ಕನ್ನಡಪ್ರಭ ವಾರ್ತೆ ಅಥಣಿ
ಸಂಘದ ತಾಲೂಕು ಅಧ್ಯಕ್ಷ ಕಲ್ಮೇಶ ಸತ್ತಿ ಮಾತನಾಡಿ, ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಮುಳಖೇಡ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಮೇಲ್ವಿಚಾರಕಿ ಭಾಗ್ಯವತಿಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಸರಿಯಾಗಿ ವೇತನ ನೀಡದೇ ಸತಾಯಿಸುತ್ತಿದ್ದ ಹಿನ್ನೆಲೆ ಅವರು, ನಾನು ಕುಟುಂಬ ನಿರ್ವಹಣೆ ಹೇಗೆ ಮಾಡುವುದು ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಇನ್ಮುಂದೆ ಯಾವುದೇ ಗ್ರಂಥಾಲಯ ಮೇಲ್ವಿಚಾರಕರಿಗೆ ಆಗಬಾರದು ಎಂದರು.
ನಮ್ಮ ಅಥಣಿ ತಾಲೂಕಿನಲ್ಲಿಯೂ ಗ್ರಂಥಾಲಯ ಮೇಲ್ವಿಚಾರಕರ ವೇತನವನ್ನು ಕೆಲವು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಇಲ್ಲಿವರೆಗೆ ನೀಡುತ್ತಿಲ್ಲ. ಮೇಲ್ವಿಚಾರಕರು ಬತಡತನ ಕುಟುಂಬದಿಂದ ಬಂದವರಾಗಿದ್ದು, ಪ್ರತಿ ತಿಂಗಳ ವೇತನ ಪಾವತಿ ಆಗದಿದ್ದರೇ ಮಕ್ಕಳ ಶಿಕ್ಷಣ, ಕುಟುಂಬದ ನಿರ್ವಹಣೆಗೆ ತೊಂದರೆಯಾಗುತ್ತಿದೆ. ಆದ್ದರಿಂದ ಜಿಪಂ ವತಿಯಿಂದ ಮೇಲ್ವಿಚಾರಕರಿಗೆ ಇಲ್ಲಿಯವರೆಗೆ ಬರಬೇಕಾದ ಮೊತ್ತ ಕೂಡಾ ಪ್ರತಿ ತಿಂಗಳು ಪಾವತಿಯಾಗುತ್ತಿಲ್ಲ. ಕೂಡಲೇ ಗ್ರಾಪಂ ಸಿಬ್ಬಂದಿ ಜೊತೆಗೆ ಪ್ರತಿ ತಿಂಗಳು ತಾಲೂಕಿನ ಎಲ್ಲ ಗ್ರಂಥಾಲಯ ಮೇಲ್ವಿಚಾರಕರಿಗೆ ವೇತನ ಪಾವತಿ ಮಾಡುವಂತೆ ಪಿಡಿಒಗಳಿಗೆ ಸೂಚನೆ ನೀಡುವ ಮೂಲಕ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಪಂಚಾಯಿತಿಯಿಂದ ಬರಬೇಕಾದ ಬಾಕಿ ಇರುವ ವ್ಯತ್ಯಾಸದ ಮೊತ್ತ ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರು.ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪೂರ ಮನವಿ ಸ್ವೀಕರಿಸಿ, ತಮ್ಮ ಮನವಿಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಹಾಗೂ ತಾಲೂಕಿನಲ್ಲಿರುವ ಪ್ರತಿ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ವೇತನ ಮತ್ತು ಪತ್ರಿಕೆಗಳ ಬಿಲ್ ಬಾಕಿ ಉಳಿಯದಂತೆ ಪಾವತಿ ಮಾಡುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಇನ್ನು ಬಾಕಿ ಉಳಿದಿರುವ ಮೇಲ್ವಿಚಾರಕರ ವೇತನವನ್ನು ಎರಡು ದಿನಗಳಲ್ಲಿ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.