ಸಾಕ್ಷಿ ಸಮೇತ ಆರೋಪ ಸಾಬೀತು ಪಡಿಸಲಿ: ಎಚ್ಡಿಕೆಗೆ ಕಾಂಗ್ರೆಸ್‌ ಸವಾಲು

KannadaprabhaNewsNetwork |  
Published : Nov 22, 2023, 01:00 AM IST
0 | Kannada Prabha

ಸಾರಾಂಶ

ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ರಾಜ್ಯದಲ್ಲಿ ಜನಪ್ರಿಯತೆ ಗಳಿಸುತ್ತಿರುವುದನ್ನು ಸಹಿಸದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಕಿಡಿ ಕಾರಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ರಾಜ್ಯದಲ್ಲಿ ಜನಪ್ರಿಯತೆ ಗಳಿಸುತ್ತಿರುವುದನ್ನು ಸಹಿಸದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಕಿಡಿ ಕಾರಿದೆ.

ಮಂಗಳವಾರ ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಸಾಕ್ಷಿ ಸಮೇತ ಆರೋಪಗಳನ್ನು ಸಾಬೀತು ಪಡಿಸಲಿ ಎಂದು ಸವಾಲ್ ಹಾಕಿದ್ದಾರೆ.ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದರು. ಅವರ ತಂದೆ ಕೂಡ ಕಾಂಗ್ರೆಸ್ ಕೃಪೆಯಿಂದಲೇ ಪ್ರಧಾನಿ ಆಗಿದ್ದರು. ಹೀಗಿದ್ದರೂ ಇವೆಲ್ಲವನ್ನೂ ಮರೆತು ಬಿಜೆಪಿ ಜತೆ ಸೇರಿ ಕಾಂಗ್ರೆಸ್ ನಾಯಕರು ಮತ್ತು ಸರ್ಕಾರದ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವಿರುದ್ಧ ವೈಯಕ್ತಿಕ ಟೀಕೆಗಳನ್ನು ಮಾಡುತ್ತಿರುವ ಕುಮಾರಸ್ವಾಮಿ ಆಧಾರ ಸಹಿತ ಆರೋಪ ಮಾಡಲಿ ಸಾಕ್ಷ್ಯಾಧಾರಗಳನ್ನು ಸಾಬೀತು ಪಡಿಸಲಿ ಎಂದು ಸವಾಲ್ ಹಾಕಿದ್ದಾರೆ.ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿರುವುದಕ್ಕೆ ಸಾಕ್ಷಿ ಇದೆ. ಬೆಸ್ಕಾಂ ಅಧಿಕಾರಿಗಳು 68 ಸಾವಿರ ರು.ದಂಡ ಹಾಕಿರುವುದಕ್ಕೆ ಬಿಲ್ಲು ಕೂಡ ಇದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 20 ವರ್ಷಗಳ ಹಿಂದೆ ಟೆಂಟ್ ಸಿನಿಮಾ ನಡೆಸುತ್ತಿದ್ದರು. ಈಗಲೂ ಅವರ ಮೂರು ಟೆಂಟ್ ಇವೆ. ಆದರೆ ಅವರು ಬ್ಲೂಫಿಲ್ಮ್ಂ ತೋರಿಸುತ್ತಿದ್ದರು ಎನ್ನುವುದಕ್ಕೆ ಆಧಾರ ಇದೆಯಾ ಎಂದು ಪ್ರಶ್ನಿಸಿದ ಲಕ್ಷ್ಮಣ್, ಕಾಂಗ್ರೆಸ್ ಮತ್ತು ಡಿಕೆಶಿ ಅವರಿಂದ ಸಾಕಷ್ಟು ಪ್ರಯೋಜನ ಪಡೆದುಕೊಂಡಿರುವ ಕುಮಾರಸ್ವಾಮಿ ಯಾಕೆ ಈ ಮಟ್ಟಕ್ಕೆ ಹೋಗುತ್ತಿದ್ದಾರೆ ಎಂದು ದೂರಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಕುಮಾರ್, ಜಿಲ್ಲಾ ವಕ್ತಾರ ಟಾಟು ಮೊನ್ನಪ್ಪ, ಉಪಾಧ್ಯಕ್ಷ ಅರವಿಂದ್ ಕುಟ್ಟಪ್ಪ, ಪ್ರಥ್ಯು, ನರೇಂದ್ರ ಕಾಮತ್ ಇದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ