ರೇಣುಕಾಂಬೆ ಭಕ್ತರಿಗೆ ಮೂಲಭೂತ ಸೌಕರ್ಯ ಕಲ್ಪಿಸಿ: ವೀರೇಶ್‌ಕುಮಾರ್

KannadaprabhaNewsNetwork |  
Published : Feb 02, 2026, 02:00 AM IST
ಫೋಟೋ:೩೧ಕೆಪಿಸೊರಬ-೦೧ : ಸೊರಬ ತಾಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ಕುರಿತು ಸಾಗರ ಉಪ ವಿಭಾಗಾಧಿಕಾರಿ ವೀರೇಶ್‌ಕುಮಾರ್ ಪೂರ್ವಭಾವಿ ಸಭೆ ನಡೆಸಿದರು. | Kannada Prabha

ಸಾರಾಂಶ

ಪುರಾಣ ಮತ್ತು ಐತಿಹಾಸಿಕ ಪ್ರಸಿದ್ಧ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಸಾಗರ ಉಪ ವಿಭಾಗಾಧಿಕಾರಿ ವೀರೇಶ್‌ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಸೊರಬ

ಪುರಾಣ ಮತ್ತು ಐತಿಹಾಸಿಕ ಪ್ರಸಿದ್ಧ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಸಾಗರ ಉಪ ವಿಭಾಗಾಧಿಕಾರಿ ವೀರೇಶ್‌ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಶನಿವಾರ ನಡೆದ ಜಾತ್ರಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ವರ್ಷದ ಜಾತ್ರಾ ಮಹೋತ್ಸವವು ಫೆ. ೨೨ರಿಂದ ೨೭ರವರೆಗೆ ನಡೆಯಲಿದ್ದು, ಫೆ. ೨೫ರಂದು ಮಹಾರಥೋತ್ಸವ ನಡೆಯಲಿದೆ. ಈ ನಿಟ್ಟಿನಲ್ಲಿ ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗಾಗಿ ಟ್ಯಾಂಕರ್ ಮೂಲಕ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು. ದೇವಸ್ಥಾನದ ಕೊಳವೆಬಾವಿಗೆ ತುರ್ತಾಗಿ ಪ್ರತ್ಯೇಕ ವಿದ್ಯುತ್ ಟ್ರಾನ್ಸ್ಫಾರ್ಮರ್ ಅಳವಡಿಸಿ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದರು.

ರಥ ಬೀದಿ ಮತ್ತು ದೇವಸ್ಥಾನದ ಪರಿಸರವನ್ನು ಸ್ವಚ್ಛವಾಗಿಡಲು ಸೊರಬ ಪುರಸಭೆಯ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಜೊತೆಗೆ ಭಕ್ತರಿಗೆ ನೆರಳಿನ ವ್ಯವಸ್ಥೆಗಾಗಿ ಶೆಡ್‌ಗಳ ನಿರ್ಮಾಣ ಹಾಗೂ ಮೊಬೈಲ್ ಶೌಚಾಲಯಗಳನ್ನು ಕಲ್ಪಿಸಲಾಗುವುದು. ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರ ಹಿತದೃಷ್ಟಿಯಿಂದ ತುರ್ತು ಆರೋಗ್ಯ ಕೇಂದ್ರ, ಪೊಲೀಸ್ ಬಂದೋಬಸ್ತ್, ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಹೆಚ್ಚಿನ ಬಸ್ ವ್ಯವಸ್ಥೆ ಮಾಡಲಾಗುವುದು. ಇದೇ ವೇಳೆ ಹಳೆಯ ಬಾಕಿ ಬಿಲ್‌ಗಳ ಪಾವತಿ ಬಗ್ಗೆ ಚರ್ಚೆ ನಡೆದಿದ್ದು, ಶೀಘ್ರವೇ ಸಮಸ್ಯೆಯನ್ನು ಬಗೆಹರಿಸುವುದಾಗಿ ಉಪ ವಿಭಾಗಾಧಿಕಾರಿ ಭರವಸೆ ನೀಡಿದರು.

ತಹಸೀಲ್ದಾರ್ ಮಂಜುಳಾ ಹೆಗಡಾಳ್, ದೇವಸ್ಥಾನದ ಇ.ಒ. ಪ್ರಮೀಳಾ ಕುಮಾರಿ, ತಾಪಂ ಮಾಜಿ ಅಧ್ಯಕ್ಷ ಎಚ್. ಗಣಪತಿ ಹುಲ್ತಿಕೊಪ್ಪ, ಗ್ರಾಪಂ ಉಪಾಧ್ಯಕ್ಷ ಎಂ.ಬಿ. ರೇಣುಕಾಪ್ರಸಾದ್, ಸೊರಬ ವೃತ್ತ ನಿರೀಕ್ಷಕ ಮಾಲತೇಶ್, ಶ್ರೀ ರೇಣುಕಾಂಬ ದೇವಿ ದಸರಾ ಉತ್ಸವ ಆಚರಣಾ ಸಮಿತಿ ಅಧ್ಯಕ್ಷ ಆರ್. ಶ್ರೀಧರ್ ಹುಲ್ತಿಕೊಪ್ಪ, ತಾಪಂ ಮಾಜಿ ಸದಸ್ಯ ಎನ್.ಜಿ. ನಾಗರಾಜ್, ಗ್ರಾಪಂ ಸದಸ್ಯರಾದ ಎಂ.ಪಿ. ರತ್ನಾಕರ, ಶ್ರೀಮತಿ ಚಂದ್ರಕಾಂತ್, ಲಕ್ಷ್ಮೀ ರವಿ, ಪಿ.ಎಸ್.ಐ. ನವೀನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂತಃಕರಣದ ಪರಿಶುದ್ಧತೆಯೇ ನಿಜ ಆಧ್ಯಾತ್ಮಿಕ ಸಾಧನೆ: ಸ್ವಾಮಿ ಬ್ರಹ್ಮಾನಂದ ಸರಸ್ವತಿ ಶ್ರೀ
ಸಾಮಾನ್ಯರ ಜೇಬಿಗೆ ನೆಮ್ಮದಿ, ಪ್ರಗತಿಗೆ ಮುನ್ನುಡಿ ಬಜೆಟ್‌