ಎನ್‌ಟಿಪಿಯಲ್ಲಿ ಶೇ.70 ಕನ್ನಡಿಗರಿಗೆ ಕೆಲಸ ನೀಡಿ

KannadaprabhaNewsNetwork |  
Published : Aug 14, 2025, 02:10 AM IST
ಪ್ರತಿಭಟನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಕೊಲ್ಹಾರ ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಮುಖ್ಯ ಗೇಟ್ ಬಳಿ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ) ಬಣದ ಕಾರ್ಯಕರ್ತರು ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಜಿಲ್ಲಾಧ್ಯಕ್ಷ ಬಸವರಾಜ ತಾಳಿಕೋಟೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಕೊಲ್ಹಾರ

ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಮುಖ್ಯ ಗೇಟ್ ಬಳಿ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ) ಬಣದ ಕಾರ್ಯಕರ್ತರು ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಜಿಲ್ಲಾಧ್ಯಕ್ಷ ಬಸವರಾಜ ತಾಳಿಕೋಟೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕರವೇ ಕಾರ್ಯಕರ್ತರು ಉಷ್ಣ ವಿದ್ಯುತ್ ಸ್ಥಾವರದ ಗೇಟ್ ಬಳಿ ಬೃಹತ್ ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡೇರಿಕೆಗಾಗಿ ಘೋಷಣೆಗಳ ಕೂಗಿ ಆಗ್ರಹಿಸಿದರು.

ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎನ್‌ಟಿಪಿಸಿ ಎಜಿಎಂ ಎಚ್.ಆರ್.ಕಾಲಿಯಾ ಹಾಗೂ ಕೊಲ್ಹಾರ ತಹಸೀಲ್ದಾರ್ ಸಂತೋಷ ಮ್ಯಾಗೇರಿಯವರಿಗೆ ಮನವಿ ಸಲ್ಲಿಸಿದರು.ಈ ವೇಳೆ ಸಂಘಟನೆ ಜಿಲ್ಲಾಧ್ಯಕ್ಷ ಬಸವರಾಜ ತಾಳಿಕೋಟಿ ಮಾತನಾಡಿ, ಎನ್‌ಟಿಪಿಸಿಯಲ್ಲಿ ಕನ್ನಡಿಗರಿಗೆ ಶೇ.70ರಷ್ಟು ಉದ್ಯೋಗ ನೀಡಬೇಕು. ಅಧಿಕಾರಿಗಳು ಕನ್ನಡದಲ್ಲಿ ಮಾತನಾಡಬೇಕು, ಭಾದಿತ ಗ್ರಾಮಸ್ಥರಿಗೆ ಉದ್ಯೋಗ ನೀಡಬೇಕು, ಸ್ಥಾವರ ನಿರ್ಮಾಣಕ್ಕೆ ಭೂಮಿ ನೀಡಿದ ಕುಟುಂಬಕ್ಕೆ ಉದ್ಯೋಗ ನೀಡಬೇಕು, ಸಂತ್ರಸ್ತರಿಗೆ ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಮಾಡಿಕೊಡಬೇಕು, ಉತ್ಪಾದನೆಯಾದ ವಿದ್ಯುತ್ ಭಾದಿತ ಗ್ರಾಮ ಹಾಗೂ ತಾಲೂಕಿಗೆ 24 ಗಂಟೆ ನಿರಂತರ ವಿದ್ಯುತ್‌ ನೀಡಬೇಕು, ಸಂತ್ರಸ್ಥ ಗ್ರಾಮಗಳ ತೆರಿಗೆ ಹಣವನ್ನು ಎನ್‌ಟಿಪಿಸಿ ಭರಿಸಬೇಕು, ಸ್ಥಾವರದಿಂದ ಸವಳು ಜವಳಾದ ಭೂಮಿಗೆ ಸೂಕ್ತ ಪರಹಾರ ನೀಡಬೇಕೆಂದು ಒತ್ತಾಯಿಸಿದರು.ಮನವಿ ಸ್ವೀಕರಿಸಿ ಎನ್‌ಟಿಪಿಸಿ ಎಜಿಎಂ ಎಚ್.ಆರ್.ಕಾಲಿಯಾ ಮಾತನಾಡಿ, ಒಂದು ವಾರದಲ್ಲಿ ತಮ್ಮ ಸಭೆಯನ್ನು ಕರೆದು ಕೆಲವೊಂದು ಬೇಡಿಕೆಗಳನ್ನು ತುರ್ತಾಗಿ ಈಡೇರಿಸಲಾಗುವುದು. ನಂತರ ಇನ್ನುಳಿದ ಬೇಡಿಕೆಗಳ ಈಡೇರಿಕೆಗಾಗಿ ಕಾಲಾವಕಾಶ ತೆಗೆದುಕೊಂಡು ಬರುವ ದಿನಗಳಲ್ಲಿ ಈಡೇರಿಸುತ್ತೇವೆ. ಅದನ್ನು ತಮಗೆ ಪತ್ರದ ಮೂಲಕ ಭರವಸೆ ನೀಡುವುದಾಗಿ ತಿಳಿಸಿದರು.ಬಳಿಕ, ತಹಸೀಲ್ದಾರ್‌ ಸಂತೋಷ ಮ್ಯಾಗೇರಿ ಮಾತನಾಡಿ, ನಾವು ಮತ್ತು ಎನ್‌ಟಿಪಿಸಿಯವರು ಕರವೇ ಮುಖಂಡರ ಸಭೆ ಕರೆದು ಚರ್ಚಿಸಿ ತಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸಲಾಗುವದು ಎಂದು ಭರವಸೆ ನೀಡಿದರು. ಈ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.ಈ ವೇಳೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಎನ್‌ಟಿಪಿಸಿ ಪಿಎಸ್ಐ ಯತೀಶ್.ಕೆ.ಎನ್, ಕರವೇ (ಪ್ರವೀಣ ಶೆಟ್ಟಿ ಬಣ)ದ ಕೊಲ್ಹಾರ ತಾಲೂಕಾಧ್ಯಕ್ಷ ರವಿ ಗೊಳಸಂಗಿ, ನಿಡಗುಂದಿ ತಾಲೂಕಾಧ್ಯಕ್ಷ ಆನಂದ ಹಡಗಲಿ, ತೆಲಗಿ ಗ್ರಾಪಂ ಅಧ್ಯಕ್ಷ ಅರವಿಂದ ಕೊಪ್ಪದ, ಗೊಳಸಂಗಿ ಗ್ರಾಪಂ ಅಧ್ಯಕ್ಷ ರಾವತ್ ಸೀಮಿಕೇರಿ, ಕರವೇ ಉಪಾಧ್ಯಕ್ಷರಾದ ರಾಜುಗೌಡ ಬಿರಾದಾರ, ಭೀಮನಗೌಡ ಬಿರಾದಾರ, ಜಿಲ್ಲಾ ಸಂಚಾಲಕ ಶ್ರೀಕಾಂತ ರಾಠೋಡ, ಮುತ್ತು ಪೂಜಾರಿ, ಮಹೇಶ ಹಾರಿವಾಳ, ಶ್ರೀಧರ ಬಳಗಾರ ಸೇರಿದಂತೆ ಅನೇಕರು ಹಾಜರಿದ್ದರು.

PREV

Recommended Stories

ಹೆತ್ತವರ ಕನಸು ನನಸಾಗಿಸುವುದೇ ಮಕ್ಕಳ ಗುರಿಯಾಗಿರಲಿ: ಸಚಿವೆ ಹೆಬ್ಬಾಳ್ಕರ್
ರಾಜ್ಯದ ಅರ್ಥ ವ್ಯವಸ್ಥೆ ಆರೋಗ್ಯವಂತವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್