ಪ್ರಜಾಸೇವೆ ಆಂದೋಲನದಲ್ಲಿ ಅಧಿಕಾರಿಗಳಿಗೆ ಶಾಸಕ ಸೂಚನೆಕನ್ನಡಪ್ರಭ ವಾರ್ತೆ ಶಿರಹಟ್ಟಿ
ತಾಲೂಕಿನ ಕೊಂಚಿಗೇರಿ ಗ್ರಾಮದಲ್ಲಿ ಜರುಗಿದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಜಾಸೇವೆ ಆಂದೋಲನವು ಸಾರ್ವಜನಿಕರು ಹಾಗೂ ಆಡಳಿತ ವ್ಯವಸ್ಥೆಯ ನಡುವಿನ ಸಂಪರ್ಕ ಸೇತುವೆಯಾಗಿದ್ದು, ಜನರು ಕಚೇರಿಗಳಿಗೆ ಅಲೆದಾಡದೆ ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆಯಲು ಈ ಕಾರ್ಯಕ್ರಮ ಸಹಕಾರಿಯಾಗಬೇಕು. ಸಾರ್ವಜನಿಕರ ಅಹವಾಲುಗಳನ್ನು ಕೇವಲ ಸ್ವೀಕರಿಸುವುದಷ್ಟೇ ಅಲ್ಲದೆ, ಅವುಗಳ ಪರಿಹಾರಕ್ಕೆ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಅಧಿಕಾರಿಗಳ ಪ್ರಮುಖ ಕರ್ತವ್ಯವಾಗಿದ್ದು, ಪ್ರಜಾಸೇವೆ ಆಂದೋಲನದಲ್ಲಿ ಸ್ವೀಕರಿಸಲಾದ ಪ್ರತಿಯೊಂದು ಅರ್ಜಿಗೂ ಉತ್ತರ ನೀಡಲೇಬೇಕು. ಸಾರ್ವಜನಿಕರು ಸಲ್ಲಿಸುವ ಅಹವಾಲುಗಳು ಕಾನೂನುಬದ್ಧವಾಗಿದ್ದರೆ ಅವುಗಳನ್ನು ಆದ್ಯತೆ ಮೇರೆಗೆ ಪರಿಹರಿಸಬೇಕು. ಒಂದು ವೇಳೆ ಅರ್ಜಿಗಳನ್ನು ಇತ್ಯಥ್ಯಪಡಿಸಲು ಸಾಧ್ಯವಾಗದಿದ್ದರೆ ಅದಕ್ಕೆ ಸೂಕ್ತ ಹಾಗೂ ಸ್ಪಷ್ಟ ಕಾರಣಗಳನ್ನು ಅರ್ಜಿದಾರರಿಗೆ ತಿಳಿಸಬೇಕು ಎಂದು ಸೂಚನೆ ನೀಡಿದರು.ಕಾರ್ಯಕ್ರಮದಲ್ಲಿ ವಿದ್ಯುತ್ ಸಮಸ್ಯೆ, ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಶೌಚಾಲಯ ದುರಸ್ತಿ, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮಾಶಾಸನ, ವಿಧವಾ ವೇತನ ಸೇರಿದಂತೆ ಇನ್ನೂ ಅನೇಕ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳು ಸಲ್ಲಿಕೆಯಾದವು. ಇದನ್ನು ಗಮನಿಸಿದ ಶಾಸಕರು ಇಲಾಖಾವಾರು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಪರಿಹಾರ ಒದಗಿಸಬೇಕು ಎಂದು ತಾಕೀತು ಮಾಡಿದರು.
ಕೊಂಚಿಗೇರಿ ಗ್ರಾಮವು ಗ್ರಾಪಂ ಹೊಂದಿದ್ದರೂ ವಿದ್ಯುತ್ ಸಮಸ್ಯೆಗೆ ಹೊಳೆ-ಇಟಗಿ ಗ್ರಾಮಕ್ಕೆ ಆರೋಗ್ಯ ಸಮಸ್ಯೆಗೆ ಹೆಬ್ಬಾಳ ಗ್ರಾಮಕ್ಕೆ, ಬ್ಯಾಂಕ್ ವ್ಯವಹಾರಕ್ಕೆ ಶಿಗ್ಲಿ ಗ್ರಾಮಕ್ಕೆ ತೆರಳಬೇಕಿದ್ದು, ಈ ವ್ಯವಸ್ಥೆ ಬದಲಿಸಿ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿಯೇ ಎಲ್ಲ ಸೌಲಭ್ಯ ದೊರಕುವಂತೆ ಶಾಸಕರು ಮತ್ತು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.