ನಾಗರಿಕರಿಗೆ ಎಸ್‌ಐಆರ್‌ ಬಗ್ಗೆ ಪರಿಪೂರ್ಣ ಮಾಹಿತಿ ತಲುಪಿಸಿ

KannadaprabhaNewsNetwork |  
Published : Jun 30, 2026, 01:45 AM IST
29ಎಚ್ಎಸ್ಎನ್7 :  | Kannada Prabha

ಸಾರಾಂಶ

ಸಾರ್ವಜನಿಕರಿಗೆ ಸಹಾಯಕವಾಗುವಂತೆ ಚುನಾವಣಾ ಆಯೋಗದ ವೈಬ್‌ಸೈಟ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿಯೂ ಸಹ ಎಸ್.ಐ.ಆರ್ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್ ಮಾತನಾಡಿ, ಮತದಾರ ಪಟ್ಟಿಯಲ್ಲಿ ಅನರ್ಹ ಮತದಾರರನ್ನು ತೆಗೆದು ಹಾಕಿ ಅರ್ಹ ಮತದಾರರ ಹೆಸರನ್ನು ಕಡ್ಡಾಯವಾಗಿ ಮತದಾರರ ಪಟ್ಟಿಗೆ ಸೇರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದೇಶದ ೧೮ ರಾಜ್ಯಗಳಲ್ಲಿ ಜೂ.೩೦ರಿಂದ ಜುಲೈ ೨೯ರವರೆಗೆ ಮತದಾರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನಾಗರಿಕರಿಗೆ ಎಸ್.ಐ.ಆರ್ ಬಗ್ಗೆ ಸೂಕ್ತ ಮಾಹಿತಿಯನ್ನು ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳಾದ ಶುಭಂ ಶುಕ್ಲ ಅವರು ತಿಳಿಸಿದ್ದರೆ

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಭಾರತ ಚುನಾವಣಾ ಆಯೋಗ, ಜಿಲ್ಲಾಆಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಜಿಲ್ಲಾ ಸ್ವೀಟ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಮಟ್ಟದಲ್ಲಿಯೂ ಕೂಡ ಜಾಗೃತಿ ಮೂಡಿಸಲು ಸ್ವಯಂ ಸೇವಕರನ್ನು ನೇಮಕ ಮಾಡಲಾಗಿದ್ದು ಎಸ್‌ಐಆರ್‌ ಬಗ್ಗೆ ಗೊಂದಲಗಳು ಉಂಟಾದಲ್ಲಿ ಸಹಾಯವಾಣಿ ಸಂಖ್ಯೆ ೧೯೫೦ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರಿಗೆ ಸಹಾಯಕವಾಗುವಂತೆ ಚುನಾವಣಾ ಆಯೋಗದ ವೈಬ್‌ಸೈಟ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿಯೂ ಸಹ ಎಸ್.ಐ.ಆರ್ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್ ಮಾತನಾಡಿ, ಮತದಾರ ಪಟ್ಟಿಯಲ್ಲಿ ಅನರ್ಹ ಮತದಾರರನ್ನು ತೆಗೆದು ಹಾಕಿ ಅರ್ಹ ಮತದಾರರ ಹೆಸರನ್ನು ಕಡ್ಡಾಯವಾಗಿ ಮತದಾರರ ಪಟ್ಟಿಗೆ ಸೇರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ದೇಶದಾದ್ಯಂತ ಜೂ.೩೦ ರಿಂದ ಜುಲೈ.೨೯ ರವರೆಗೆ SIಖ ನಡೆಯುತ್ತಿದ್ದು, ಜಿಲ್ಲೆಯಲ್ಲಿ ೧೯೬೮ ಬಿ.ಎಲ್.ಓ ಗಳನ್ನು ನೇಮಕ ಮಾಡಲಾಗಿದೆ ಪ್ರತಿಯೊಬ್ಬ ಮತದಾರರ ಮನೆಗಳಿಗೆ ಭೇಟಿ ನೀಡಿ ನಿಗದಿತ ನಮೂನೆಯನ್ನು ಒಬ್ಬ ಮತದಾರರಿಗೆ ದ್ವಿಪ್ರತಿ ನಮೂನೆಯನ್ನು ನೀಡಲಾಗುತ್ತಾದೆ, ಭರ್ತಿ ಮಾಡಿದ ನಮೂನೆಯ ಒಂದು ಪ್ರತಿಯನ್ನು ಮತದಾರರಿಗೆ ನೀಡಬೇಕು ಹಾಗೂ ಇನ್ನುಂದು ನಮೂನೆಯನ್ನು ಬಿ.ಎಲ್.ಒ ಗಳಿಗೆ ನೀಡಬೇಕು ಮಾಹಿತಿಯನ್ನು ಪರೀಶಿಲಿಸಿದ ನಿಗದಿತ ನಮೂನೆಯು ಮತದಾರ ಪಟ್ಟಿಗೆ ಸೇರ್ಪಡೆಯಾಗುತ್ತಾದೆ. ಯಾವ ಮತದಾರರ ಹೆಸರು ಕರಡು ಮತದಾರರ ಪಟ್ಟಿಗೆ ಸೇರ್ಪಡೆಯಾಗದೇ ಇರುವ ಮತದಾರರಿಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳು ಕಾಲಾವಕಾಶವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಸೌರಭ ಕುಮಾರ್‌ ಅವರು ಮಾತನಾಡಿ, ಮತದಾನ ಅಧಿಕಾರ ಒಂದು ಸಂವಿಧಾನಿಕ ಅಧಿಕಾರವಾಗಿದ್ದು ಅರ್ಹ ಮತದಾರರನ್ನು ಮತದಾನ ಪಟ್ಟಿಗೆ ಸೇರ್ಪಡೆ ಮಾಡಿ ಅನರ್ಹ ಮತದಾರರನ್ನು ಮತದಾನ ಪಟ್ಟಿಯಿಂದ ಕೈ ಬಿಡುವ ಮೂಲಕ ಉತ್ತಮ ಮತದಾರ ಪಟ್ಟಿಯನ್ನು ರಚನೆ ಮಾಡಬಹುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ತಹಸೀಲ್ದಾರ್‌ ಗೀತಾ, ಮಹಾನಗರ ಪಾಲಿಕೆಯ ಆಯುಕ್ತರಾದ ಕೃ?ಮೂರ್ತಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು-ಮಂಗಳೂರು ಚತುಷ್ಪಥ ರೈಲ್ವೆ ಮಾರ್ಗ
ಎಂಎಂಹಿಲ್ಸ್‌ನಿಂದ ಬರುತ್ತಿದ್ದ ಸಾರಿಗೆ ಬಸ್ಸಿನ ಟೈಯರ್‌ ಸ್ಫೋಟ: ಇಬ್ಬರು ಬಲಿ, 40 ಗಾಯ