ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನ್ಯೂ ತಮಿಳು ಕಾಲೋನಿಗೆ ಮೂಲ ಸೌಲಭ್ಯ ಒದಗಿಸುವ ಸಂಬಂಧ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಕಾಲೋನಿಗೆ ಪ್ರಮುಖವಾಗಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಬೀದಿ ದೀಪದ ವ್ಯವಸ್ಥೆ ಶೀಘ್ರ ಕಲ್ಪಿಸಬೇಕು. ಹಂತ ಹಂತವಾಗಿ ರಸ್ತೆ ಕಾಮಗಾರಿ, ಚರಂಡಿ ವ್ಯವಸ್ಥೆಗಳನ್ನು ಪೂರ್ಣಗೊಳಿಸಿ ಎಂದು ಹೇಳಿದರು.
ಎಸ್‌ಸಿಪಿ ಯೋಜನೆಯಡಿ ಪ್ರೌಢಶಾಲಾ, ಪಿಯುಸಿ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ತಮಿಳು ಕಾಲೋನಿ ಮಕ್ಕಳಿಗೆ ಉಚಿತವಾಗಿ ಕಂಪ್ಯೂಟರ್ ತರಬೇತಿ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ನ್ಯೂ ತಮಿಳು ಕಾಲೋನಿ ನಿವಾಸಿಗಳ ಇ- ಖಾತಾ ಮಾಡಿಸುವ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಬಾಕಿ ಇರುವ ಇ-ಖಾತೆಗಳನ್ನು ಮನೆ- ಮನೆಗೆ ಹೋಗಿ ಶೀಘ್ರದಲ್ಲೇ ಪೂರ್ಣಗೊಳಿಸಬೇಕು ಹಾಗೂ ನಿವೇಶನ ರಹಿತರಿಗೆ ವಸತಿ ಒದಗಿಸಲು ಸ್ಥಳ ಪರಿಶೀಲಿಸಿ ಎಂದು ಹೇಳಿದರು.
ಸಭೆಯಲ್ಲಿ ತಹಸೀಲ್ದಾರ್ ವಿಶ್ವನಾಥ್, ಉಪವಿಭಾಗಾಧಿಕಾರಿ ಶಿವಮೂರ್ತಿ ಹಾಗೂ ನಗರಾಭಿವೃದ್ಧಿ ಕೋಶ ಜಂಟಿ ನಿರ್ದೇಶಕ ನರಸಿಂಹಮೂರ್ತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.