ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಪಾಂಡವ ಕ್ರೀಡಾಂಗಣದ ಬಳಿ ಹೊರಟ ಪ್ರತಿಭಟನಾ ರ್‍ಯಾಲಿ ಪಟ್ಟಣದ ವಿವಿಧ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಂಡ್ಯ ಸರ್ಕಲ್, ಐದು ದೀಪ ವೃತ್ತದಲ್ಲಿ ಶ್ರೀರಂಗಪಟ್ಟಣ- ಜೇವರ್ಗಿ ಹೆದ್ದಾರಿ ತಡೆದು ಮಾನವ ಸರಪಳಿ ನಿರ್ಮಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಐದು ದೀಪ ವೃತ್ತದಲ್ಲಿಯೇ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ ಕರೆದೊಯ್ಯುದ್ದು ನಂತರ ಬಿಡುಗಡೆ ಮಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಕಾರ್ಮಿಕ ಹಾಗೂ ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಸಮಾಜ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು. ಹೊರಗುತ್ತಿಗೆ ನೌಕರರ ಉದ್ಯೋಗವನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.ಎಲ್ಲಾ ಸಂಘಟಿತ, ಅಸಂಘಟಿತ, ಗುತ್ತಿಗೆ ಕಾರ್ಮಿಕರು, ಸ್ಕೀಂ ನೌಕರರಿಗೆ ರಾಷ್ಟ್ರ, ರಾಜ್ಯ ವ್ಯಾಪಿ ನೌಕರರಿಗೂ ಕನಿಷ್ಠ 36 ಸಾವಿರ ವೇತನ ನಿಗಧಿಪಡಿಸಬೇಕು, ಪೆಟ್ರೂಲ್, ಡೀಸೆಲ್, ದಿನಬಳಿಕೆ ವಸ್ತುಗಳ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆ ಇಳಿಸಿ ಹಳೇ ಪಿಂಚಣಿ ಪದ್ಧತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ವಿಜಯ್‌ಕುಮಾರ್, ಕೆ.ಟಿ.ಗೋವಿಂದೇಗೌಡ, ಸಿಐಟಿಯು ಸಂಘಟನೆ ಶಿವಕುಮಾರ್, ಡಿ.ಕೆ.ಅಂಕಯ್ಯ, ರೈತ ಮುಖಂಡರಾದ ಚಿಕ್ಕಾಡೆ ರಘು, ಎಣ್ಣೆಹೊಳೆಕೊಪ್ಪಲು ಮಂಜುನಾಥ್, ರಘು ಸೇರಿದಂತೆ ಅನೇಕ ಸಂಘಟನೆಗಳ ಕಾರ್‍ಯಕರ್ತರು ಭಾಗವಹಿಸಿದ್ದರು.