ಗಣತಿದಾರರಿಗೆ ಜಾತಿ, ಇತರೆ ನಿಖರ ಮಾಹಿತಿ ನೀಡಿ

KannadaprabhaNewsNetwork |  
Published : May 04, 2025, 01:34 AM IST
ಸಮೀಕ್ಷೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯ ಮೇ 5ರಿಂದ ಆರಂಭಗೊಳ್ಳಲಿದ್ದು, ಸಂಬಂಧಿಸಿದಂತೆ ಗಣತಿದಾರೆಲ್ಲರೂ ಕುಟುಂಬದ ಜಾತಿ ಮತ್ತು ಇತರೆ ಮಾಹಿತಿಯನ್ನು ಗಣತಿದಾರರಿಗೆ ನಿಖರವಾಗಿ ನೀಡಬೇಕು ಎಂದು ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯ ಮೇ 5ರಿಂದ ಆರಂಭಗೊಳ್ಳಲಿದ್ದು, ಸಂಬಂಧಿಸಿದಂತೆ ಗಣತಿದಾರೆಲ್ಲರೂ ಕುಟುಂಬದ ಜಾತಿ ಮತ್ತು ಇತರೆ ಮಾಹಿತಿಯನ್ನು ಗಣತಿದಾರರಿಗೆ ನಿಖರವಾಗಿ ನೀಡಬೇಕು ಎಂದು ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ತಿಳಿಸಿದರು.

ಪಟ್ಟಣದ ಅಭ್ಯುದ ಪಿಯು ಸೈನ್ಸ್‌ ಕಾಲೇಜಿನಲ್ಲಿ ತಾಲ್ಲೂಕು ಆಡಳಿತ ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯಿತಿ, ಶಿಕ್ಷಣ ಇಲಾಖೆಯಿಂದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಕಾರ್ಯದ ಗಣತಿದಾರರು ಮತ್ತು ಮೇಲ್ವಿಚಾರಕರ ತಾಲ್ಲೂಕು ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ 246 ಬೂತ್‌ಗಳಲ್ಲಿ 303ಕ್ಕೂ ಹೆಚ್ಚು ಗಣತಿದಾರರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು ಯಾವುದೇ ಗೊಂದಲಗಳಿಲ್ಲದೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹಾಗೂ ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕಿ ಬಸಂತಿ ಮಠ ಮಾತನಾಡಿ ಪರಿಶಿಷ್ಟ ಜಾತಿ ಒಳಪಂಗಡಗಳ ಸಮಗ್ರ ಮಾಹಿತಿ ಪಡೆದು ನಮಗೆ ನ್ಯಾಯ ಒದಗಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ ಹಿನ್ನಲೆಯಲ್ಲಿ ಸರ್ಕಾರ ಪರಿಶಿಷ್ಟ ಜಾತಿ ಒಳಪಂಗಡಗಳ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ನಡೆಸುತ್ತಿದೆ. ಮೇ 5ರಿಂದ ಮೇ 17ರವರೆಗೆ ಸಮೀಕ್ಷೆದಾರರು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳುವರು. ಮೇ17ರಿಂದ 19ರವರೆಗೆ ಆಯಾ ಪಂಚಾಯತಿ ವ್ಯಾಪ್ತಿಯಲ್ಲಿ ಸಮೀಕ್ಷೆ ಕೈಗೊಳ್ಳಲಾಗುವುದು ಮೇ 19ರಿಂದ ಮೇ 21ರವರೆಗೆ ಸಮೀಕ್ಷೆ ಬ್ಲಾಕ್‌ಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು ಭೇಟಿ ಅವಧಿಯಲ್ಲಿ ಬಿಟ್ಟು ಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿ ಸಂಗ್ರಹಿಸಲಾಗುವುದು. ಕಾರಣ ಗಣತಿದಾರರು ಸರ್ಕಾರದ ಸೌಲಭ್ಯಗಳು ಪರಿಶಿಷ್ಟ ಜಾತಿಯ ಒಳಪಂಗಡಗಳಿಗೆ ಸಮಾನವಾಗಿ ತಲುಪಬೇಕು ಎಂಬ ಕಾರಣಕ್ಕೆ ಈ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಮನೆ ಮನೆಗೆ ಹೋಗಿ ಸಮೀಕ್ಷೆದಾರರು ಸಮೀಕ್ಷೆ ಮಾಡುವಾಗ ಸಹನೆ, ತಾಳ್ಮೆಯಿಂದ ಕಾರ್ಯನಿರ್ವಹಿಸಬೇಕು. ಸಮರ್ಪಕ ಹಾಗೂ ಎಲ್ಲಿಯೂ ಲೋಪವಾಗದಂತೆ ಯಾವುದೇ ಆರೋಪ ಬರದಂತೆ ಸತ್ಯ ಮತ್ತು ವಸ್ತುನಿಷ್ಠ ಸಮೀಕ್ಷೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.ಈ ವೇಳೆ ತಾಲೂಕಾ ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ, ಕಾರ್ಯದರ್ಶಿ ಎಸ್.ಆರ್.ಪಾಟೀಲ, ಐ.ಯ.ಮಠ, ಮಹಾದೇವ ಗುಡಗುಂಟಿ, ಬಿ.ಎಚ್.ಭಗವತಿ, ಸಿ.ಆರ್.ಪಿ ಗುಂಡು ಚವ್ಹಾಣ, ಪರಮೇಶ ಹೊಸಮನಿ, ಐ.ಎ.ಹಿರೇಮಠ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ