ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ನಗರ ಕೋಶಾಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಮೂರು ತಿಂಗಳ ಕುಡಿಯುವ ನೀರಿನ ಮಾದರಿಯ ವರದಿಯನ್ನು ಅವಲೋಕಿಸಿ ಸಮಸ್ಯೆ ಇರುವ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳನ್ನು ಸರಿಪಡಿಸುವಂತೆ ಸಲಹೆ ನೀಡಿದರು.
ನಗರ ಪ್ರದೇಶದ ವಸತಿರಹಿತ ಪಟ್ಟಿಯನ್ನು ಸಿದ್ಧಪಡಿಸಿ ಆನ್‌ಲೈನ್ ತಂತ್ರಾಂಶಗಳಿಗೆ ಆಪ್‌ಲೋಡ್ ಮಾಡಬೇಕು. ಅಂಬೇಡ್ಕರ್ ವಸತಿ ಯೋಜನೆಯಲ್ಲಿ ಒಟ್ಟು ೯೭೪ ಮನೆಗಳು ಪೂರ್ಣಗೊಂಡಿದೆ. ೧೫೬ ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಕಳೆದ ಒಂದು ತಿಂಗಳಿನಿಂದ ೭ ಮನೆಗಳ ಕಾಮಗಾರಿ ಪೂರ್ಣಗೊಂಡಿದೆ. ವಸತಿ ಸಂಬಂಧಿಸಿದ ಯೋಜನೆಗಳ ಕಾಮಗಾರಿಯನ್ನು ವಿಳಂಬ ಮಾಡದೆ ಶೀಘ್ರವಾಗಿ ಪೂರ್ಣಗೊಳಿಸಿ ಎಂದರು.೧೫ ನೇ ಹಣಕಾಸು ಆಯೋಗದಲ್ಲಿ ಯಾವುದೇ ಕಾಮಗಾರಿಯ ಟೆಂಡರ್‌ಗಳನ್ನು ಬಾಕಿ ಉಳಿಸಿಕೊಳ್ಳದೆ ಶೀಘ್ರವಾಗಿ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಿ. ಟೆಂಡರ್‌ಗಳನ್ನು ವಿಳಂಬ ಮಾಡಬೇಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಲ್ಲೆಯಲ್ಲಿ ಒಟ್ಟು ೯ ಇಂದಿರಾ ಕ್ಯಾಂಟೀನ್ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಉತ್ತಮ ಹಾಗೂ ಶುದ್ಧ ಅಹಾರ ಒದಗಿಸುತ್ತಿರುವ ಬಗ್ಗೆ ಹಾಗೂ ಇಂದಿರಾ ಕ್ಯಾಂಟೀನ್‌ಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಆಹಾರದ ಗುಣಮಟ್ಟ ಪರೀಶೀಲನೆ ನಡೆಸುವಂತೆ ಸೂಚಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶಾಧಿಕಾರಿ ಟಿ.ಎನ್.ನರಸಿಂಹಮೂರ್ತಿ, ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರತಾಪ್, ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ನಗರಸಭೆಯ ಪರಿಸರ ಅಭಿಯಂತರ ರುದ್ರೇಗೌಡ ಇತರರಿದ್ದರು.