ಕನ್ನಡಪ್ರಭ ವಾರ್ತೆ ಬಾಗೂರು
ಕೇಂದ್ರ ಸರ್ಕಾರದ 15ನೇ ಹಣಕಾಸಿನ ಯೋಜನೆ ಮೂಲಕ ಆರೋಗ್ಯ ಇಲಾಖೆಯ ಆಯುಷ್ಮಾನ್ ಸ್ವಾಸ್ಥ್ಯ ಯೋಜನೆ ವತಿಯಿಂದ ತಾಲೂಕಿನಲ್ಲಿ 40 ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ ಗ್ರಾಮದಲ್ಲಿ ಸುಮಾರು 65 ಲಕ್ಷದಲ್ಲಿ ನೂತನ ಆರೋಗ್ಯ ಕಟ್ಟಡ ನಿರ್ಮಾಣವಾಗಲಿದೆ ಸುಸರ್ಜಿತ ಹೊಸ ಕಟ್ಟಡದಲ್ಲಿ ಗ್ರಾಮಸ್ಥರಿಗೆ ಉತ್ತಮ ಆರೋಗ್ಯ ಸೇವೆ ಲಭಿಸಲಿದೆ ಎಂದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಗ್ಯ ಇಲಾಖೆಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಪಡೆಯಲು ಯೋಜನೆಗಳನ್ನು ರೂಪಿಸಿ ಆರೋಗ್ಯ ಸೌಲಭ್ಯ ನೀಡಬೇಕು.ಗ್ರಾಮದಲ್ಲಿ ಈಗಾಗಲೇ ಹಲವು ರಸ್ತೆಗಳ ಅಭಿವೃದ್ಧಿಗೆ ದೇವಾಲಯಗಳ ನಿರ್ಮಾಣಕ್ಕೆ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಸದ್ಯದಲ್ಲೇ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುತ್ತದೆ ಗ್ರಾಮದ ಮುಖ್ಯ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಅಭಿವೃದ್ಧಿಪಡಿಸಲಾಗುತ್ತದೆ. ಮಳೆಯ ಕೊರತೆಯಿಂದ ಹೇಮಾವತಿ ಡ್ಯಾಮ್‌ನಿಂದ ಕಡಿಮೆ ಅವರಿಗೆ ನೀರು ಹರಿಸುತ್ತಿರುವುದರಿಂದ ಗ್ರಾಮದ ಕೆರೆಯನ್ನು ತುಂಬಿಸಲು ಸಾಧ್ಯವಾಗುತ್ತಿಲ್ಲ ಮುಂಬರುವ ದಿನಗಳಲ್ಲಿ ಮಳೆಯಾಗದಿದ್ದರೆ ರೈತರು ಸಂಕಷ್ಟ ಎದುರಿಸಬೇಕಾಗುತ್ತದೆ. ಚನ್ನರಾಯಪಟ್ಟಣ ತಾಲೂಕು ತೀವ್ರ ಬರಗಾಲದ ಪಟ್ಟಿಗೆ ಸೇರಿದ್ದು ಸರ್ಕಾರದ ಮಾರ್ಗಸೂಚಿ ಅನ್ವಯ ರೈತರಿಗೆ ಪರಿಹಾರ ದೊರಕಲಿದೆ ಬೇಡಿಕೆಯಷ್ಟು ತಾಲೂಕಿಗೆ ಪ್ರತಿದಿನ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಸಂಜೆ ವೇಳೆಯಲ್ಲಿ ಹೆಚ್ಚಿನ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ತೊಂದರೆಯಾಗುತ್ತಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡುವುದಾಗಿ ಹೇಳಿದರು. ಮಾಜಿ ಎಪಿಎಂಸಿ ಅಧ್ಯಕ್ಷ ಬಿ ಎಚ್ ಶಿವಣ್ಣ ಮಾತನಾಡಿದರು. ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ವಿ ಎನ್ ಮಂಜುನಾಥ್, ತಾಪಂ ಮಾಜಿ ಸದಸ್ಯ ಓಬಳಾಪುರ ಬಸವರಾಜ್, ತಾಲೂಕು ಟಿಎಪಿಎಂಎಸ್ ಮಾಜಿ ನಿರ್ದೇಶಕ ಬಾಗೂರು ಮನು, ಲ್ಯಾಂಡ್ ಆರ್ಮಿ ಇಂಜಿನಿಯರ್ ಪ್ರೀತಮ್ ಗುತ್ತಿಗೆದಾರರಾದ ಗೋಪಾಲ್, ಹೆಬ್ಬಾಳು ವೆಂಕಟೇಶ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾಕಮ್ಮ ಲಿಂಗರಾಜ್, ಮುಖಂಡರಾದ ಮಂಜಪ್ಪ, ದಿನೇಶ್ ಮಾಸ್ಟ್ರು, ಬಸವರಾಜ್, ಡೇರಿ ನವೀನ್, ಹರ್ಷ, ಚೇತನ್, ವಾಟರ್‌ಮ್ಯಾನ್ ದಯಾನಂದ್, ಸುದೀಪ್, ಸೋಂಬಲಿಂಗಪ್ಪ, ರಂಗಸ್ವಾಮಿ, ಹುಲಿಕೆರೆ ಸಂಪತ್ ಕುಮಾರ್, ಸುರೇಶ್, ಕುಮಾರ್, ಸದಾಶಿವ, ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.