ದಸರಾ ಆಗಮಿಸುವ ಜನರಿಗೆ ತೊಂದರೆಯಾಗದಂತೆ ಮೂಲ ಸೌಕರ್ಯ ಕಲ್ಪಿಸಿ: ಶಾಸಕ ರಮೇಶ ಬಂಡಿಸಿದ್ದೇಗೌಡ

KannadaprabhaNewsNetwork |  
Published : Oct 10, 2026, 01:45 AM IST
9ಕೆಎಂಎನ್ ಡಿ16 ,17 | Kannada Prabha

ಸಾರಾಂಶ

ನಂತರ ದಸರಾ ಮಹೋತ್ಸವದ ಅಂಗವಾಗಿ ಶ್ರೀ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಡೆಯಲಿರುವ ಹಾಲು ಕರೆಯುವ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ದಸರಾಗೆ ಆಗಮಿಸುವ ಯುವ ಜನರು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಶಾಸಕ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಯುವ ಸಂಭ್ರಮ ಕಾರ್ಯಕ್ರಮದ ಸ್ಥಳಕ್ಕೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ಧ್ವನಿ ಮತ್ತು ಬೆಳಕಿನ ವ್ಯವಸ್ಥೆ ಸೇರಿದಂತೆ ವಿವಿಧ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಯುವಕ- ಯುವತಿಯರಿಗೆ ವಸ್ತ್ರ ಬದಲಾಯಿಸಿಕೊಳ್ಳಲು ಪ್ರತ್ಯೇಕ ಕೊಠಡಿ, ಕಲಾವಿದರು ಹಾಗೂ ಯುವಜನರ ಅನುಕೂಲಕ್ಕಾಗಿ ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ನಿಗದಿತ ಸಮಯದೊಳಗೆ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ನಾಡಹಬ್ಬ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಯುವ ಸಂಭ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರ ಪ್ರವೇಶ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ಮಾರ್ಗಗಳನ್ನು ರೂಪಿಸಿ, ವಾಹನಗಳ ಸಂಚಾರ ದಟ್ಟಣೆ ತಪ್ಪಿಸಲು ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಅಗತ್ಯ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಆಹಾರ ಮಳಿಗೆಗಳ ವ್ಯವಸ್ಥೆ, ಶೌಚಾಲಯಗಳ ಸ್ವಚ್ಛತೆ ಹಾಗೂ ನಿರಂತರ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಬನ್ನಿಮಂಟಪ ಪರಿಶೀಲನೆ:

ತಾಲೂಕಿನ ಕಿರಂಗೂರು ಗ್ರಾಮದ ಬನ್ನಿಮಂಟಪದಲ್ಲಿ ಆರಂಭಗೊಳ್ಳುವ ಜಂಬೂ ಸವಾರಿ ಉದ್ಘಾಟನಾ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಬನ್ನಿಮಂಟಪದ ಆವರಣ ಮತ್ತು ಕೊಳದ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು. ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕಲಾವಿದರಿಗೆ ಶಾಮಿಯಾನ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಸಾರ್ವಜನಿಕರು, ಕಲಾವಿದರು ಹಾಗೂ ಗಣ್ಯರಿಗೆ ಸೌಲಭ್ಯ ಕಲ್ಪಿಸಲು ಎಲ್ಲಾ ವ್ಯವಸ್ಥೆಗಳನ್ನು ಮುಂಚಿತವಾಗಿ ಪರಿಶೀಲಿಸಿ ಬಾಕಿ ಇರುವ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಶ್ರೀರಂಗನಾಥ ದೇಗುಲ ಆವರಣ ಪರಿಶೀಲನೆ:

ನಂತರ ದಸರಾ ಮಹೋತ್ಸವದ ಅಂಗವಾಗಿ ಶ್ರೀ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಡೆಯಲಿರುವ ಹಾಲು ಕರೆಯುವ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

ಕಾರ್ಯಕ್ರಮಗಳು ನಡೆಯಲಿರುವ ಸ್ಥಳ, ವೇದಿಕೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ವೀಕ್ಷಿಸಿ ಕಾರ್ಯಕ್ರಮದ ಸ್ಥಳದಲ್ಲಿ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಆರ್.ಒ. ಕುಡಿಯುವ ನೀರಿನ ಘಟಕ ಪರಿಶೀಲಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ನಿರಂತರವಾಗಿ ಲಭ್ಯವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಸ್ಥಳದಲ್ಲಿ ಧೂಳು ಉಂಟಾಗದಂತೆ ಅಗತ್ಯವಿರುವ ಕಡೆ ಗ್ರಾವೆಲ್ ಹಾಕಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಈ ವೇಳೆ ಡೀಸಿ ಡಾ.ಕುಮಾರ, ಎಸ್ಪಿ ಡಾ.ವಿ.ಜೆ.ಶೋಭಾರಾಣಿ, ಪುರಸಭೆ ಮುಖ್ಯಾಧಿಕಾರಿ ಎಂ. ರಾಜಣ್ಣ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

-------------

9ಕೆಎಂಎನ್ ಡಿ16 ,17

ಶ್ರೀರಂಗಪಟ್ಟಣ ದಸರಾ ಅಂಗವಾಗಿ ತಾಲೂಕಿನ ಕಿರಂಗೂರು ಗ್ರಾಮದ ಬನ್ನಿಮಂಟಪದಲ್ಲಿ ಆರಂಭಗೊಳ್ಳುವ ಜಂಬೂ ಸವಾರಿ ಉದ್ಘಾಟನಾ ಸ್ಥಳಕ್ಕೆ ಶಾಸಕ ರಮೇಶ ಬಂಡಿಸಿದ್ದೇಗೌಡ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಶ್ರೀರಂಗಪಟ್ಟಣ ಶ್ರೀ ರಂಗನಾಥ ದೇವಾಲಯದ ಆವರಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ನಡೆಯವ ಹಾಲು ಕರೆಯುವ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉದ್ಘಾಟನೆಗೆ ಮುನ್ನವೇ ಕಟ್ಟಡ ಬಿರುಕು
ಬಸರವಳ್ಳಿ ಪಂಚಾಯಿತಿ ಹಸಲರ ವಾರ್ಡಿಗೆ ಬೇಕಿದೆ ಸಂಪರ್ಕ ಸೇತುವೆ