ಈರುಳ್ಳಿ ಹಾನಿಗೆ ಹೆಕ್ಟೇರ್‌ಗೆ ₹40 ಸಾವಿರ ಪರಿಹಾರ ನೀಡಿ: ರಾಜೀವ್‌

KannadaprabhaNewsNetwork |  
Published : Oct 26, 2025, 02:00 AM IST
25ಕೆಡಿವಿಜಿ11, 12-ದಾವಣಗೆರೆಯಲ್ಲಿ ಶನಿವಾರ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ರಾಜೀವ ಪಿ.ಕುಡುಚಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಅಕಾಲಿಕ ಮಳೆಯಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಈರುಳ್ಳಿ ಬೆಳೆಗಾರರಿಗೆ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಪ್ರತಿ ಹೆಕ್ಟೇರ್‌ಗೆ ₹40 ಸಾವಿರ ಪರಿಹಾರ ನೀಡುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ರಾಜೀವ ಪಿ. ಕುಡುಚಿ ಒತ್ತಾಯಿಸಿದ್ದಾರೆ.

ದಾವಣಗೆರೆ: ಅಕಾಲಿಕ ಮಳೆಯಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಈರುಳ್ಳಿ ಬೆಳೆಗಾರರಿಗೆ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಪ್ರತಿ ಹೆಕ್ಟೇರ್‌ಗೆ ₹40 ಸಾವಿರ ಪರಿಹಾರ ನೀಡುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ರಾಜೀವ ಪಿ. ಕುಡುಚಿ ಒತ್ತಾಯಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಸರ್ಕಾರ ಬೆಳೆ ಹಾನಿ ಪರಿಹಾರಕ್ಕೆಂದೇ ₹31 ಸಾವಿರ ಕೋಟಿ ಕಾಯ್ದಿರಿಸಿದೆ. ಉತ್ತರ ಕರ್ನಾಟಕದಲ್ಲಿ ಭೀಮಾ ನದಿ ಪ್ರವಾಹದಿಂದ 30 ಲಕ್ಷ ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಬೆಳೆ ನಷ್ಟವಾಗಿ, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಷ್ಟ್ರೀಯ ವಿಪತ್ತು ನಿಧಿಯಿಂದ ಹಣ ಬಿಡುಗಡೆಯಾದರೂ ರಾಜ್ಯ ಸರ್ಕಾರ ಅದನ್ನು ರೈತರ ಖಾತೆಗೆ ಇನ್ನೂ ಜಮಾ ಮಾಡುತ್ತಿಲ್ಲ. ರಾಷ್ಟ್ರೀಯ ವಿಪತ್ತು ನಿಧಿ ಜೊತೆ ರಾಜ್ಯ ಸರ್ಕಾರ ತನ್ನ ಖಜಾನೆಯಿಂದಲೂ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು.

2300 ರೈತರ ಆತ್ಮಹತ್ಯೆ:

ರಾಜ್ಯದಲ್ಲಿ 2300ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪೈಕಿ 930 ಕುಟುಂಬಕ್ಕೆ ಮಾತ್ರವೇ ಸರ್ಕಾರ ಪರಿಹಾರ ನೀಡಿದೆ. 1300ಕ್ಕೂ ಅಧಿಕ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣ ದಾಖಲಾಗಿವೆ. 15ಕ್ಕೂ ಹೆಚ್ಚು ಗುತ್ತಿಗೆದಾರರು ಸಾವಿಗೆ ಶರಣಾಗಿದ್ದಾರೆ. 7 ಜನ ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಧನಂಜಯ ಕಡ್ಲೇಬಾಳು, ಅನಿಲಕುಮಾರ ನಾಯ್ಕ, ಆರ್.ಎಲ್.ಶಿವಪ್ರಕಾಶ, ಬಿ.ಎಂ. ಸತೀಶ ಕೊಳೇನಹಳ್ಳಿ, ಮಾಜಿ ಮೇಯರ್ ಬಿ.ಜಿ. ಅಜಯಕುಮಾರ, ತಾರೇಶ ನಾಯ್ಕ, ಮಾರುತಿ ನಾಯ್ಕ ಇತರರು ಇದ್ದರು.

- - -

(ಟಾಪ್‌ ಕೋಟ್‌)

ರಾಜ್ಯದ ಕಾಂಗ್ರೆಸ್ ಸರ್ಕಾರ ವೈಫಲ್ಯ ಮುಚ್ಚಿಟ್ಟು, ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮುಖಾಂತರ ವ್ಯವಸ್ಥಿತವಾಗಿ ಮುಂದಿನ ನಾಯಕ ಸತೀಶ ಜಾರಕಿಹೊಳಿ ಎಂಬುದಾಗಿ ಹೇಳಿಸಿ, ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಇಲ್ಲ. ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಅರ್ಹತೆಗೆ ಅನುಸಾರ ನಾಯಕರಾಗಿದ್ದಾರೆ.

- ರಾಜೀವ ಪಿ. ಕುಚುಚಿ, ಮಾಜಿ ಶಾಸಕ.

- - -

-25ಕೆಡಿವಿಜಿ11, 12.ಜೆಪಿಜಿ:

PREV

Recommended Stories

ಟ್ರಾಫಿಕ್‌ ಜಾಮ್‌ಗೆ ಪರ್ಯಾಯ ಸಲಹೆ ನೀಡದ ಸೂರ್ಯ:ಡಿಸಿಎಂ
ಕುಡಿಯುವ ನೀರು, ಬೀದಿ ದೀಪ, ರಸ್ತೆ ಅಭಿವೃದ್ಧಿ ಸಮಸ್ಯೆ ನಿವಾರಣೆಗೆ ಆದ್ಯತೆ