ಮುಂಗಾರು ಮಳೆಯಾಗದೆ ರೈತರು ಕಂಗಾಲಾಗಿದ್ದು, ಬರಗಾಲ ಘೋಷಿಸಿ ರೈತರಿಗೆ ಬರ ಪರಿಹಾರ ನೀಡಬೇಕು. ಸಾಲ ಮನ್ನಾ ಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಜಿಲಾ ಯುವ ಜಾತ್ಯಾತೀತ ಜನತಾದಳ ಜಿಲಾ ಮಹಿಳಾ ಘಟಕದ ಅಧ್ಯಕ್ಷೆ ಮಹೇಶ್ವರಿ ವಾಲಿ ನೇತೃತ್ವದಲ್ಲಿ ಮಂಗಳವಾರ ಕಮಲಾಪುರ ತಹಸಿಲ್ದಾರ್ ಕಚೇರಿ ಎದುರು ಪ್ರತಿಭಟಿಸಲಾಯಿತು.
ಕನ್ನಡ ಪ್ರಭ ವಾರ್ತೆ ಕಮಲಾಪುರ
ಮುಂಗಾರು ಮಳೆಯಾಗದೆ ರೈತರು ಕಂಗಾಲಾಗಿದ್ದು, ಬರಗಾಲ ಘೋಷಿಸಿ ರೈತರಿಗೆ ಬರ ಪರಿಹಾರ ನೀಡಬೇಕು. ಸಾಲ ಮನ್ನಾ ಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಜಿಲಾ ಯುವ ಜಾತ್ಯಾತೀತ ಜನತಾದಳ ಜಿಲಾ ಮಹಿಳಾ ಘಟಕದ ಅಧ್ಯಕ್ಷೆ ಮಹೇಶ್ವರಿ ವಾಲಿ ನೇತೃತ್ವದಲ್ಲಿ ಮಂಗಳವಾರ ಕಮಲಾಪುರ ತಹಸಿಲ್ದಾರ್ ಕಚೇರಿ ಎದುರು ಪ್ರತಿಭಟಿಸಲಾಯಿತು.ಪಟ್ಟಣದ ಬಸ್ ನಿಲ್ದಾಣದಿಂದ ತಹಸಿಲ್ದಾರ್ ಕಚೇರಿವರೆಗೆ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ನಂತರ ಮುಖ್ಯಮಂತ್ರಿ ಅವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಮಹಮ್ಮದ್ ಮೊಸಿನ್ ಅವರಿಗೆ ಸಲ್ಲಿಸಲಾಯಿತು.ನಂತರ ಜಿಲ್ಲಾ ಘಟಕದ ಅಧ್ಯಕ್ಷೆ ಮಹೇಶ್ವರಿ ವಾಲಿ ಮಾತನಾಡಿ, ಜಿಲ್ಲೆಗಳಲ್ಲಿ ಮುಂಗಾರು ಮಳೆ ಆಗದೆ ರೈತರು ಬಹಳಷ್ಟು ಕಷ್ಟದಲ್ಲಿದ್ದಾರೆ. ಸತತ ಅತಿವೃಷ್ಟಿ ಹಾಗೂ ಅನಾವೃಷ್ಟಿಗಳಿಂದ ರೈತರಿಗೆ ತುಂಬಲಾಗದ ಹಾನಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಸಮಯದಲ್ಲಿ ನೆರವಿಗೆ ಬಂದು ರೈತರಿಗೆ ಬರ ಪರಿಹಾರ ವಿತರಿ, ಸಾಲ ಮನ್ನಾ ಮಾಡಬೇಕು. ಕಲಬುರ್ಗಿ ಜಿಲ್ಲೆ ಸಂಪೂರ್ಣ ಬರಗಾಲ ಘೋಷಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಇದ್ದರೂ ಮುಖ್ಯಮಂತ್ರಿಯವರು ಇಲ್ಲಿಯವರೆಗೂ ಬರಗಾಲ ಘೋಷಣೆ ಮಾಡಿಲ್ಲ. ಪರಿಹಾರ ಕೂಡ ಘೋಷಿಸಿಲ್ಲ.ಕೂಡಲೇ ಮುಖ್ಯಮಂತ್ರಿಗಳು ಮಧ್ಯಸ್ಥಿಕೆ ವಹಿಸಿ ಜಿಲ್ಲೆಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಬೇಕು. ವಿಮೆ ಕಂಪನಿ,ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಪರಿಶೀಲಿಸಿ ಬೆಳೆ ಹಾನಿಯಾದ ರೈತರಿಗೆ ಪರಿಹಾರವಾಗಿ ಪ್ರತಿ ಎಕರೆಗೆ 50 ಸಾವಿರ ನೀಡಬೇಕು ಎಂದು ಒತ್ತಾಯಿಸಿದರು.
ಪ್ರಧಾನ ಕಾರ್ಯದರ್ಶಿ ಬಸವರಾಜ ಬಿರಬಿಟ್ಟಿ, ಗ್ರಾಮೀಣ ಅಧ್ಯಕ್ಷ ಗಂಗಾಧರ್ ಪಂಚಾಳ, ಜೆಡಿಎಸ್ ಕಾರ್ಯಕರ್ತರು ಮಹಿಳೆಯರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.