ಕುಡಿಯುವ ನೀರಿನ ಯೋಜನೆ ಹದಗೆಟ್ಟಿದ್ದರೂ ಜನಪ್ರತಿನಿಧಿಗಳು ದುರಸ್ತಿಗೆ ಮನಸ್ಸು ಮಾಡುತ್ತಿಲ್ಲ. ಪಟ್ಟಣದ ಹಳ್ಳದ ಕೇರಿಯ ಓಣಿಯಲ್ಲಿ ಹರಿಯುವ ಹಳ್ಳದ ನೀರು ಮನೆಯೊಳಗೆ ನುಗ್ಗುತ್ತಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.
ಲಕ್ಷ್ಮೇಶ್ವರ: ಕಳೆದ ಒಂದೂವರೆ ತಿಂಗಳಿಂದ ಕುಡಿಯುವ ನೀರು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಮಗ್ರ ರೈತಪರ ಹೋರಾಟ ವೇದಿಕೆ ವತಿಯಿಂದ ಪಟ್ಟಣದ ಪುರಸಭೆ ಎದುರು ಬುಧವಾರ ನಡೆಸಿದರು.
ಈ ವೇಳೆ ರೈತಪರ ಹೋರಾಟ ವೇದಿಕೆಯ ಮುಖಂಡ ಮಂಜುನಾಥ ಮಾಗಡಿ ಮಾತನಾಡಿ, ಕಳೆದ ಒಂದೂವರೆ ತಿಂಗಳಿಂದ ಪಟ್ಟಣದ ಜನತೆ ಕುಡಿಯುವ ನೀರು ಇಲ್ಲದೆ ಪರದಾಡುತ್ತಿದ್ದಾರೆ. ಪುರಸಭೆ ಅಧಿಕಾರಿಗಳನ್ನು ಕೇಳಿದರೆ ಕ್ಯಾರೆ ಎನ್ನುತ್ತಿಲ್ಲ. ಪೈಪ್ ಲೈನ್ ದುರಸ್ತಿಯ ನೆಪ ಹೇಳುತ್ತಾರೆ ಎಂದರು.
ಕುಡಿಯುವ ನೀರಿನ ಯೋಜನೆ ಹದಗೆಟ್ಟಿದ್ದರೂ ಜನಪ್ರತಿನಿಧಿಗಳು ದುರಸ್ತಿಗೆ ಮನಸ್ಸು ಮಾಡುತ್ತಿಲ್ಲ. ಪಟ್ಟಣದ ಹಳ್ಳದ ಕೇರಿಯ ಓಣಿಯಲ್ಲಿ ಹರಿಯುವ ಹಳ್ಳದ ನೀರು ಮನೆಯೊಳಗೆ ನುಗ್ಗುತ್ತಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಸಾಮೂಹಿಕ ಶೌಚಾಲಯ ಗಬ್ಬುನಾತ ಬೀರುತ್ತಿದ್ದರೂ ಸ್ವಚ್ಛತೆಗೆ ಪುರಸಭೆ ಕಾರ್ಮಿಕರು ಮುಂದಾಗುತ್ತಿಲ್ಲ. ಪಟ್ಟಣದ ಇಟ್ಟಿಗೇರಿ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದರು.
ಮಂಜುನಾಥ ಮಾಗಡಿ, ನಾಗರಾಜ ಚಿಂಚಲಿ ಮಾತನಾಡಿ, ಉಪವಿಭಾಗಾಧಿಕಾರಿಗಳು ಬಂದು ಮನವಿ ಸ್ವಿಕರಿಸಿ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ವರೆಗೂ ಇಲ್ಲಿಂದ ಕದಲುವುದಿಲ್ಲವೆಂದರು.
ಧರಣಿ ನಿರತ ಸ್ಥಳಕ್ಕೆ ಜಿಲ್ಲಾ ಯೋಜನಾ ನಿರ್ಧೇಶಕ ಬಸನಗೌಡ ಕೋಟೂರ ಆಗಮಿಸಿ, ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರದಲ್ಲಿಯೇ ಕೊಳವೆ ಬಾವಿ ಕೊರೆಯಿಸಿ ನೀರಿನ ವ್ಯವಸ್ಥೆ ಮಾಡಿಕೊಡುತ್ತೇವೆ. ಲಂಡಿ ಹಳ್ಳದ ನೀರಿನ ಸಮಸ್ಯೆಗೆ ಶಾಸ್ವತ ಪರಿಹಾರ ಕಂಡುಹಿಡಿಯಲು ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಇನ್ನುಳಿದ ಸಮಸ್ಯೆಗಳನ್ನು ಕ್ರಿಯಾಯೋಜನೆ ತಯಾರಿಸಿ ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದರು. ನಂತರ ಪ್ರತಿಭಟನೆ ಮೊಟಕುಗೊಳಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.