ಕ್ವಾರಿಯಲ್ಲಿ ಮೃತಪಟ್ಟವರ ಕುಟಂಬಕ್ಕೆ ಪರಿಹಾರ ಕೊಡಿ: ಶ್ರೀನಿವಾಸ್, ಗೋವರ್ಧನ್

KannadaprabhaNewsNetwork |  
Published : Oct 25, 2026, 01:30 AM IST
 | Kannada Prabha

ಸಾರಾಂಶ

ತಾಲೂಕಿನ ಕುಂಚಾವರಂ ಗಡಿ ಪ್ರದೇಶದಲ್ಲಿನ ಬೋಪನಾರಂ ಕೆಂಪು ಮಣ್ಣು ಕ್ವಾರಿಯಲ್ಲಿ ನಿಂತ ನೀರಿನಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಬಾಲಕರ ಕುಟುಂಬಕ್ಕೆ ತೆಲಂಗಾಣ ಮತ್ತು ಕರ್ನಾಟಕ ಸರ್ಕಾರದಿಂದ 50ಲಕ್ಷ ರು.ಪರಿಹಾರ ನೀಡಬೇಕು ಎಂದು ಕುಂಚಾವರಂ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರಾದ ಶ್ರೀನಿವಾಸ್ ಮತ್ತು ಗೋವರ್ಧನ್ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಚಿಂಚೋಳಿ

ತಾಲೂಕಿನ ಕುಂಚಾವರಂ ಗಡಿ ಪ್ರದೇಶದಲ್ಲಿನ ಬೋಪನಾರಂ ಕೆಂಪು ಮಣ್ಣು ಕ್ವಾರಿಯಲ್ಲಿ ನಿಂತ ನೀರಿನಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಬಾಲಕರ ಕುಟುಂಬಕ್ಕೆ ತೆಲಂಗಾಣ ಮತ್ತು ಕರ್ನಾಟಕ ಸರ್ಕಾರದಿಂದ 50ಲಕ್ಷ ರು.ಪರಿಹಾರ ನೀಡಬೇಕು ಎಂದು ಕುಂಚಾವರಂ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರಾದ ಶ್ರೀನಿವಾಸ್ ಮತ್ತು ಗೋವರ್ಧನ್ ಮನವಿ ಮಾಡಿದರು.

ಬೋಪುನಾರಂ ಗ್ರಾಮದ ಕ್ವಾರಿ ದುರಂತದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಘಟನೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಬಾಲಕರ ಸಾವಿಗೆ ಕಾರಣವಾದವರು, ಪರಿಸ್ಥಿತಿಗಳನ್ನು ತನಿಖೆ ಮಾಡಿ ಪತ್ತೆಹಚ್ಚಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಮೃತ ಬಾಲಕರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಮತ್ತು ಆರ್ಥಿಕ ನೆರವು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.

ಕ್ವಾರಿಯ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲಿಸಿ ನಿಯಮಗಳ ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ದುರಂತಗಳು ಮರುಕಳಿಸದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಬೇಕೆಂದು. ಎರಡು ಎಳೆಯ ಮಕ್ಕಳು ಸಾವು ಬಡ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಸಂಬಂಧಪಟ್ಟ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಸರ್ಕಾರ ತಕ್ಷಣ ಸ್ಪಂದಿಸಿ ಘಟನೆಗೆ ಸಂಬಂಧಿಸಿದ ಸತ್ಯಾಂಶಗಳನ್ನು ಬಹಿರಂಗಪಡಿಸಿ, ಮೃತರ ಕುಟುಂಬಗಳಿಗೆ ನ್ಯಾಯ ಹಾಗೂ ಸೂಕ್ತ ಪರಿಹಾರ ದೊರಕಿಸಿ ಕೊಡಬೇಕು ಎಂದು ಶ್ರೀನಿವಾಸ್ ಮತ್ತು ಗೋವರ್ಧನ್‌ ಆಗ್ರಹಿಸಿದರು.

-----ಫೋಟೊ------

24ಜಿಯು.ಸಿಎಚ1

ಚಿಂಚೋಳಿ ತಾಲೂಕಿನ ಕುಂಚಾವರಂ ಗಡಿ ಪ್ರದೇಶದ ಅಕ್ರಮ ಕೆಂಪು ಮಣ್ಣಿನ ಕ್ವಾರಿ ಗಣಿಗಾರಿಕೆ ಪ್ರದೇಶ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳೆಯ ಸಿಂಚನ ನಡುವೆಯೂ ಧಮ್ಮ ನಡಿಗೆ
ಶಿಕ್ಷಣದ ಮೂಲಕವೇ ಸಮುದಾಯ ಪರಿವರ್ತನೆ ಸಾಧ್ಯ