ಕನ್ನಡಪ್ರಭ ವಾರ್ತೆ ಸಕಲೇಶಪುರನಗರದ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಗೆ ತುರ್ತಾಗಿ ಹೊಸ ಸ್ಕ್ಯಾನಿಂಗ್ ಯಂತ್ರ ಒದಗಿಸಿ, ಬಡ ಹಾಗೂ ಗ್ರಾಮೀಣ ಭಾಗದ ರೋಗಿಗಳಿಗೆ ಆಸ್ಪತ್ರೆಯಲ್ಲಿಯೇ ಅಗತ್ಯ ಪರೀಕ್ಷೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದರು.ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಶಾಸಕರು,ಸಕಲೇಶಪುರ–ಆಲೂರು–ಕಟ್ಟಾಯ ವಿಧಾನಸಭಾ ಕ್ಷೇತ್ರದ ಪ್ರಮುಖ ಸರ್ಕಾರಿ ಆರೋಗ್ಯ ಕೇಂದ್ರವಾಗಿರುವ ಕ್ರಾಫರ್ಡ್ ಆಸ್ಪತ್ರೆಯನ್ನು ಸಕಲೇಶಪುರ ತಾಲ್ಲೂಕು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಜನರು ಅವಲಂಬಿಸಿದ್ದಾರೆ. ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು, ಗರ್ಭಿಣಿಯರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಆದರೆ ಅಗತ್ಯ ಸ್ಕ್ಯಾನಿಂಗ್ ಸೌಲಭ್ಯ ಇಲ್ಲದಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಶಾಸಕರು ಸಚಿವರ ಗಮನಕ್ಕೆ ತಂದರು.ಖಾಸಗಿ ಕೇಂದ್ರಗಳೇ ಗತಿ: ವೈದ್ಯಕೀಯ ಪರೀಕ್ಷೆ ಹಾಗೂ ಮುಂದಿನ ಚಿಕಿತ್ಸೆಗೆ ಸ್ಕ್ಯಾನಿಂಗ್ ಅಗತ್ಯವಿರುವ ರೋಗಿಗಳು ಅನಿವಾರ್ಯವಾಗಿ ಖಾಸಗಿ ಸ್ಕ್ಯಾನಿಂಗ್ ಕೇಂದ್ರಗಳನ್ನು ಅವಲಂಬಿಸಬೇಕಾಗಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ. ದೂರದ ಗ್ರಾಮೀಣ ಪ್ರದೇಶಗಳಿಂದ ಬರುವ ರೋಗಿಗಳು ಸ್ಕ್ಯಾನಿಂಗ್‌ಗಾಗಿ ಬೇರೆಡೆ ಅಲೆದಾಡಬೇಕಾದ ಪರಿಸ್ಥಿತಿಯೂ ಇದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.ತುರ್ತು ಚಿಕಿತ್ಸೆಗೆ ಸ್ಕ್ಯಾನಿಂಗ್ ಅಗತ್ಯ: