ಕನ್ನಡಪ್ರಭ ವಾರ್ತೆ ಬಸವಕಲ್ಯಾಣ
ತಾಲ್ಲೂಕಿನ ಮಂಠಾಳ ಗ್ರಾಮಕ್ಕೆ ಗುರುವಾರ ವಿಬಿ ಜಿ ರಾಮ್ ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕೂಲಿ ಕಾರ್ಮಿಕರ ಜೊತೆ ಸಂವಾದ ನಡೆಸಿ, ನಿಮ್ಮ ಮಕ್ಕಳು ನಿಮ್ಮ ಹಾಗೇ ಕೆಲಸ ಮಾಡಬಾರದು ಅಂದರೆ, ಅವರಿಗೆ ಉತ್ತಮವಾದ ಶಿಕ್ಷಣ ಕೊಡಬೇಕು ಅಂದಾಗ ಮಾತ್ರ ನೀವು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.
ನಾನು ಒಂದು ಬಡ ಕುಟುಂಬದಲ್ಲಿ ಜನಿಸಿದ್ದರೂ ನಮ್ಮ ತಂದೆ - ತಾಯಿ ಪಟ್ಟ ಪರಿಶ್ರಮದಿಂದ ನಾನು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿದೆ ಎಂದು ಕೂಲಿ ಕಾರ್ಮಿಕರ ಜೊತೆ ಕೆಲಸ ಮಾಡುವ ಮೂಲಕ ಅವರಿಗೆ ಪ್ರೋತ್ಸಾಹ ನೀಡಿದರು.ನೀವು ಮಾಡಿದ ಕೆಲಸದ ದುಡ್ಡು ಬರುತ್ತೆ ಅದಕ್ಕೆ ಚಿಂತೆ ಮಾಡುವುದು ಅವಶ್ಯಕತೆ ಇಲ್ಲ ಎಂದು ಕೂಲಿ ಕಾರ್ಮಿಕರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಜಿಲ್ಲೆ ಯಲ್ಲಿಯೇ ಬಸವಕಲ್ಯಾಣದಲ್ಲಿ ವಿಬಿ ಜಿ ರಾಮ ಜಿ ಕಾಮಗಾರಿ ಚೆನ್ನಾಗಿ ನಡೆಯುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿ. ಇದೇ ಸಂದರ್ಭದಲ್ಲಿ ವಿಬಿ ಜಿ ರಾಮ ಜಿ ಯೋಜನೆಯಡಿ ನೋಂದಣಿ ಮಾಡಿಕೊಂಡ ಕೂಲಿ ಕಾರ್ಮಿಕರಿಗೆ ನೂತನ ಜಾಬ್ ಕಾರ್ಡ್ ವಿತರಿಸಿದರು.
ಬೆಳ್ಳಂ ಬೆಳಗ್ಗೆ ಮಂಠಾಳ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ, ಗ್ರಾಮದಲ್ಲಿನ ಜೆಜೆಎಂ ಕಾಮಗಾರಿ, ಅರಿವು ಕೇಂದ್ರ, ಅಂಗನವಾಡಿ ಕೇಂದ್ರ, ಸರ್ಕಾರಿ ಶಾಲೆ, ವಸತಿ ಶಾಲೆಗೆ ಮತ್ತು ವಿಬಿ ಜಿ ರಾಮ್ ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ನೀಡುವ ಔಷಧಿಗಳು ಮತ್ತು ರೋಗಿಗಳ ಜೊತೆ ಸಂವಾದ ನಡೆಸುವ ಮೂಲಕ ಅಲ್ಲಿನ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಬಸವಕಲ್ಯಾಣ ನಗರದ ಸಾರ್ವಜನಿಕರ ಆಸ್ಪತ್ರೆಗೆ ಭೇಟಿ ನೀಡಿದ ಅವರು, ರಕ್ತ ಪರೀಕ್ಷೆ, ಐಸಿಟಿಸಿ, ಸ್ಕ್ಯಾನಿಂಗ್ ಹಾಗೂ ತಾಯಿ ಮತ್ತು ಮಗು ಆರೈಕೆ ಆಸ್ಪತ್ರೆ ಸೇರಿದಂತೆ ವಿವಿಧ ವಿಭಾಗಕ್ಕೆ ಭೇಟಿ ನೀಡಿ ರೋಗಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಚಿಕಿತ್ಸೆ ನೀಡಬೇಕು ಎಂದು ಆಸ್ಪತ್ರೆಯ ಸಿಬ್ಬಂದಿಗೆ ಸೂಚನೆ ನೀಡಿದರು.