ಕಾರವಾರ: ಪ್ರತಿ ಮಗುವಿಗೂ ಶಿಕ್ಷಣದ ಅವಶ್ಯಕತೆ ಅತ್ಯಗತ್ಯವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಗಣಪತಿ ಡಿ. ಉಳ್ವೇಕರ್ ಹೇಳಿದರು.
ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ, ಅವರಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಸಹಕರಿಸಬೇಕು. ಮಕ್ಕಳ ದೈಹಿಕ, ಮಾನಸಿಕ ಅಭಿವೃದ್ಧಿಗೆ ಎಲ್ಲ ರೀತಿಯಲ್ಲೂ ಪ್ರೋತ್ಸಾಹಿಸಬೇಕು ಎಂದರು.
ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಪ್ರಪಂಚದ ಎಲ್ಲ ರೀತಿಯ ಜ್ಞಾನವನ್ನು ಕೊಡುವಂತಹ ಅಗತ್ಯ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆಯಿಂದ ಮಾಡಲಾಗುತ್ತಿದೆ. ಶಿಕ್ಷಣಕ್ಕೆ ಯಾವುದೇ ರೀತಿಯಲ್ಲಿ ಕೊರತೆಯಾಗದಂತೆ ನೋಡಿಕೊಳ್ಳಲು ಸರ್ಕಾರ, ಜಿಲ್ಲಾಡಳಿತ, ಶಿಕ್ಷಣ ಇಲಾಖೆ ನಿಮ್ಮೊಂದಿಗೆ ಇದೆ. ಉತ್ತಮ ಶಿಕ್ಷಣ ಪಡೆದು ಶಾಲೆಯ ಗೌರವ ಹೆಚ್ಚಿಸುವುದರ ಜೊತೆಯಲ್ಲಿ ಜಿಲ್ಲೆಯನ್ನು ಉನ್ನತ ಮಟ್ಟಕ್ಕೆ ತರಬೇಕೆಂದು ಎಂದು ಮಕ್ಕಳಿಗೆ ತಿಳಿಹೇಳಿದರು.ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಅಮದಳ್ಳಿ ಗ್ರಾಪಂ ಅಧ್ಯಕ್ಷ ಪುರುಷೋತ್ತಮ ಗೌಡ, ಸದಸ್ಯರು, ಎಸ್‌ಡಿಎಂಸಿ ಸದಸ್ಯರು, ಬಿಇಒ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ಪಾಲಕರು ಇದ್ದರು.