ಬರಪೀಡಿತ ಪ್ರದೇಶದ ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ: ಸಿ.ಟಿ. ರವಿ

KannadaprabhaNewsNetwork |  
Published : Jul 28, 2026, 02:30 AM IST
ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ ಸಮೀಪದ ರೈತ ನಿಂಗಪ್ಪ ಬಡಿಗೇರ ಅವರ ಹೊಲಕ್ಕೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ಬಿಜೆಪಿ ನಾಯಕರು ಭೇಟಿ ನೀಡಿ ಬೆಳೆ ಪರಿಸ್ಥಿತಿ ಪರಿಶೀಲಿಸಿದರು. | Kannada Prabha

ಸಾರಾಂಶ

ಕುಷ್ಟಗಿ ತಾಲೂಕಿನ ತಾವರಗೇರಾ ಸಮೀಪದ ರೈತ ನಿಂಗಪ್ಪ ಬಡಿಗೇರ ಅವರ ಹೊಲಕ್ಕೆ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಭೇಟಿ ನೀಡಿ ಬೆಳೆ ಪರಿಸ್ಥಿತಿ ಪರಿಶೀಲಿಸಿದರು.

ಕುಷ್ಟಗಿ: ತೀವ್ರ ಬರಗಾಲದಿಂದ ತತ್ತರಿಸಿರುವ ರೈತರಿಗೆ ಪರಿಹಾರವಾಗಿ ಎಕರೆಗೆ ₹50 ಸಾವಿರ ಪರಿಹಾರವನ್ನು ರಾಜ್ಯ ಸರ್ಕಾರ ತಕ್ಷಣವೇ ಘೋಷಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.

ತಾಲೂಕಿನ ತಾವರಗೇರಾ ಸಮೀಪದ ರೈತ ನಿಂಗಪ್ಪ ಬಡಿಗೇರ ಅವರ ಹೊಲಕ್ಕೆ ಭೇಟಿ ನೀಡಿ ಬೆಳೆ ಪರಿಸ್ಥಿತಿ ಪರಿಶೀಲಿಸಿದರು. ಬಳಿಕ ರೈತರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ನೆರವಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೊಪ್ಪಳ, ರಾಯಚೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರು ಬರದಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆ ಇಲ್ಲದೆ ಬೆಳೆಗಳು ನಾಶವಾಗಿದ್ದು, ರೈತರು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ಬರಬೇಕಾದರೆ, ಸಚಿವ ಸಂಪುಟ ವಿಸ್ತರಣೆ ಹಾಗೂ ರಾಜಕೀಯ ಬೆಳವಣಿಗೆಗಳಲ್ಲೇ ನಿರತವಾಗಿರುವುದು ದುರದೃಷ್ಟಕರ ಎಂದ ಅವರು, ಬರ ಪರಿಹಾರವನ್ನು ತಕ್ಷಣ ಘೋಷಿಸಿ, ಎಕರೆಗೆ ₹50 ಸಾವಿರ ಪರಿಹಾರ ನೀಡುವ ಮೂಲಕ ರೈತರ ಬದುಕಿಗೆ ಆಸರೆಯಾಗಬೇಕು ಎಂದರು.

ಸಿ.ಟಿ. ರವಿ ಎದುರು ಅಳಲು ತೋಡಿಕೊಂಡ ರೈತರು, ಮಳೆಯ ಕೊರತೆಯಿಂದ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಉದ್ಯೋಗವಿಲ್ಲದೆ ಪಟ್ಟಣಗಳಿಗೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ಕಷ್ಟಗಳಿಗೆ ಸ್ಪಂದಿಸುವವರು ಯಾರೂ ಇಲ್ಲದಂತಾಗಿದೆ ಎಂದರು.

ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಶಾಸಕ ಪರಣ್ಣ ಮನವಳ್ಳಿ, ಮಾಜಿ ಸಂಸದ ಶಿವರಾಮಗೌಡ, ಮಾಜಿ ಶಾಸಕ ಬಸವರಾಜ ದಢೇಸೂಗೂರು, ಮುಖಂಡರಾದ ತಿಪ್ಪೇರುದ್ರಸ್ವಾಮಿ, ಕುಷ್ಟಗಿ ಬಿಜೆಪಿ ತಾಲೂಕು ಅಧ್ಯಕ್ಷ ಮಾಂತೇಶ್ ಬದಾಮಿ, ಕೆ. ಮಹೇಶ್, ವೀರಭದ್ರಪ್ಪ ನಾಲತವಾಡ, ಸಾಗರ್ ಬೇರಿ, ಶಿವನಗೌಡ ಪಾಟೀಲ್, ಮಂಜುನಾಥ ಜೊಲಕುಂಟಿ, ಪಪಂ ಸದಸ್ಯರಾದ ಬಸನಗೌಡ ಓಲಿ, ಶಾಮೂರ್ತಿ ಅಂಚಿ, ದಶರಥ್ ಸಿಂಗ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಚರಣೆಗಳ ವೈಜ್ಞಾನಿಕತೆ ಅರಿವು ಅಗತ್ಯ: ರಾಘವೇಶ್ವರ ಶ್ರೀ
ಸಿ.ಟಿ.ರವಿಗೆ ನೋಟೀಸ್, ಹಿಂದು ನಾಯಕರ ದನಿ ಹತ್ತಿಕ್ಕುವ ಪ್ರಯತ್ನ: ಯಶ್‌ಪಾಲ್