ಎಕರೆಗೆ ₹ 25000 ಬರ ಪರಿಹಾರ ನೀಡಿ

KannadaprabhaNewsNetwork |  
Published : Nov 03, 2026, 02:15 AM IST
ಬರ ಪರಿಹಾರಕ್ಕೆ ಆಗ್ರಹಿಸಿ ವಿವಿಧ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಕುಂದಗೋಳ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಸರ್ಕಾರ ಘೋಷಿಸಿರುವ ₹2,500 ಪರಿಹಾರ ಯಾವುದಕ್ಕೂ ಸಾಲದು. ರೈತರ ಸಂಕಷ್ಟಕ್ಕೆ ಸ್ಪಂದಿಸಿ ಸಮರ್ಪಕ ಪರಿಹಾರ ಒದಗಿಸಬೇಕು.

ಕುಂದಗೋಳ:

ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಒಂದು ತಿಂಗಳು ಕಳೆದರೂ ರೈತರಿಗೆ ಪರಿಹಾರ ಬಿಡುಗಡೆಯಾಗಿಲ್ಲ. ಈ ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಎಕರೆಗೆ ತಲಾ ₹ 25000 ಪರಿಹಾರ ನೀಡಲು ಒತ್ತಾಯಿಸಿ ವಿವಿಧ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ತಹಸೀಲ್ದಾರ್ ರಾಜು ಮಾವರಕರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ರೈತ ಮುಖಂಡರು, ಸರ್ಕಾರ ಘೋಷಿಸಿರುವ ₹2,500 ಪರಿಹಾರ ಯಾವುದಕ್ಕೂ ಸಾಲದು. ರೈತರ ಸಂಕಷ್ಟಕ್ಕೆ ಸ್ಪಂದಿಸಿ ಸಮರ್ಪಕ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

ಬೆಳೆವಿಮೆ ಬಿಡುಗಡೆ, ತಾಲೂಕಿನಲ್ಲಿ ಎರಡು ಮೇವು ಬ್ಯಾಂಕ್ ಹಾಗೂ ಗೋಶಾಲೆ ಆರಂಭಿಸಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ಗಂಟೆ ವಿದ್ಯುತ್ ಪೂರೈಸಬೇಕು. ಸಾಲಮನ್ನಾ ಮಾಡಿ, ನಮ್ಮ ಹೊಲ-ನಮ್ಮ ದಾರಿ ಯೋಜನೆ ಜಾರಿಗೊಳಿಸಬೇಕು ಎಂದು ಮನವಿ ಮಾಡಲಾಯಿತು. ಇದಲ್ಲದೆ, ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಹಾಗೂ ವಿದ್ಯಾರ್ಥಿಗಳ ಸಂಚಾರದ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳನ್ನು ಓಡಿಸಬೇಕು ಎಂದು ಒತ್ತಾಯಿಸಿದರು.

15 ದಿನ ಗಡುವು:

ರೈತರ ಬೇಡಿಕೆಗಳನ್ನು 15 ದಿನಗಳೊಳಗೆ ಈಡೇರಿಸದಿದ್ದರೆ ಹುಬ್ಬಳ್ಳಿ-ಲಕ್ಷ್ಮೇಶ್ವರ ಹೆದ್ದಾರಿ ಹಾಗೂ ರಾಮನಕೊಪ್ಪ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಲಾಗುವುದು ಎಂದು ರೈತ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ವೇಳೆ ಕಲ್ಯಾಣಪುರ ಮಠದ ಅಭಿನವ ಬಸವಣ್ಣಜ್ಜನವರು, ಶಿವಾನಂದ ಪೂಜಾರ, ಈಶ್ವರ ಜಾಯನಗೌಡ್ರ, ಹೇಮನಗೌಡ ಪಾಟೀಲ, ವಿ.ಎಸ್. ಕಂಠೆಪ್ಪಗೌಡರ, ಮಲ್ಲಿಕಾರ್ಜುನ ಕುನ್ನೂರು, ಮಾಣಿಕ್ಯ ಚಿಲ್ಲೂರ, ಯಲ್ಲಪ್ಪ ದುಂದುರು, ಬಸವರಾಜ ಸಂಬೋಜಿ, ಬಸವರಾಜ ರೊಟ್ಟಿ ಸೇರಿ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ