಯ ಮತ್ತು ಸುರಕ್ಷತೆಗೆ ರಾಜ್ಯ ಸರ್ಕಾರದ ತುರ್ತು ಗಮನ ನೀಡಬೇಕಿದೆ ಎಂದು ಆಗ್ರಹಿಸಿದರು.

ಸರಕಾರ ಕುರಿಗಾರನ ಹತ್ಯೆ ಸೇರಿದಂತೆ ಎಲ್ಲಾ ಹಿಂಸಾತ್ಮಕ ಘಟನೆಗಳಿಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಪೊಲೀಸ್ ಪೆಟ್ರೋಲಿಂಗ್ ಹೆಚ್ಚಿಸಿ, ಕುರಿಗಾಹಿಗಳಿಗೆ ವಿಶೇಷ ರಕ್ಷಣೆ ಒದಗಿಸಬೇಕು. ಹತ್ಯೆಗೀಡಾದ ಕುರಿಗಾರರನ ಕುಟುಂಬಕ್ಕೆ ಆರ್ಥಿಕ ಪರಿಹಾರ ನೀಡಬೇಕು ಮತ್ತು ಕುರಿಗಾರರಿಗೆ ಬಂದೂಕು ತರಬೇತಿ ನೀಡಿ, ಲೈಸೆನ್ಸ್ ನೀಡುವ ಪ್ರಕ್ರಿಯೆ ಸರಳೀಕೃತಗೊಳಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕುರುಬ ಸಮಾಜದ ಹಿರಿಯರಾದ ಫಕೀರಪ್ಪ ಹೆಬಸೂರ, ರುದ್ರಣ್ಣ ಗುಳಗುಳಿ, ವಾಸಣ್ಣ ಕುರಡಗಿ, ರವಿ ದಂಡಿನ, ಹೇಮಂತ ಗಿಡ್ಡಹನುಮಣ್ಣವರ, ಮಂಜು ಜಡಿ, ಮುತ್ತು ಜಡಿ, ಬಸವರಾಜ ಕುರಿ, ಉಮೇಶ ಪೂಜಾರ, ರವಿ ಜೋಗಿನ, ಮಲ್ಲೇಶಪ್ಪ ಕೊಣ್ಣೂರ, ಮುತ್ತಪ್ಪ ಕುರಿ, ಕುಮಾರ ಮಾರನಬಸರಿ, ಬಸಪ್ಪ ಶಿರೂರ, ನಾರಾಯಣ ಜಡಿ, ದೇವಪ್ಪ ಮಲ್ಲಸಮುದ್ರ, ಬಸವರಾಜ ಜಡಿ, ಬರಮಲಿಂಗಪ್ಪ ಬಿಂಗಿ, ಸೋಮು ಮೇಟಿ, ಬಸವರಾಜ ಅಣ್ಣಿಗೇರಿ, ಚೆನ್ನಮ್ಮ ಹುಳಕಣ್ಣವರ, ರೇಖಾ ಜಡಿಯವರು, ಸುರೇಖಾ ಕುರಿ, ಬಾಳಮ್ಮ ಶಿವಾನಂದಮಠ, ಭಾಗ್ಯಶ್ರೀ ಬಾಬಣ್ಣ, ನಾಗಪ್ಪ ಗುಗ್ಗರಿ, ನೀಲಪ್ಪ ಗಡ್ಡಣ್ಣನವರ, ಉಮೇಶ ಜೋಳದ, ಹನುಮಂತಪ್ಪ ಮುಂಡರಗಿ, ಮಾರುತಿ ಜಡಿಯವರ, ಸುರೇಶ ಮಾಳಗಿಮನಿ, ರಾಜು ಪವರ, ಉಮೇಶ ಜೋಳದ, ಹನುಮಂತ ಗಿಡ್ಡಹನಮಣ್ಣವರ, ಸತೀಶ ಗಿಡ್ಡಹನಮಣ್ಣವರ, ಶೇಖರಪ್ಪ ಚನ್ನಳ್ಳಿ, ಫಕೀರೇಶ ಪೂಜಾರ, ಕುಶಾಲ ದೇವರಮನಿ, ಮಲ್ಲೇಶ ಬಡಿಗೇರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ